ಕಾರವಾರ: ರಾಜ್ಯದಲ್ಲಿ ಲಾಕ್ ಡೌನ್ ಮುಂದುವರಿಸಿದ್ರೆ ಒಳ್ಳೆಯದು. ಈಗಿನ ಪರಿಸ್ಥಿಯನ್ನು ನೋಡಿದ್ರೆ ಲಾಕ್ ಡೌನ್ ಮುಂದುವರಿಕೆ ಉತ್ತಮ. ಎರಡನೇ ಹಂತದ ಲಾಕ್ ಡೌನ್ ಘೋಷಣೆ ಆಗುತ್ತಿದ್ದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ಯಾಕೇಜ್ ಘೋಷಣೆ ಮಾಡುತ್ತಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
Advertisement
ಭಟ್ಕಳದಲ್ಲಿ ಚಂಡಮಾರುತದಿಂದ ಹಾನಿಗೊಳಗಾದ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಸದ್ಯ ಪರಿಸ್ಥಿತಿ ಅವಲೋಕಿಸಿ ಪ್ಯಾಕೇಜ್ ಘೋಷಣೆ ಮಾಡುತ್ತಾರೆ. ಹಳ್ಳಿಗಳಿಗೆ ಸೋಂಕು ವ್ಯಾಪಿಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಚಿವ ಅಶೋಕ್, ಪ್ರತಿ ಹಳ್ಳಿಗಳಿಗೂ ಅಧಿಕಾರಿಗಳ ತಂಡ ಕಳಿಸಿ ಸೋಂಕು ತಡೆಯಲು ಪ್ರಯತ್ನ ಮಾಡಲಾಗುತ್ತಿದೆ.
Advertisement
Advertisement
ಹಳ್ಳಿಗಳಲ್ಲಿ ಅತೀ ಹೆಚ್ಚು ಟೆಸ್ಟಿಂಗ್ ಮಾಡಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಹಳ್ಳಿಗಳಲ್ಲಿ ಹೋಂ ಐಸೋಲೇಷನ್ ಇದ್ದ ಸೋಂಕಿತರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಲು ಈ ನಿಯಮ ಮಾಡಲಾಗಿದೆ. ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹಿನ್ನಲೆ ಹೆಚ್ಚು ಹೆಚ್ಚು ಮಕ್ಕಳ ಆಸ್ಪತ್ರೆ ತೆರೆಯಲು ನಿರ್ಧಾರ ಮಾಡಲಾಗಿದೆ. ಮೂರನೇ ಅಲೆ ತಡೆಯಲು ಎಲ್ಲ ರೀತಿಯಲ್ಲಿ ಸರ್ಕಾರ ಸನ್ನದ್ಧವಾಗಿದೆ ಎಂದರು.
Advertisement