ನವದೆಹಲಿ: ವಂಚನೆ ಪ್ರಕರಣಗಳು ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಎಲ್ಲ ಸಹಕಾರಿ ಬ್ಯಾಂಕುಗಳು ಇನ್ನು ಮುಂದೆ ರಿಸರ್ವ್ ಬ್ಯಾಂಕ್ ಅಡಿಯಲ್ಲಿ ಬರಲಿವೆ.
ಇಂದು ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸಭೆ ನಡೆಯಿತು. ಈ ವೇಳೆ ಕ್ಯಾಬಿನೆಟ್ ಸುಗ್ರೀವಾಜ್ಞೆ ಹೊರಡಿಸಲು ಒಪ್ಪಿಗೆ ನೀಡಿತು.
Advertisement
ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಮಸೂದೆ – 2020 ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ಮುಂದಾಗಿತ್ತು. ಆದರೆ ಕೋವಿಡ್ 19ನಿಂದಾಗಿ ಅಧಿವೇಶನವನ್ನು ಮುಂದೂಡಿದ್ದರಿಂದ ಮಸೂದೆ ಪಾಸ್ ಆಗಿರಲಿಲ್ಲ. ಹೀಗಾಗಿ ಸಹಕಾರಿ ಬ್ಯಾಂಕುಗಳಲ್ಲಿ ಠೇವಣಿ ಇರಿಸಿರುವ ಗ್ರಾಹಕರ ಹಿತವನ್ನು ಕಾಯಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.
Advertisement
Advertisement
ವಿಡಿಯೋ ಕನ್ಫರೆನ್ಸ್ ಮೂಲಕ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಕಾಶ್ ಜಾವಡೇಕರ್, ಇನ್ನು ಮುಂದೆ 1,482 ನಗರ ಸಹಕಾರ ಬ್ಯಾಂಕುಗಳು ಮತ್ತು 58 ರಾಜ್ಯ ಸಹಕಾರಿ ಬ್ಯಾಂಕುಗಳು ಆರ್‌ಬಿಐ ನಿಗಾದಲ್ಲಿ ಕೆಲಸ ಮಾಡಲಿದೆ ಎಂದು ಎಂದು ತಿಳಿಸಿದರು.
Advertisement
ರಾಷ್ಟ್ರಪತಿಗಳು ಸುಗ್ರೀವಾಜ್ಞೆಗೆ ಸಹಿ ಹಾಕಿದ ದಿನದಿಂದ ಇದು ಅಧಿಕೃತವಾಗಿ ಜಾರಿಗೆ ಬರಲಿದೆ. ಕಳೆದ ವರ್ಷ ಪಂಜಾಬ್ ಮಹಾರಾಷ್ಟ್ರ ಸಹಕಾರ ಬ್ಯಾಂನಲ್ಲಿ ನಡೆದ ಅವ್ಯವಹಾರ ಬೆಳಕಿಗೆ ಬಂದ ನಂತರ ಗ್ರಾಹಕರ ಹಿತವನ್ನು ಸರ್ಕಾರ ಕಾಪಾಡಬೇಕು ಎಂಬ ಆಗ್ರಹ ಕೇಳಿಬಂದಿತ್ತು. ಈ ವರ್ಷದ ಬಜೆಟ್‌ನಲ್ಲಿ ಹಣಕಾಸು ಸಚಿವೆ ಆರ್‌ಬಿಐ ಅಡಿಯಲ್ಲಿ ಸಹಕಾರಿ ಬ್ಯಾಂಕುಗಳು ತರಲಾಗುವುದು ಎಂದು ತಿಳಿಸಿದ್ದರು.
The decision to bring 1,540 cooperative banks under RBI's supervision will give an assurance to more than 8.6 crore depositors in these banks that their money amounting to Rs 4.84 lakh crore will stay safe: Union Minister Prakash Javadekar https://t.co/IAy0GN98el
— ANI (@ANI) June 24, 2020