Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಹೇಗೆ ನಡೆಯುತ್ತೆ? ಪಿಯುಸಿ ವಿದ್ಯಾರ್ಥಿಗಳು ಹೇಗೆ ಪಾಸ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಸ್‍ಎಸ್‍ಎಲ್‍ಸಿ ಪರೀಕ್ಷೆ ಹೇಗೆ ನಡೆಯುತ್ತೆ? ಪಿಯುಸಿ ವಿದ್ಯಾರ್ಥಿಗಳು ಹೇಗೆ ಪಾಸ್?

Bengaluru City

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಹೇಗೆ ನಡೆಯುತ್ತೆ? ಪಿಯುಸಿ ವಿದ್ಯಾರ್ಥಿಗಳು ಹೇಗೆ ಪಾಸ್?

Public TV
Last updated: June 4, 2021 1:24 pm
Public TV
Share
5 Min Read
SSLC PUC 3
SHARE

– ಪಿಯುಸಿ ಪರೀಕ್ಷೆ ರದ್ದು, ಎರಡು ದಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ
– ಜುಲೈ ಕೊನೆಯಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ
– ಜೂನ್ 25ರ ಹೊತ್ತಿಗೆ ಪಿಯು ಗ್ರೇಡಿಂಗ್ ಫಲಿತಾಂಶ

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ವರ್ಷ ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದು ಮಾಡಲು ತೀರ್ಮಾನಿಸಲಾಗಿದೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ಸೂಕ್ತ ದಿನಾಂಕಗಳಂದು ಎರಡು ದಿನಗಳ ಮಟ್ಟಿಗೆ ಅತ್ಯಂತ ಸರಳೀಕರಣಗೊಳಿಸಿ ನಡೆಸಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಸಮಾಜದ ವಿವಿಧ ಸ್ತರಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಸಮಾಜದ ವಿವಿಧ ಗಣ್ಯ ವ್ಯಕ್ತಿಗಳು, ಹಿಂದಿನ ಶಿಕ್ಷಣ ಸಚಿವರು, ಮಾಧ್ಯಮದ ಮಿತ್ರರು, ಸಚಿವ ಸಂಪುಟದ ಸಹೋದ್ಯೋಗಿಗಳು, ಮಾನ್ಯ ಮುಖ್ಯಮಂತ್ರಿಗಳೂ ಸೇರಿದಂತೆ ಹಲವರೊಂದಿಗೆ ಈ ಕುರಿತು ಸಮಾಲೋಚನೆ ಮಾಡಲಾಗಿದೆ ಎಂದರು.

SSLC EXAM 1

ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆ ಆಗಬಾರದು, ಅದೇ ಸಂದರ್ಭದಲ್ಲಿ ಅವರ ಆರೋಗ್ಯಕ್ಕೂ ಸಮಸ್ಯೆಯಾಗಬಾರದೆನ್ನುವ ಮಧ್ಯಮ ಪಥವೊಂದನ್ನು ಹುಡುಕಲು ಸಾಕಷ್ಟು ಪ್ರಯತ್ನ ಪಟ್ಟಿದ್ದೇವೆ. ಪರೀಕ್ಷೆ ನಡೆಸುವುದು ನಮ್ಮ ಪ್ರತಿಷ್ಠೆಯಾಗಬಾರದು ಆದರೆ ನಮ್ಮ ನಿಲುವು ಮಕ್ಕಳನ್ನು ಇಕ್ಕಟ್ಟಿಗೆ ಸಿಕ್ಕಿಸಬಾರದೆನ್ನುವ ಪ್ರಜ್ಞೆ ನಮ್ಮ ನಿರ್ಧಾರಗಳನ್ನು ನಿಯಂತ್ರಿಸಿದೆ ಎಂದು ಅವರು ಹೇಳಿದರು.

ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ 2020-21ನೇ ಸಾಲಿನಲ್ಲಿ ದಾಖಲಾಗಿರುವ ದ್ವಿತೀಯ ಪಿಯುಸಿ ಹೊಸ ವಿದ್ಯಾರ್ಥಿಗಳ ಫಲಿತಾಂಶವನ್ನು ಅವರು ಈ ಹಿಂದೆ ಪ್ರಥಮ ಪಿಯುಸಿಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಅಂಕಗಳನ್ನು ನೀಡಿ ಪ್ರಕಟಗೊಳಿಸಲು ತೀರ್ಮಾನಿಸಲಾಗಿದೆ. ಈ ಕುರಿತಂತೆ ಇಲಾಖೆಯು ಮುಂದಿನ ದಿನಗಳಲ್ಲಿ ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಲಿದೆ ಹಾಗೂ ಜೂನ್ ಮಾಸಾಂತ್ಯಕ್ಕೆ ಫಲಿತಾಂಶ ಪ್ರಕಟಣೆ ಮಾಡಲಿದೆ ಎಂದು ಸುರೇಶ್ ಕುಮಾರ್ ಹೇಳಿದರು.

