ಹಾವೇರಿ: ಒಕ್ಕಣೆ ಮಾಡಲು ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ ಮೆಕ್ಕೆಜೋಳದ ರಾಶಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿ ಆಗಿರೋ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕಳಸೂರು ಗ್ರಾಮದಲ್ಲಿ ನಡೆದಿದೆ.
Advertisement
ಮಾರುತಿ ಕಾಳಪ್ಪನವರ ರೈತರು ಬೆಳೆದಿದ್ದ ಮೆಕ್ಕೆಜೋಳ ಬೆಳೆ ನಾಶವಾಗಿದೆ. ಇವರು ಐದು ಎಕರೆ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆದಿದ್ದರು. ಮೆಕ್ಕೆಜೋಳದ ತೆನೆಗಳನ್ನ ಒಕ್ಕಣೆ ಮಾಡಲೆಂದು ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದರು. ತಡರಾತ್ರಿ ಯಾರೋ ಕಿಡಿಗೇಡಿಗಳು ರಾಶಿಗೆ ಬೆಂಕಿ ಇಟ್ಟಿದ್ದಾರೆ. ಇದರಿಂದ ಬೆಳೆ ನಾಶವಾಗಿದೆ. ಒಂದೂವರೆ ಲಕ್ಷ ರುಪಾಯಿ ಮೌಲ್ಯದ ಮೆಕ್ಕೆಜೋಳದ ಸುಟ್ಟು ಹಾನಿಯಾಗಿದೆ. ಫಸಲಿಗೆ ಬೆಂಕಿ ಹತ್ತಿ ಉರಿಯುತ್ತಿರುವುದನ್ನು ಕಂಡು ಮಾರುತಿ ಕಾಳಪ್ಪನವರು ಕಣ್ಣೀರು ಹಾಕುತ್ತಿದ್ದಾರೆ.
ವಿಷಯ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸೋವಷ್ಟರಲ್ಲಿ ಮೆಕ್ಕೆಜೋಳದ ತೆನೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
Advertisement