ಬೆಂಗಳೂರು: ಕೊರೊನಾ ಮೂರನೇ ಅಲೆಯ ಆತಂಕವಿದ್ದು, ಯಾವುದೇ ಕಾರಣಕ್ಕೂ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಬಾರದು ಎಂದು ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Advertisement
ಈ ಕುರಿತು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ. ಹೀಗಾಗಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ರದ್ದು ಮಾಡಿ. ಅಲ್ಲದೆ ಯಾವುದೇ ಕಾರಣಕ್ಕೂ ಶಾಲೆ, ಕಾಲೇಜುಗಳನ್ನು ತೆರೆಯಕೂಡದು. ಮಕ್ಕಳ ವಿಚಾರದಲ್ಲಿ ಆಟವಾಡಬೇಡಿ. ಈ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
Advertisement
Advertisement
ಕೊರೊನಾ ಎರಡನೇ ಅಲೆ ಅಬ್ಬರ ಕಡಿಮೆಯಾಗಿದೆ. ಈಗಾಗಲೇ ರಾಜ್ಯ ಸರ್ಕಾರ ರಾಜ್ಯವನ್ನು ಬಹುತೇಕ ಅನ್‍ಲಾಕ್ ಮಾಡಿದೆ. ಅಲ್ಲದೆ ಎರಡು ದಿನಗಳ ಕಾಲ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ನಡೆಸಲು ಸರ್ಕಾರ ಚಿಂತಿಸಿದೆ. ಇದರ ನಡುವೆಯೇ ವಾಟಾಳ್ ನಾಗರಾಜ್ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಬಾರದು ಎಂದು ಒತ್ತಾಯಿಸಿದ್ದಾರೆ.