UDP SSLC EXAMS 4

ಈ ರೀತಿ ನೀಡಿದ ಫಲಿತಾಂಶವು ಯಾವುದೇ ವಿದ್ಯಾರ್ಥಿಗೆ ತೃಪ್ತಿಕರವಾಗದೇ ಇದ್ದಲ್ಲಿ ಕೋವಿಡ್ ಅಲೆ ನಿಯಂತ್ರಣಕ್ಕೆ ಬಂದ ನಂತರ ಇಲಾಖೆಯು ನಡೆಸುವ ಪರೀಕ್ಷೆಗೆ ಹಾಜರಾಗಬಹುದು ಎಂದ ಸಚಿವರು ಪ್ರಸ್ತುತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲು ನೋಂದಾಯಿಸಿಕೊಂಡ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಖಾಸಗಿ ಅಭ್ಯರ್ಥಿಗಳ ಫಲಿತಾಂಶವನ್ನು ಮೇಲೆ ತಿಳಿಸಿದಂತೆ ಪ್ರಕಟಿಸಲು ಯಾವುದೇ ಸ್ಪಷ್ಟ ದಾಖಲೆಗಳು ಲಭ್ಯವಿಲ್ಲದ ಕಾರಣ ಈ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಇಲಾಖೆ ನಡೆಸುವ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ ಎಂದು ಅವರು ತಿಳಿಸಿದರು.

ಎಸ್ಎಸ್ ಎಲ್ ಸಿ ಪರೀಕ್ಷೆಗಳ ವಿವರ:

ಕೋವಿಡ್-19ರ ಪರಿಸ್ಥಿತಿಯಲ್ಲಿ 06 ವಿಷಯಗಳಿಗೆ ಸುದೀರ್ಘ ಅವಧಿಗೆ ಪರೀಕ್ಷೆಗಳನ್ನು ನಡೆಸಿದಲ್ಲಿ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ 06 ದಿನಗಳು ಬರುವುದು ಕಷ್ಟಸಾಧ್ಯವಾಗಿರುತ್ತದೆ. ಹಿಂದಿನ ಸಾಲಿನ ಕಲಿಕಾ ಗುಣಮಟ್ಟದ ಮಾನದಂಡ ನಮ್ಮಲ್ಲಿ ಇಲ್ಲದಿರುವ ಕಾರಣ ಮತ್ತು ಮುಂದಿನ ಉನ್ನತ ಶಿಕ್ಷಣದ ವ್ಯಾಸಂಗಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆಯು ಮುಖ್ಯವೆನ್ನುವ ಸಮಾನ ಅಭಿಪ್ರಾಯಗಳ ಕಾರಣ, ವಿದ್ಯಾರ್ಥಿಗಳ ಸುರಕ್ಷತಾ ಮತ್ತು ಶೈಕ್ಷಣಿಕ ಹಿತದೃಷ್ಟಿಯಿಂದ ಪ್ರಸ್ತುತ ಕೋವಿಡ್-19ರ ಪರಿಸ್ಥಿತಿ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಪ್ರಸ್ತುತ ಸಾಲಿಗೆ ಸರಳೀಕರಿಸಿ ಕೇವಲ ಎರಡು ದಿನಗಳಲ್ಲಿ (ಒಂದು ದಿನ ಕೋರ್ ವಿಷಯಗಳು ಮತ್ತೊಂದು ದಿನ ಭಾಷಾ ವಿಷಯಗಳು) ಪರೀಕ್ಷೆಯನ್ನು ನಡೆಸಲಾಗುತ್ತದೆ.

SSLC 3

ಕೇವಲ ಬಹು ಆಯ್ಕೆ ಪ್ರಶ್ನೆ ಆಧಾರಿತ ಪರೀಕ್ಷೆಯನ್ನು ನಡೆಸಲಾಗುವುದು. ಉತ್ತರ ಪತ್ರಿಕೆಯು OMR (Optical Mark Reader) ರೂಪದಲ್ಲಿರುವುದು. ಪ್ರತಿ ವಿಷಯಕ್ಕೆ ಗರಿಷ್ಠ 40 ಅಂಕಗಳಿಗೆ ಸೀಮಿತಗೊಳಿಸಿ ಪರೀಕ್ಷೆಯನ್ನು ನಡೆಸಲಾಗುವುದು.

ಒಟ್ಟು 03 ಕೋರ್ ವಿಷಯಗಳಿಗೆ 120 ಪ್ರಶ್ನೆಗಳುಳ್ಳ ಒಂದೇ ಪ್ರಶ್ನೆಪತ್ರಿಕೆ ನೀಡಲಾಗುವುದು. ಇದರಲ್ಲಿ ಭಾಗ- 1 ಗಣಿತ, ಭಾಗ- 2 ವಿಜ್ಞಾನ ಮತ್ತು ಭಾಗ- 3ರಲ್ಲಿ ಸಮಾಜ ವಿಜ್ಞಾನದ ಪ್ರಶ್ನೆಗಳಿರುತ್ತವೆ. ಪರೀಕ್ಷಾ ಸಮಯವನ್ನು ಬೆಳಿಗ್ಗೆ 10:30 ರಿಂದ 01:30 ಗಂಟೆಯವರೆಗೆ ನಿಗದಿಪಡಿಸಿ, ಒಟ್ಟು 3 ಗಂಟೆಯ ಕಾಲಾವಕಾಶ ಇರಲಿದೆ.

2nd puc exam 1

ಹಾಗೆಯೇ ಒಟ್ಟು 03 ಭಾಷಾ ವಿಷಯಗಳಿಗೆ 120 ಪ್ರಶ್ನೆಗಳುಳ್ಳ ಒಂದೇ ಪ್ರಶ್ನೆಪತ್ರಿಕೆ ನೀಡಲಾಗುವುದು. ಇದರಲ್ಲಿ ಭಾಗ -1 ಪ್ರಥಮ ಭಾಷೆ, ಭಾಗ- 2 ದ್ವಿತೀಯ ಭಾಷೆ ಮತ್ತು ಭಾಗ -3ರಲ್ಲಿ ತೃತೀಯ ಭಾಷೆಯ ಪ್ರಶ್ನೆಗಳಿರುತ್ತವೆ. ಪರೀಕ್ಷಾ ಸಮಯವನ್ನು ಅಪರಾಹ್ನ 10:30 ರಿಂದ 01:30 ಗಂಟೆಯವರೆಗೆ ನಿಗದಿಪಡಿಸಿ, ಒಟ್ಟು 3 ಗಂಟೆಯ ಕಾಲಾವಕಾಶ ನೀಡಲಾಗುವುದು.

ಕೋರ್ ಮತ್ತು ಭಾಷಾ ವಿಷಯಗಳ ಪರೀಕ್ಷೆಗಳ ನಡುವೆ ಮೂರು ದಿನಗಳ ಅಂತರ ನೀಡಲಾಗುವುದು. ಎಲ್ಲ ಮಾದರಿಯ ವಿದ್ಯಾರ್ಥಿಗಳೂ ಇದೇ ವಿಧಾನ ಅನ್ವಯವಾಗುತ್ತದೆ.

PUC English Exam A

ಪ್ರತಿ ವಿಷಯಕ್ಕೆ CCERF, CCERR ವಿದ್ಯಾರ್ಥಿಗಳಿಗೆ ಗರಿಷ್ಠ 80 ಅಂಕಗಳಿಗೆ ಮತ್ತು CCEPF, CCEPR, NSR, NSPR ವಿದ್ಯಾರ್ಥಿಗಳಿಗೆ ಗರಿಷ್ಠ 100 ಅಂಕಗಳಿಗೆ ಪರಿವರ್ತಿಸಿ, ಪ್ರತಿ ವಿಷಯದಲ್ಲಿ ವಿದ್ಯಾರ್ಥಿಯು ಪಡೆದ ಅಂಕಗಳನ್ನು ಅದಕ್ಕೆ ಅನುಗುಣವಾಗಿ ಪರಿವರ್ತಿಸಲಾಗುವುದು. ಇದರ ಜೊತೆಗೆ CCERF, CCERR ವಿದ್ಯಾರ್ಥಿಗಳಿಗೆ ಅಂತರಿಕ ಅಂಕಗಳನ್ನು ಸೇರ್ಪಡಿಸಿ ಪ್ರಸ್ತುತ ನಿಯಮದಂತೆ ಫಲಿತಾಂಶ ಪ್ರಕಟಿಸಲಾಗುವುದು.

ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿಧಧ ವಿದ್ಯಾರ್ಥಿಗಳಿಗೆ ಕನಿಷ್ಠ ಉತ್ತೀರ್ಣತಾ ಅಂಕಗಳನ್ನು ನೀಡಿ ಉತ್ತೀರ್ಣಗೊಳಿಸಲಾಗುವುದು. ಮುಂದುವರೆದು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅಂಕಗಳ ಆಧಾರದ ಮೇಲೆ ಎ, ಬಿ ಹಾಗೂ ಸಿ ಗ್ರೇಡ್ ಗಳನ್ನು ನೀಡಲಾಗುವುದು.

