ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದವ ಭೀಕರವಾಗಿ ಹತ್ಯೆ

Public TV
1 Min Read
bidar crime

ಬೀದರ್: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಿದ ಘಟನೆ ಬೀದರ್ ನ ಹೊರ ವಲಯದ ಕೋಟೆ ಬಳಿ ನಡೆದಿದೆ.

ಕೊಲೆಯಾದ ದುರ್ದೈವಿ ನಾರಾಯಣ್ ರಾವ್(61) ಆಗಿದ್ದಾನೆ. ನಾಪತ್ತೆಯಾಗಿದ್ದ ವ್ಯಕ್ತಿ ಶವ ಪತ್ತೆಯಾಗಿದೆ.

Bidar crime 1

ಎರಡು ದಿನಗಳ ಹಿಂದೆ ನಾರಾಯಣ್ ರಾವ್ ನಾಪತ್ತೆಯಾಗಿದ್ದರು. ಈ ಬಗ್ಗೆ ಕುಟುಂಬಸ್ಥರು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ವ್ಯಕ್ತಿ ನಾಪತ್ತೆಯಾದ ದಿನವೇ ದುಷ್ಕರ್ಮಿಗಳು ವ್ಯಕ್ತಿಯನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

Bidar crime 2

ವ್ಯಕ್ತಿಯ ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಟೌನ್ ಪೊಲೀಸರು ಭೇಟಿ, ಪರಿಶೀಲನೆ ಮಾಡುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *