ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಕಲ್ಪಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಹತ್ವದ ನಿರ್ಧಾರ ಕೈಗೊಂಡಿದೆ.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯಾದ್ಯಂತ ಉಚಿತ ಬಸ್ ವ್ಯವಸ್ಥೆಯನ್ನು ಕರ್ನಾಟಕ ಸಾರಿಗೆ ಇಲಾಖೆ ಕಲ್ಪಿಸಿದೆ. ಈ ಮೂಲಕ ವಿದ್ಯಾರ್ಥಿಗಳು ನಿಗಮದ ಸಾಮಾನ್ಯ ಹಾಗೂ ವೇಗದೂತ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿ ಪರೀಕ್ಷಾ ಕೇಂದ್ರಕ್ಕೆ ತೆರಳಬಹುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
Advertisement
Advertisement
ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜೂನ್ 25ರಿಂದ ಜುಲೈ 4ರವರಗೂ ನಡೆಯಲಿವೆ. ಕೊರೊನಾ ಕಾರಣದಿಂದಾಗಿ ಮುಂದೂಡಲ್ಪಟ್ಟ ಪರೀಕ್ಷೆಗೆ ತೆರಳುವುದು ವಿದ್ಯಾರ್ಥಿಗಳ ಪಾಲಿಗೆ ಸಮಸ್ಯೆಯಾಗಿತ್ತು. ಆದರೆ ಈಗ ಸಾರಿಗೆ ನಿಗಮವು ವಿದ್ಯಾರ್ಥಿಗಳಿಗೆ ಅಭಯ ನೀಡಿದೆ.
Advertisement
ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪತ್ರ (ಹಾಲ್ ಟಿಕೆಟ್)ಅನ್ನು ಬಸ್ ಸಿಬ್ಬಂದಿಗೆ ತೋರಿಸಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಬಹುದು. ಪರೀಕ್ಷೆ ಮುಗಿಸಿ ಮನೆಗೆ ತೆರಳಲು ಉಚಿತವಾಗಿ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.