ಚಿಕ್ಕಮಗಳೂರು. ಕೀಟನಾಶಕ ಔಷಧಿಯನ್ನ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಸಿಗದಾಳು ಘಾಟಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದವರು ಕೊಪ್ಪ ತಾಲೂಕಿನ ಉತ್ತಮೇಶ್ವರ ಗ್ರಾಮದ ನಿವಾಸಿಗಳೆಂದು ತಿಳಿದುಬಂದಿದೆ. 55 ವರ್ಷದ ಬಾಬಣ್ಣ, 32 ವರ್ಷದ ಶೈಲಾ ಮತ್ತು 11 ವರ್ಷದ ಮೊಮ್ಮಗಳು ಅನನ್ಯ ಆತ್ಮಹತ್ಯೆಗೆ ಯತ್ನಿಸಿದವರು. ಸಿಗದಾಳು ಗ್ರಾಮದಿಂದ ಸುಮಾರು 8-10 ಕಿ.ಮೀ. ದೂರದ ಘಾಟಿಯಲ್ಲಿನ ಅರಣ್ಯ ಪ್ರದೇಶದಲ್ಲಿ ಕೀಟನಾಶಕ ಔಷಧಿಯನ್ನ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
Advertisement
Advertisement
ಸ್ಥಳೀಯರು ಕಾಡಿಗೆ ಹೋದಾಗ ಕೀಟನಾಶಕ ಔಷಧಿಯನ್ನ ಸೇವಿಸಿ ಬಿದ್ದು ನರಳಾಡುತ್ತಿರೋದನ್ನ ಕಂಡು ಹರಿಹರಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಹರಿಹರಪುರ ಪೊಲೀಸರು ಸ್ಥಳೀಯರ ಸಹಾಯದಿಂದ ಮೂವರನ್ನ ಕೊಪ್ಪ ಸಾರ್ವಜನಿಕ ಆಸ್ವತ್ರೆಗೆ ದಾಖಲಿಸಿದ್ದಾರೆ.
Advertisement
ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ಮಣಿಪಾಲ್ ಆಸ್ವತ್ರೆಗೆ ರವಾನಿಸಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಆತ್ಮಹತ್ಯೆಗೆ ಯತ್ನಿಸಿರುವ ಬಾಬಣ್ಣ ಕೊಪ್ಪದ ಹುಲ್ಲುಮಕ್ಕಿಯಲ್ಲಿ ವಾಸವಿದ್ದರು. ಆ ಮನೆಯನ್ನ ಮಾರಾಟ ಮಾಡಿ ಉತ್ತಮೇಶ್ವರ ಗ್ರಾಮದಲ್ಲಿ ಜಮೀನು ಖರೀದಿಸಿ ವಾಸವಿದ್ದರು ಎಂದು ತಿಳಿದುಬಂದಿದೆ. ಆದರೆ ಮಗಳು, ಮೊಮ್ಮಗಳ ಜೊತೆ ಆತ್ಮಹತ್ಯೆಗೆ ಯತ್ನಿಸಿರೋದಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಹರಿಹರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.