Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಸ್‍ಪಿಬಿ ನೆನಪು- ತಿರುವಣ್ಣಾಮಲೈ ದೇವಸ್ಥಾನದಲ್ಲಿ ದೀಪ ಬೆಳಗಿಸಿದ ಇಳಯರಾಜ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಎಸ್‍ಪಿಬಿ ನೆನಪು- ತಿರುವಣ್ಣಾಮಲೈ ದೇವಸ್ಥಾನದಲ್ಲಿ ದೀಪ ಬೆಳಗಿಸಿದ ಇಳಯರಾಜ

Cinema

ಎಸ್‍ಪಿಬಿ ನೆನಪು- ತಿರುವಣ್ಣಾಮಲೈ ದೇವಸ್ಥಾನದಲ್ಲಿ ದೀಪ ಬೆಳಗಿಸಿದ ಇಳಯರಾಜ

Public TV
Last updated: September 27, 2020 1:55 pm
Public TV
Share
2 Min Read
spb iliaraja
SHARE

ಚೆನ್ನೈ: ತಮ್ಮ ಗೆಳೆಯ, ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ನೆನಪಿನಲ್ಲೇ ಇರುವ ಸಂಗೀತ ನಿರ್ದೇಶಕ ಇಳಯರಾಜ, ಶನಿವಾರ ರಾತ್ರಿ ತಿರುವಣ್ಣಾಮಲೈ ದೇವಸ್ಥಾನಕ್ಕೆ ತೆರಳಿ ದೀಪ ಹಚ್ಚಿದ್ದಾರೆ.

SPB A

ಸರ್ಕಾರದ ಸೂಚನೆ ಹಿನ್ನೆಲೆ ಇಳಯರಾಜ ತಮ್ಮ ಪ್ರಾಣ ಸ್ನೇಹಿತನ ಅಂತಿಮ ದರ್ಶನದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಶನಿವಾರ ತಿರುವಣ್ಣಾಮಲೈ ದೇವಸ್ಥಾನದಲ್ಲಿ ದೀಪ ಬೆಳಗಿಸಿ ತಮ್ಮ ಗೆಳೆಯನನ್ನು ನೆನೆದಿದ್ದಾರೆ. ಅಲ್ಲದೆ ಅವರ ಆತ್ಮಕ್ಕೆ ಚಿರ ಶಾಂತಿ ಸಿಗಲಿ, ಸದ್ಗತಿ ದೊರೆಯಲಿ ಎಂದು ಇಳಯರಾಜ ಬೇಡಿಕೊಂಡಿದ್ದಾರೆ.

Untitled design 2020 08 16T133825.380 696x433 1

ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಸೆಪ್ಟೆಂಬರ್ 25ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು. ಅವರ ಅಂತ್ಯ ಸಂಸ್ಕಾರವನ್ನು ಧಾರ್ಮಿಕ ವಿಧಿವಿಧಾನಗಳ ಮೂಲಕ ಹಾಗೂ ಸರ್ಕಾರಿ ಗೌರವಗಳೊಂದಿಗೆ ಶನಿವಾರ ಚೆನ್ನೈನ ಫಾರ್ಮ್ ಹೌಸ್‍ನಲ್ಲಿ ಮಾಡಲಾಯಿತು. ಆದರೆ ಬಹುತೇಕ ಗಣ್ಯರು ಎಸ್‍ಪಿಬಿ ಅಂತಿಮ ಯಾತ್ರೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ಅದೇ ರೀತಿ ಇಳಯರಾಜ ಸಹ ಹೋಗಲಿಲ್ಲ. ಹೀಗಾಗಿ ದೇವಸ್ಥಾನಕ್ಕೆ ತೆರಳಿ ದೀಪ ಬೆಳಗಿಸಿ ಅವರು ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವಿಡಿಯೋವನ್ನು ತಮ್ಮ ಫೇಸ್ಬುಕ್‍ನಲ್ಲಿ ಹಂಚಿಕೊಂಡಿದ್ದಾರೆ.

