ಬೆಂಗಳೂರು: ಮಹಾಮಾರಿ ಕೊರೊನಾದಿಂದ ಈಗಾಗಲೇ ಕೆಲ ರಾಜಕೀಯ ನಾಯಕರು ಕೂಡ ಕ್ವಾರಂಟೈನ್ ಆಗಿದ್ದಾರೆ. ಇದೀಗ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಕೂಡ ಒಂದು ವಾರಗಳ ಕಾಲ ಕ್ವಾರಂಟೈನ್ ಆಗಿದ್ದಾರೆ.
ಬಿ.ಸಿ.ಪಾಟೀಲ್ ಅವರ ಸಂಬಂಧಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರು ಬೆಂಗಳೂರಿನ ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿದ್ದರು. ಈ ಹಿನ್ನೆಲೆಯಲ್ಲಿ ಬಿ.ಸಿ.ಪಾಟೀಲ್ ಒಂದು ವಾರ ಕ್ವಾರಂಟೈನ್ ಆಗಿದ್ದಾರೆ. ಬಿ.ಸಿ.ಪಾಟೀಲ್ ಮಾತ್ರವಲ್ಲದೇ ಅವರ ಕುಟುಂಬಸ್ಥರು ಮತ್ತು ಸಿಬ್ಬಂದಿ ವರ್ಗ ಕೂಡ ಕ್ವಾರಂಟೈನ್ ಆಗಿದ್ದಾರೆ. ಈ ಬಗ್ಗೆ ಸ್ವತಃ ಸಚಿವರೇ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ.
ಬಿ.ಸಿ.ಪಾಟೀಲ್ ಈ ಬಗ್ಗೆ ಟ್ವೀಟ್ ಮಾಡಿದ್ದು, “ಬೆಂಗಳೂರಿನ ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿ ನನ್ನ ಸಂಬಂಧಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಅವರ ಜೊತೆ ಸಂಪರ್ಕದಲ್ಲಿ ಇದ್ದ ನಾನು ಮತ್ತು ನನ್ನ ಕುಂಟುಂಬಸ್ಥರು ಹಾಗೂ ಸಿಬ್ಬಂದಿ ವರ್ಗದವರು ಒಂದು ವಾರಗಳ ಕಾಲ ಕ್ವಾರಂಟೈನ್ ಆಗುತ್ತಿದ್ದೇವೆ” ಎಂದು ಜನರಿಗೆ ತಿಳಿಸಿದ್ದಾರೆ.
ಈಗಾಗಲೇ ಕೊರೊನಾ ಭೀತಿಯಿಂದ ಸಿಎಂ ಯಡಿಯೂರಪ್ಪ ಅವರು ಸ್ವಯಂ ಕ್ವಾರಂಟೈನ್ ಆಗಿದ್ದಾರೆ. ಸಿಎಂ ಅವರ ಗೃಹ ಕಚೇರಿ ಕೃಷ್ಣಾ, ಅಧಿಕೃತ ನಿವಾಸ ಕಾವೇರಿ ಮತ್ತು ಅವರ ಧವಳಗಿರಿಯ ನಿವಾಸದಲ್ಲಿ ಕೆಲಸ ಮಾಡುವ ಕೆಲ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಕಾರಣದಿಂದ ಯಡಿಯೂರಪ್ಪನವರು ಶುಕ್ರವಾದಿಂದ ಐದು ದಿನಗಳ ಕಾಲ ತಮ್ಮ ಕಾವೇರಿ ನಿವಾಸದಲ್ಲಿ ಕ್ವಾರಂಟೈನ್ ಆಗಿದ್ದಾರೆ.
ಬೆಂಗಳೂರಿನ ಮಿನಿಸ್ಟರ್ ಕ್ವಾಟರ್ಸ್ ನಲ್ಲಿ, ನನ್ನ ಸಂಬಂಧಿಕರೊಬ್ಬರಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಈ ನಿಟ್ಟಿನಲ್ಲಿ ಅವರ ಜತೆ ಸಂಪರ್ಕದಲ್ಲಿ ಇದ್ದ, ನಾನು ಹಿರೇಕೆರೂರಿನ ಮನೆಯಲ್ಲಿ ಕ್ವಾರಂಟೈನ್ ಆಗುತ್ತಿದ್ದು, ನನ್ನ ಕುಂಟುಂಬಸ್ಥರು ಹಾಗೂ ಸಿಬ್ಬಂದಿ ವರ್ಗದವರು ಬೆಂಗಳೂರಿನಲ್ಲಿ ಒಂದು ವಾರಗಳ ಕಾಲ ಕ್ವಾರಂಟೈನ್ ಆಗುತ್ತಿದ್ದಾರೆ.
— Kourava B.C.Patil (@bcpatilkourava) July 12, 2020