ಐದೂವರೆ ಗಂಟೆ ದೀಪಿಕಾಗೆ ಎನ್‍ಸಿಬಿ ಡ್ರಿಲ್-ಡ್ರಗ್ಸ್ ವ್ಯೂಹದಿಂದ ಹೊರ ಬರ್ತಾರಾ?

Public TV
3 Min Read
deepika 1601094882

-ಎನ್‍ಸಿಬಿ ಕೇಳಿದ ಪ್ರಶ್ನೆಗೆ ಮಸ್ತಾನಿ ಉತ್ತರ ಏನು?
-ದೀಪಿಕಾ ಮೊಬೈಲ್ ವಶಕ್ಕೆ!

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಸಿಬಿ(ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ) ಮುಂದೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಜರಾಗಿದ್ದರು. ಎನ್‍ಸಿಬಿ ಅಧಿಕಾರಿಗಳು ಬರೋಬ್ಬರಿ ಐದೂವರೆ ಗಂಟೆ ದೀಪಿಕಾರನ್ನ ವಿಚಾರಣೆ ನಡೆಸಿವೆ. ವಿಚಾರಣೆ ಅಂತ್ಯದ ಬಳಿಕ ದೀಪಿಕಾ ಹೊರ ಬಂದಿದ್ದು, ಯಾವುದೇ ಪ್ರತಿಕ್ರಿಯೆ ನೀಡದೇ ಹಿಂದಿರುಗಿದ್ದಾರೆ.

Deepika 3 e1601122882879

ಎನ್‍ಸಿಬಿಯ ಓರ್ವ ಮಹಿಳಾ ಅಧಿಕಾರಿ ಸೇರಿದಂತೆ ಐದು ಸದಸ್ಯರ ತಂಡ ಮ್ಯಾನೇಜರ್ ಕರೀಷ್ಮಾ ಪ್ರಕಾಶ್ ಮತ್ತು ದೀಪಿಕಾ ಇಬ್ಬರನ್ನು ಮುಖಾಮುಖಿಯಾಗಿ ಕೂರಿಸಿ ವಿಚಾರಣೆ ನಡೆಸಿದೆ ಎನ್ನಲಾಗಿದೆ. ಶುಕ್ರವಾರ ಸಹ ಕರೀಷ್ಮಾ ಪ್ರಕಾಶ್ ವಿಚಾರಣೆಗೆ ಹಾಜರಾಗಿದ್ದರು. ಇಂದು ಸಹ ವಿಚಾರಣೆಗೆ ಹಾಜರಾಗಿದ್ದ ಕರೀಷ್ಮಾರನ್ನ ದೀಪಿಕಾ ಎದುರು ಕೂರಿಸಿ ಪ್ರಶ್ನಿಸಲಾಗಿದೆ. ಇದೇ ವೇಳೆ ದೀಪಿಕಾ ತಮ್ಮ ಎಲ್ಲ ಹೇಳಿಕೆಯನ್ನ ಲಿಖಿತ ರೂಪದ ಬದಲಾಗಿ ಟೈಪಿಂಗ್ ಫಾರ್ಮೆಟ್ ನಲ್ಲಿ ದಾಖಲಿಸುವಂತೆ ಅಧಿಕಾರಿಗಳ ಮನವಿ ಮಾಡಿಕೊಂಡಿದ್ದರು. ಹಾಗಾಗಿ ಅಧಿಕಾರಿಗಳು ದೀಪಿಕಾ ಸಂಪೂರ್ಣ ಹೇಳಿಕೆ ಟೈಪಿಂಗ್ ಫಾರ್ಮೆಟ್ ನಲ್ಲಿ ದಾಖಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಡ್ರಗ್ಸ್ ಪ್ರಕರಣ- ವಿಚಾರಣೆಗೆ ಹಾಜರಾದ ದೀಪಿಕಾ ಪಡುಕೋಣೆ

https://www.instagram.com/p/CFmMgszHH6k/

ದೀಪಿಕಾ ಮೊಬೈಲ್ ವಶಕ್ಕೆ: ಎನ್‍ಸಿಬಿ ಅಧಿಕಾರಿಗಳ ಪ್ರಶ್ನೆಗೆ ದೀಪಿಕಾ ನೇರವಾಗಿ ಉತ್ತರ ನೀಡದ ಹಿನ್ನೆಲೆ ಅವರ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ನೀವು ಡ್ರಗ್ಸ್ ತೆಗೆದುಕೊಳ್ತೀರಾ ಪ್ರಶ್ನೆಗೆ ದೀಪಿಕಾ ಸ್ಪಷ್ಟವಾದ ಉತ್ತರ ನೀಡಿಲ್ಲ. ಹಾಗೆ ಹಲವು ಪ್ರಶ್ನೆಗಳಿಗೆ ಉತ್ತರ ನೀಡದೇ ಮೌನವಾಗಿದ್ದರು ಎಂದು ಮಾಧ್ಯಮಗಳು ಬಿತ್ತರಿಸಿವೆ. ಇದನ್ನೂ ಓದಿ: ವಾಟ್ಸಪ್ ಡ್ರಗ್ಸ್ ಗ್ರೂಪ್‍ಗೆ ದೀಪಿಕಾ ಅಡ್ಮಿನ್ – ಎನ್‍ಸಿಬಿ ಮಾಹಿತಿ ರಿವೀಲ್

