ಕೋಲಾರ: ಹೆತ್ತ ತಾಯಿಯೇ ತನ್ನ ಒಂದೂವರೆ ವರ್ಷದ ಮಗುವನ್ನ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಜಮೀನು ವಿಚಾರವಾಗಿ ಗಂಡ ಹಾಗೂ ಹೆಂಡತಿ ಮಧ್ಯೆ ಜಗಳವಾಗಿದ್ದು ಪರಿಣಾಮ ತಾಯಿ ತನ್ನ ಮಗುವನ್ನ ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೋಲಾರ ತಾಲೂಕಿನ ಚಿನ್ನಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಚಿನ್ನಾಪುರ ಗ್ರಾಮದ 22 ವರ್ಷದ ಭಾನುಪ್ರಿಯ ಹಾಗೂ ಒಂದೂವರೆ ವರ್ಷದ ಹೆಣ್ಣು ಮಗು ನಿಧಿ ಸಾವನ್ನಪ್ಪಿದ ತಾಯಿ ಮಗು. ಮಗುವಿಗೆ ನೇಣು ಹಾಕಿ, ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ರಾಯರ ಕೃಪೆಯಿಂದ ಯತಿರಾಜನಿಗೆ ಸಣ್ಣ ಗಾಯವೂ ಆಗಿಲ್ಲ: ಜಗ್ಗೇಶ್
ಕಳೆದ ಹಲವು ದಿನಗಳಿಂದ ಜಮೀನು ವಿಚಾರವಾಗಿ ಗಂಡ ಹರೀಶ್ ನೊಂದಿಗೆ ಗಲಾಟೆ ಮಾಡಿಕೊಂಡಿರುವ ಭಾನುಪ್ರಿಯಾ, ಗಂಡ ಇಲ್ಲದೆ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಸದ್ಯ ಗಂಡ ಹರೀಶ್‍ನನ್ನ ಕೋಲಾರ ಗ್ರಾಮಾಂತರ ಪೊಲೀಸರ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕೋಲಾರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಅನುಮಾನಸ್ಪದ ಸಾವು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.