2nd puc exam 6

ಪರೀಕ್ಷೆಗೆ ಮುಂಚಿತವಾಗಿ ಮಾದರಿ ಪ್ರಶ್ನೆಪತ್ರಿಕೆಯನ್ನು ಮಂಡಳಿ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ಹಾಗೆಯೇ ಶಾಲೆಗಳಿಗೆ ತಲುಪಿಸಲಾಗುವುದು.

ಹಿಂದಿನ ಸಾಲುಗಳಲ್ಲಿ ಸುಮಾರು 3,000 ಪರೀಕ್ಷಾ ಕೇಂದ್ರಗಳನ್ನು ರಚಿಸಿ ಪರೀಕ್ಷೆಯನ್ನು ನಡೆಸಲಾಗುತ್ತಿತ್ತು. ಪ್ರಸ್ತುತ ವರ್ಷದಲ್ಲಿ ಪರೀಕ್ಷಾ ಕೇಂದ್ರಗಳನ್ನು ದ್ವಿಗುಣಗೊಳಿಸಿ, ಅಂದರೆ ಸುಮಾರು 6,000 ಅದಕ್ಕೂ ಮೇಲ್ಪಟ್ಟು ಪರೀಕ್ಷಾ ಕೇಂದ್ರಗಳನ್ನು ರಚಿಸಿ ಪರೀಕ್ಷೆ ನಡೆಸಲಾಗುವುದು.

ಒಂದು ಕೊಠಡಿಗೆ ಗರಿಷ್ಠ 12 ವಿದ್ಯಾರ್ಥಿಗಳಂತೆ, ಒಂದು ಡೆಸ್ಕ್ ಗೆ ಕೇವಲ ಒಬ್ಬ ವಿದ್ಯಾರ್ಥಿಯಂತೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗುವುದು. ವಿದ್ಯಾರ್ಥಿಗಳ ನಡುವೆ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಲಾಗುವುದು.

ಹಾಸ್ಟೆಲ್ಗಳ/ವಸತಿ ಶಾಲೆಗಳ/ವಲಸೆ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳ ಬದಲಾವಣೆ ಅವಕಾಶ ಕಲ್ಪಿಸಲಾಗುವುದು. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಕಾಪಾಡಲು ಕಳೆದ ಸಾಲಿನ ಎಸ್ಓಪಿ ಯನ್ನು ಸೂಕ್ತ ಮಾರ್ಪಾಡುಗಳೊಂದಿಗೆ, ಆರೋಗ್ಯ ಇಲಾಖೆಯ ಸಲಹೆಯೊಂದಿಗೆ ಪರೀಕ್ಷೆ ನಡೆಸಲಾಗುವುದು.

ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂದಿಯವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದು ಕಡ್ಡಾಯಗೊಳಿಸಲಾಗುವುದು.

ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳು, ಶಿಕ್ಷಕರು. ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಎನ್95 ಮಾಸ್ಕ್ ಕಡ್ಡಾಯವಾಗಿ ಧರಿಸಲು ವ್ಯವಸ್ಥೆ ಮಾಡಲಾಗುವುದು.

ಆರೋಗ್ಯ ಇಲಾಖೆಯ ಸಲಹೆ ಪಡೆದು 20 ದಿನಗಳ ಮುಂಚಿತವಾಗಿ ಪರೀಕ್ಷೆಯು ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು.

ಪತ್ರಿಕಾಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಆರ್. ಉಮಾಶಂಕರ್, ಪಿಯು ನಿರ್ದೇಶಕಿ ಆರ್. ಸ್ನೇಹಲ್, ಸಾಶಿಇ ಆಯುಕ್ತ ವಿ. ಅನ್ಬುಕುಮಾರ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

TAGGED:Corona VirusexamkarnatakapucSSLCsuresh kumarಎಸ್‍ಎಸ್‍ಎಲ್‍ಸಿಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19ಪಿಯುಸಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
1 hour ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
1 hour ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
1 hour ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
1 hour ago
bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
2 hours ago
thaad
Latest

ಅಮೆರಿಕ ಬಳಿಯಿದ್ದ 50% ಕ್ಷಿಪಣಿಗಳು ಖಾಲಿ – ಯುದ್ಧ ಮುಂದುವರಿದರೆ ʻದೊಡಣ್ಣʼನಿಗೆ ಆಪತ್ತು!

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?