இசைஞானி இளையராஜா அவர்கள் திரு SP பாலசுப்ரமணியம் அவர்களின் ஆத்மா சாந்தி அடைய திருவண்ணாமலையில் சற்று முன் மோட்ச தீபம்…

Posted by Ilaiyaraaja on Saturday, September 26, 2020

ಸಿನಿಮಾ ರಂಗಕ್ಕೆ ಪ್ರವೇಶ ಮಾಡುವುದಕ್ಕೂ ಮುನ್ನವೇ ಇಳಯರಾಜ ಹಾಗೂ ಎಸ್‍ಪಿಬಿ ಸ್ನೇಹಿತರಾಗಿದ್ದರು. ಅಲ್ಲದೆ ಸಿನಿಮಾ ರಂಗಕ್ಕೆ ಬಂದ ನಂತರ ಇಳಯರಾಜ ನಿರ್ದೇಶನದ ಹಲವು ಸಿನಿಮಾಗಳ ಹಾಡುಗಳನ್ನು ಬಾಲಸುಬ್ರಹ್ಮಣ್ಯಂ ಹಾಡಿದ್ದಾರೆ. ಹೀಗಾಗಿ ಇಳಯರಾಜ ಹಾಗೂ ಎಸ್‍ಪಿಬಿ ಮಧ್ಯೆ ಆಳವಾದ ಸ್ನೇಹವಿತ್ತು.

a385aed1 ilayaraja the raja of film music 640x480 1

ಎಸ್‍ಪಿಬಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಶ್ಚರ್ಯ ವ್ಯಕ್ತಪಡಿಸಿದ್ದ ಇಳಯರಾಜ, ಬಾಲು ನೀನೆಲ್ಲಿಗೆ ಹೋದೆ, ಯಾಕೆ ಹೋದೆ? ಬಾಲು ಬೇಗನೆ ಮರಳಿ ಬಾ, ನಿನಗಾಗಿ ನಾನು ಕಾಯುತ್ತಿದ್ದೇನೆ. ಆದರೆ ನೀನು ಕೇಳುತ್ತಿಲ್ಲ. ನೀನು ಹೋಗಿದ್ದೀಯಾ, ಎಲ್ಲಿಗೆ ಹೋದೆ, ಗಂಧರ್ವರಿಗೆ ಹಾಡು ಹೇಳಲು ಹೋದೆಯಾ? ಈಗ ಜಗತ್ತಿನಲ್ಲಿ ನನಗೆ ಏನನ್ನೂ ನೋಡಲು ಆಗುತ್ತಿಲ್ಲ. ಶಬ್ದಗಳನ್ನು ಕಳೆದುಕೊಂಡಿದ್ದೇನೆ, ಏನು ಹೇಳಬೇಕೋ ನನಗೆ ತೋಚುತ್ತಿಲ್ಲ. ಯಾವುದೇ ದುಃಖಕ್ಕೆ ಒಂದು ಮಿತಿಯಿದೆ. ಆದರೆ ಈ ದುಃಖಕ್ಕೆ ಮಿತಿಯಿಲ್ಲ ಎಂದು ಹೇಳಿದ್ದರು.

TAGGED:chennaiIlaiyaraajaLampPublic TVsp balasubrahmanyamThiruvannamalaiಇಳಯರಾಜಎಸ್.ಪಿ ಬಾಲಸುಬ್ರಹ್ಮಣ್ಯಂಚೆನ್ನೈತಿರುವಣ್ಣಾಮಲೈದೀಪಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
4 minutes ago
Bengaluru Kempegowda International Airport 4
Bengaluru City

ನಗ್ನ ಜೋಡಿ ಫೋಟೋ ಪಾರ್ಸೆಲ್ – ಬೆಂಗ್ಳೂರು ಏರ್‌ಪೋರ್ಟ್‌ಗೆ ವಾಮಾಚಾರ?

Public TV
By Public TV
5 minutes ago
White Phosphorus Bomb
Latest

ಕಾನೂನು ಉಲ್ಲಂಘಿಸಿದ ಇಸ್ರೇಲ್‌ – ಲೆಬನಾನ್‌ ವಸತಿ ಪ್ರದೇಶದ ಮೇಲೆ ಬಿಳಿ ರಂಜಕ ಬಳಸಿ ದಾಳಿ

Public TV
By Public TV
29 minutes ago
Gruhalakshmi Scheme
Bidar

ಮೃತರ ಖಾತೆಗೂ ಗೃಹಲಕ್ಷ್ಮಿ ಹಣ – ಸರ್ಕಾರ ಬಂದಾಗಿಂದ ಸುಮಾರು 12 ಕೋಟಿ ಜಮೆ

Public TV
By Public TV
48 minutes ago
d.k.shivakumar
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಿಕೆಶಿ – ಕುತೂಹಲ ಮೂಡಿಸಿದ ಔತಣಕೂಟ

Public TV
By Public TV
1 hour ago
America Israel
Latest

ಮಿತ್ರದೇಶಗಳಲ್ಲಿ ಭಿನ್ನಮತ | ಇರಾನ್‌ನ 30 ತೈಲ ಘಟಕಗಳ ಮೇಲೆ ಇಸ್ರೇಲ್ ದಾಳಿ – ತರಾಟೆಗೆ ತೆಗೆದುಕೊಂಡ ಅಮೆರಿಕ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?