ಬೆಂಗಳೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ.
Advertisement
ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯನವರಿಗೆ ಎರಡನೇ ಬಾರಿಗೆ ನಡೆದ ಪರೀಕ್ಷೆಯಲ್ಲೂ ನೆಗೆಟಿವ್ ಬಂದಿದ್ದು, ಈ ಹಿನ್ನೆಲೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
Advertisement
ಮೂತ್ರ ಪಿಂಡದ ಸೋಂಕಿನ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಆಗಸ್ಟ್ 3ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು. ಹೀಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಹತ್ತು ದಿನಗಳಿಂದ ಮಣಿಪಾಲ್ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಇದೀಗ ಸಂಪೂರ್ಣ ಗುಣಮುಖರಾಗಿದ್ದು ಡಿಸ್ಚಾರ್ಜ್ ಆಗಿದ್ದಾರೆ.
Advertisement
Advertisement
ಆಸ್ಪತ್ರೆಯಿಂದ ಹೊರಡುವ ಮುನ್ನ ಸಿಬ್ಬಂದಿಗೆ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ. ಅಲ್ಲದೆ ಇದೇ ವೇಳೆ ಆಸ್ಪತ್ರೆ ಸಿಬ್ಬಂದಿ ಸಹ ಸಿದ್ದರಾಮಯ್ಯನವರಿಗೆ ಹೀ ಗುಚ್ಚ ನೀಡಿ ಬೀಳ್ಕೊಟ್ಟಿದ್ದಾರೆ. ಸಿದ್ದರಾಮಯ್ಯ ಪುತ್ರ, ಶಾಸಕ ಯತೀಂದ್ರಗೂ ನೆಗೆಟಿವ್ ವರದಿ ಬಂದ ಹಿನ್ನೆಲೆ ಅವರೂ ಸಹ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ತಂದೆಯನ್ನು ಕರೆದುಕೊಂಡು ಮನೆಗೆ ಆಗಮಿಸಿದ್ದಾರೆ.
ಇದೇ ವೇಳೆ ಗುಣಮುಖರಾಗುವಂತೆ ಹಾರೈಸಿದ ನಾಡಿನ ಜನತೆ ಸೇರಿದಂತೆ ಎಲ್ಲರಿಗೂ ಸಿದ್ದರಾಮಯ್ಯ ಧನ್ಯವಾದಗಳನ್ನು ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ಅವರು ಮನೆಯಲ್ಲಿ ಒಂದು ವಾರ ವಿಶ್ರಾಂತಿ ಪಡೆಯಲಿದ್ದಾರೆ. ಸಿದ್ದರಾಮಯ್ಯ ಡಿಸ್ಚಾರ್ಜ್ ಆಗುವ ಸುದ್ದಿ ತಿಳಿದ ಶಾಸಕ ಜಮೀರ್ ಅಹ್ಮದ್ ಖಾನ್ ಆಸ್ಪತ್ರೆಗೆ ತೆರಳಿದ್ದು, ಆಸ್ಪತ್ರೆಯಿಂದಲೇ ಸಿದ್ದರಾಮಯ್ಯ ಜೊತೆಗೆ ಮನೆಗೆ ತೆರಳಿದ್ದಾರೆ.