ಕಲಬುರಗಿ: ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ನಾಲ್ಕು ಜನ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಲಾಡ್ಲಾಪುರ ಗ್ರಾಮದ ಮರೆಪ್ಪ (50), ಬಸ್ಸಪ್ಪ (32) ಮತ್ತು ಅಲ್ಲೂರು ಗ್ರಾಮದ ದೇವೇಂದ್ರ (50) ಹಾಗೂ ಮಲ್ಲಪ್ಪ ರಾಯಪ್ಪ (35) ಎಂದು ಗುರುತಿಸಲಾಗಿದೆ. ಎರಡು ಬೈಕುಗಳ ಮೇಲೆ ಮೂರು ಮೂರು ಜನ ಹೋಗುತ್ತಿದದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಆರು ಜನರಲ್ಲಿ ನಾಲ್ವರು ಸಾವನ್ನಪ್ಪಿದ್ದು, ಉಳಿದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಾಡಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.
ಬೈಕಿನಲ್ಲಿ ಮೂರು ಜನರನ್ನು ಕೂರಿಸಿಕೊಂಡು ಇಬ್ಬರು ಸವಾರರು ಜೋರಾಗಿ ಬಂದಿದ್ದಾರೆ. ಪರಿಣಾಮ ಬೈಕುಗಳು ನಿಯಂತ್ರಣಕ್ಕೆ ಸಿಗದೇ ಮುಖಾಮುಖಿ ಡಿಕ್ಕಿಯಾಗಿವೆ. ಹೀಗಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.