ಲಕ್ನೋ: ಒಂದೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರದ ಆರೋಪದಡಿಯಲ್ಲಿ ಪೊಲೀಸರು 26 ವರ್ಷದ ಯುವಕನನ್ನು ಬಂಧಿಸಿದ್ದಾರೆ. ಕೋತವಾಲಿ ಚಂದಪಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹತ್ರಾಸ್ ಮೂಲದ ಮಹಿಳೆ ತನ್ನ ಒಂದೂವರೆ ವರ್ಷದ ಮಗು ಜೊತೆ ತವರು ಮನೆಗೆ ಬಂದಿದ್ದರು. ಈ ವೇಳೆ ಮಗುವನ್ನ ಆಟ ಆಡಿಸೋದಾಗಿ ಹೇಳಿ 26 ವರ್ಷದ ಯುವಕ ಕರೆದುಕೊಂಡು ಹೋಗಿದ್ದನು. ತುಂಬಾ ಸಮಯದ ಬಳಿಕ ಬಂದ ಯುವಕ ಮಗುವನ್ನ ತಾಯಿಗೆ ನೀಡಿ ಹಿಂದಿರುಗಿದ್ದನು.
ಮಗು ಅಳುತ್ತಿದ್ದ ಗಮನಿಸಿದ ಮಹಿಳೆ ಕಂದಮ್ಮನ ಮೇಲೆ ಅತ್ಯಾಚಾರ ಆಗಿದೆ ಎಂದು ಆರೋಪಿಸಿ ಚಂದಪಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಗುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿರುವ ಸ್ಥಳೀಯ ವೈದ್ಯರು ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ಶಿಫಾರಸ್ಸು ಮಾಡಿದ್ದಾರೆ. ಸದ್ಯ ಮಗವನ್ನ ಅಲಿಗಢ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ವಿಷಯ ತಿಳಿದ ಎಸ್.ಪಿ. ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಪೋಷಕರ ದೂರಿನ ಆಧಾರದ ಮೇಲೆ ಅದೇ ಗ್ರಾಮದ 26 ವರ್ಷದ ಯುವಕನನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದ್ದು, ಮಗುವಿಗೆ ಚಿಕಿತ್ಸೆ ನೀಡಲಾಗ್ತಿದೆ ಎಂದು ಹೇಳಿದ್ದಾರೆ.