ನವಹೆಹಲಿ: ವಾರದ ಆರಂಭದಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಹೃದಯ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಐಸಿಯುನಿಂದ ಇದೀಗ ಸ್ಪೆಷಲ್ ವಾರ್ಡ್‍ಗೆ ಶಿಫ್ಟ್ ಮಾಡಲಾಗಿದೆ. ಕೋವಿಂದ್ ಅವರ ಆರೋಗ್ಯ ಸುಧಾರಿಸಿದೆ ಎಂದು ರಾಷ್ಟ್ರಪತಿ ಭವನ ಹೇಳಿದೆ.
ಈ ಕುರಿತಂತೆ ರಾಷ್ಟ್ರಪತಿ ಭವನ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಏಮ್ಸ್ ಆಸ್ಪತ್ರೆಯ ಐಸಿಯುವಿನಿಂದ ಸ್ಪೆಷಲ್ ವಾರ್ಡ್‍ಗೆ ಶಿಫ್ಟ್ ಆಗಿದ್ದಾರೆ. ಅವರ ಆರೋಗ್ಯ ಇದೀಗ ಸುಧಾರಿಸಿದೆ. ವೈದ್ಯರು ಅವರ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ವಿಚಾರಿಸುತ್ತಿದ್ದಾರೆ ಮತ್ತು ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದಾರೆ ಎಂದು ಟ್ವೀಟ್ ಮಾಡಲಾಗಿದೆ.
Advertisement
President Kovind was shifted from the ICU to a special room in the AIIMS today. His health has been improving continuously. Doctors are constantly monitoring his condition and have advised him to take rest.
— President of India (@rashtrapatibhvn) April 3, 2021
Advertisement
ರಾಷ್ಟ್ರಪತಿ ರಾಮನಾಥ್ ಕೋವಿಂದ್(75) ಮಾರ್ಚ್ 30ರಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಹೃದಯ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಎದೆ ನೋವು ಕಾಣಿಸಿಕೊಂಡಿದ್ದರಿಂದ ಆರೋಗ್ಯ ತಪಾಸಣೆ ನಡೆಸಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.
Advertisement
Advertisement
ಸದ್ಯ ರಾಮನಾಥ್ ಕೋವಿಂದ್ ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಶುಭ ಹಾರೈಸಿದ್ದಾರೆ.