-ಧಾರ್ಮಿಕ ಕ್ಷೇತಗಳಲ್ಲಿ ಪ್ರಸಾದ, ತೀರ್ಥ ನೀಡುವಂತಿಲ್ಲ
ನವದೆಹಲಿ: ಕೇಂದ್ರ ಸರ್ಕಾರ ಎಲ್ಲಾ ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಕಂಟೈನ್ಮೆಂಟ್ ಝೋನ್‍ಗಳಲ್ಲಿ ಹೊರತುಪಡಿಸಿ ಉಳಿದೆಲ್ಲಾ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿ ನೀಡಿದೆ. ಜೂನ್ 8ರಿಂದ ಮಂದಿರ, ಮಸೀದಿ, ಚರ್ಚ್ ತೆರೆಯಲಿದೆ.
ಕೇಂದ್ರದ ಮಾರ್ಗಸೂಚಿಯಂತೆ ಧಾರ್ಮಿಕ ಕ್ಷೇತಗಳಲ್ಲಿ ಪ್ರಸಾದ, ತೀರ್ಥ ನೀಡುವಂತಿಲ್ಲ ಎಂದು ತಿಳಿಸಿದ್ದು, 65 ವರ್ಷ ಮೇಲ್ಪಟ್ಟ ಹಾಗೂ 10 ವರ್ಷದೊಳಗಿನ ಮಕ್ಕಳನ್ನು ಧಾರ್ಮಿಕ ಕೇಂದ್ರಗಳಿಗೆ ಪ್ರವೇಶ ನಿಷೇಧ ಮಾಡಲಾಗಿದೆ. ಕಡ್ಡಾಯವಾಗಿ ಆರು ಅಡಿ ಅಂತರ ಕಾಯ್ದುಕೊಳ್ಳಬೇಕು. ಫೇಸ್ ಕವರ್ ಮತ್ತು ಮಾಸ್ಕ್ ಧರಿಸುವುದು ಕಡ್ಡಾಯ ಮಾಡಲಾಗಿದೆ. ಸಾಮೂಹಿಕ ಪ್ರಾರ್ಥನೆ ಬದಲಾಗಿ, ವೈಯಕ್ತಿಕ ಪೂಜೆಗಳಿಗೆ ಆದ್ಯತೆ ನೀಡಬೇಕು ಎಂದು ತಿಳಿಸಿದೆ.
Advertisement
Advertisement
ಧಾರ್ಮಿಕ ಕ್ಷೇತ್ರವನ್ನು ನಿಯಮಿತವಾಗಿ ಸ್ವಚ್ಛ ಮಾಡುವುದು, ನಿಯಮಿತವಾಗಿ ಕೈ ಸ್ಯಾನಿಟೈಸ್ ಅಥವಾ ಸಾಬೂನಿಂದ ಕೈ ತೊಳೆದುಕೊಳ್ಳಲು ತಿಳಿಸಿದೆ. ಕೆಮ್ಮುವಾಗ ಸೀನುವಾಗ ಟಿಶು, ಕರವಸ್ತ್ರ ಬಳಸಿದ ಬಳಿಕ ಸೂಕ್ತವಾಗಿ ವಿಲೇವಾರಿ ಮಾಡಬೇಕು. ಧಾರ್ಮಿಕ ಕೇಂದ್ರ ಪ್ರವೇಶಕ್ಕೂ ಮುನ್ನ ಥರ್ಮಲ್ ಸ್ಕ್ರೀನಿಂಗ್ ಮತ್ತು ಕೈ ಸ್ವಚ್ಛ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ರೋಗದ ಗುಣಲಕ್ಷಣಗಳ ಇಲ್ಲದವರಿಗೆ ಮಾತ್ರ ಪ್ರವೇಶ ನೀಡಲು ಸೂಚನೆ ನೀಡಿದೆ. ಧಾರ್ಮಿಕ ಕ್ಷೇತ್ರಗಳಲ್ಲಿ ಕೊರೊನಾ ಮುನ್ನೆಚ್ಚರಿಕೆಗಳ ಬಗ್ಗೆ ಭಿತ್ತಿ ಪತ್ರ ಪೋಸ್ಟರ್ ಪ್ರದರ್ಶನ ಮಾಡುವುದು. ವಿಡಿಯೋ, ಆಡಿಯೋಗಳನ್ನು ಪ್ಲೇ ಮಾಡುವುದು ಕಡ್ಡಾಯ ಮಾಡಲಾಗಿದೆ.
Advertisement
ಧಾರ್ಮಿಕ ಕೇಂದ್ರಗಳಲ್ಲಿ ಪ್ರವೇಶವನ್ನು ನಿಯಂತ್ರಿಸಣ, ಸಮಯದ ಆಧಾರದಲ್ಲಿ ಶಿಫ್ಟ್ ಗಳನ್ನು ಮಾಡಲು ತಿಳಿಸಿದೆ. ಅಲ್ಲದೇ ಶೂ ಚಪ್ಪಲಿಗಳನ್ನು ಭಕ್ತರು ವಾಹನದಲ್ಲಿ ಇಟ್ಟುಕೊಳ್ಳಬೇಕು, ಧಾರ್ಮಿಕ ಕ್ಷೇತ್ರದ ಒಳ ತರುವಂತಿಲ್ಲ, ಅನಿವಾರ್ಯವಾದರೆ ಚಪ್ಪಲಿಗಳನ್ನು ಪ್ರತ್ಯೇಕಿಸಿ ಇಡಬೇಕು ಎಂದು ಸೂಚಿಸಿದೆ.
Advertisement
ಧಾರ್ಮಿಕ ಕ್ಷೇತ್ರದೊಳಗೆ ಸಾಮಾಜಿಕ ಅಂತರಕ್ಕೆ ಸೂಕ್ತ ಮಾರ್ಕ್ ಮಾಡುವುದು. ಧಾರ್ಮಿಕ ಕೇಂದ್ರದ ಆವರಣದೊಳಗಿನ ಅಂಗಡಿಗಳು, ಹೋಟೆಲ್, ಪಾರ್ಕಿಂಗ್ ಪ್ರದೇಶದಲ್ಲಿ ಅಂತರ ಕಾಯ್ದುಕೊಳ್ಳಬೇಕು. ಧಾರ್ಮಿಕ ಸ್ಥಳಗಳ ಪ್ರವೇಶ ಮತ್ತು ನಿರ್ಗಮನ ಪ್ರತ್ಯೇಕವಾಗಿಡುವ ಸಲಹೆಯನ್ನು ನೀಡಿದೆ. ಯಾವುದೇ ಸ್ಥಳದಲ್ಲಿ ಎಸಿಗಳ ಬಳಕೆ ಬಿಟ್ಟು ನೈಸರ್ಗಿಕ ಗಾಳಿಗೆ ಆದ್ಯತೆ ನೀಡಬೇಕು ಎಂದು ತಿಳಿಸಿದೆ.