https://www.instagram.com/p/CFlkMvent0q/

ತಪ್ಪೊಪ್ಪಿಕೊಂಡ ಪೀಕು?: ಮಾಧ್ಯಮಗಳಲ್ಲಿ ಬಿತ್ತರವಾಗಿರುವ ವಾಟ್ಸಪ್ ಚಾಟ್ ತಮ್ಮದೇ ಎಂದು ದೀಪಿಕಾ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಈ ವಾಟ್ಸಪ್ ಗ್ರೂಪ್ ಗಳ ಮುಖಾಂತರ ಸಿಗರೇಟ್ ತರಿಸಲಾಗುತ್ತಿತ್ತು ಎಂದು ಮಾತ್ರ ಹೇಳಿದ್ದು, ಚಾಟ್‍ಗೆ ಸಂಬಂಧಿಸಿದ ಪ್ರಶ್ನೆಗಳಿಗೂ ದೀಪಿಕಾ ಉತ್ತರಿಸಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ಡ್ರಗ್ಸ್ ನಶೆಯಲ್ಲಿ ದೇಶ ವಿರೋಧಿಗಳ ಜತೆ ದೀಪಿಕಾ ನಿಲ್ತಿದ್ರು: ಬಿಜೆಪಿ ನಾಯಕ

deepika 13

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವಾಗಲೇ ಡ್ರಗ್ಸ್ ದಂಧೆ ಕುರಿತು ಸ್ಫೋಟಕ ಮಾಹಿತಿ ಲಭ್ಯವಾಗುತ್ತಿದ್ದು, ಸುಶಾಂತ್ ಸಿಂಗ್ ರಜಪೂತ್ ಪ್ರಿಯತಮೆ, ನಟಿ ರಿಯಾ ಚಕ್ರವರ್ತಿ ಹಾಗೂ ಇತರ ಡ್ರಗ್ ಪೆಡ್ಲರ್ ಗಳನ್ನು ವಿಚಾರಣೆ ನಡೆಸುತ್ತಿದ್ದಾಗ ಬಾಲಿವುಡ್‍ನ ಹಲವು ನಟ, ನಟಿಯರು ಹಾಗೂ ನಿರ್ಮಾಪಕರು ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವ ಕುರಿತು ಮಾಹಿತಿ ಲಭ್ಯವಾಗುತ್ತಿದೆ. ಇದನ್ನೂ ಓದಿ: ಡ್ರಗ್ಸ್ ಚಾಟ್‍ನಲ್ಲಿ ದೀಪಿಕಾ ಹೆಸ್ರು- ಹೈ ಸೊಸೈಟಿಯ ಮಕ್ಕಳು ಮಾಲ್ ಕೇಳ್ತಾರೆ ಎಂದ ಕಂಗನಾ

deepika dress

ಈ ಹಿಂದೆ ನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್ ಗೆ ನೋಟಿಸ್ ನೀಡಿತ್ತು. ನಂತರ ಸ್ವತಃ ದೀಪಿಕಾ ಪಡುಕೋಣೆಯವರಿಗೇ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು. ಈ ವೇಳೆ ವಾಟ್ಸಪ್ ಕುರಿತು ಮಹತ್ವದ ಮಾಹಿತಿ ಹೊರ ಬಿದ್ದಿದ್ದು, ಡ್ರಗ್ಸ್ ಕುರಿತ ಮೂವರಿದ್ದ ಗ್ರೂಪ್‍ಗೆ ದೀಪಿಕಾ ಪಡುಕೋಣೆಯವರೇ ಅಡ್ಮಿನ್ ಆಗಿದ್ದರು ಎಂದು ತಿಳಿದು ಬಂದಿದೆ. ಈ ವಾಟ್ಸಪ್ ಗ್ರೂಪ್‍ನಲ್ಲಿ ನಟಿಯ ಮ್ಯಾನೇಜರ್ ಕರಿಷ್ಮಾ ಪ್ರಕಾಶ್, ಜಯಾ ಸಾಹ ಅವರೂ ಭಾಗಿಯಾಗಿದ್ದಾರೆ. ಈ ಕುರಿತು ಎನ್‍ಸಿಬಿ ಈಗಾಗಲೇ ಕರಿಷ್ಮಾ ಅವರ ವಿಚಾರಣೆ ನಡೆಸಿದೆ. ಇದನ್ನೂ ಓದಿ: ಮಾಲ್ ಇದೆಯಾ? ಡ್ರಗ್ಸ್ ಜಾಲದಲ್ಲಿ ಬಿಟೌನ್ ಪದ್ಮಾವತಿ ದೀಪಿಕಾ

https://www.instagram.com/p/CFloiTYnHsw/

ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿಯವರೊಂದಿಗೆ ಡ್ರಗ್ಸ್ ಕುರಿತು ಮಾತನಾಡಿರುವುದಾಗಿ ರಕುಲ್ ಪ್ರೀತ್ ಸಿಂಗ್ ಒಪ್ಪಿಕೊಂಡಿದ್ದಾರೆ. ನನ್ನೊಂದಿಗೆ ಡ್ರಗ್ಸ್ ಇಟ್ಟುಕೊಂಡಿರುತ್ತಿದ್ದೆ, ಆದರೆ ಸೇವಿಸಿಲ್ಲ, ಇದನ್ನು ರಿಯಾಗಾಗಿ ಇಟ್ಟುಕೊಂಡಿರುತ್ತಿದ್ದೆ ಎಂದು ಹೇಳಿದ್ದಾರೆ. ರಕುಲ್ ಅವರನ್ನು ಶುಕ್ರವಾರ ಬೆಳಗ್ಗೆ ವಿಚಾರಣೆಗೆ ಒಳಪಡಿಸಲಾಗಿದೆ. ಇಂದು ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್ ಸಹ ವಿಚಾರಣೆಗೆ ಹಾಜರಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *