ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಡೀಲ್ನಲ್ಲಿ ನಟಿ ರಾಗಿಣಿಯನ್ನು ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರ ಮೇಲೆ ಪ್ರಭಾವಿ ರಾಜಕಾರಣಿಯೊಬ್ಬರು ಒತ್ತಡ ಹಾಕುತ್ತಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಡ್ರಗ್ಸ್ ದಂಧೆಯಲ್ಲಿ ಕೇವಲ ಸ್ಯಾಂಡಲ್ವುಡ್ ಸ್ಟಾರ್ಗಳು ಮಾತ್ರವಲ್ಲ ರಾಜಕೀಯ ನಾಯಕರ ಪುತ್ರರು ಭಾಗಿಯಾಗಿದ್ದಾರೆ ಎನ್ನುವುದು ಡ್ರಗ್ ಪೆಡ್ಲರ್ಗಳ ಮೊಬೈಲ್ನಲ್ಲಿರುವ ವಿಡಿಯೋದಲ್ಲಿ ಗೊತ್ತಾಗಿದೆ. ಇದನ್ನೂ ಓದಿ: ಡ್ರಗ್ಗೆ ಚಿಕ್ಕನ್ ಪೀಸ್ ಎನ್ನುತ್ತಿದ್ದ ರಾಗಿಣಿ – ತುಪ್ಪದ ಬೆಡಗಿ ಕೋಡ್ವರ್ಡ್ ರೀವಿಲ್
ಈಗ ರಾಗಿಣಿಯನ್ನು ವಿಚಾರಣೆಗೆ ಒಳಪಡಿಸುತ್ತಿರುವಾಗಲೇ ಪ್ರಭಾವಿ ರಾಜಕಾರಣಿಯೊಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕಿದ್ದಾರೆ. ಎಷ್ಟು ವಿಚಾರಣೆ ಮಾಡುತ್ತಿದ್ದೀರಿ? ಬೇಗ ಕಳುಹಿಸಬಹುದಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಈಗ ವಿಚಾರಣೆ ನಡೆಯುತ್ತಿದೆ. ವಿಚಾರಣೆ ಮುಗಿದ ಬಳಿಕ ಗೃಹ ಸಚಿವರಿಗೆ ಮಾಹಿತಿ ಹಂಚಿಕೊಳ್ಳುವುದಾಗಿ ಅಧಿಕಾರಿ ತಿಳಿಸಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದುಬಂದಿದೆ.