ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್‌ಗೆ ರಾಜ್ಯದ ಐವರು ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿ ಸ್ಥಾನಪಡೆದಿದ್ದು, ಆಯ್ಕೆಯಾಗುವ ಕ್ರೀಡಾಪಟುಗಳಿಗೆ ತಲಾ 10ಲಕ್ಷ ರೂಪಾಯಿ ಪ್ರೋತ್ಸಾಹ ಧನ ಘೋಷಿಸಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹೇಳಿದ್ದಾರೆ. ಇದನ್ನೂ ಓದಿ: 67ನೇ ವಯಸ್ಸಿನಲ್ಲಿ ಪಿಹೆಚ್‍ಡಿ ಪಡೆದ ವೃದ್ಧೆ
2020 ರ ಒಲಿಂಪಿಕ್ಸ್ ಕ್ರೀಡಾಕೂಟವು ಜಪಾನ್ ಟೋಕಿಯೋದಲ್ಲಿ ಜುಲೈ 23 ರಿಂದ ಸೆಪ್ಟಂಬರ್ 5ರ ವರೆಗೆ ನಡೆಯಲಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ಈ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಕ್ರೀಡಾಪಟುಗಳಿಗೆ ಅಗತ್ಯ ನೆರವು ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಮೂಲಭೂತ ಸೌಕರ್ಯದ ಜೊತೆಗೆ ಆರ್ಥಿಕ ಸಹಾಯ ನೀಡುವುದು ಅತ್ಯಗತ್ಯ. ಭಾರತ ಸರ್ಕಾರ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ನಮ್ಮ ದೇಶದ ಅರ್ಹ ಕ್ರೀಡಾಪಟುಗಳ ಸಂಭವನೀಯ ಪಟ್ಟಿಯನ್ನು ಸಿದ್ಧಪಡಿಸಿದೆ ಎಂದಿದ್ದಾರೆ.
Advertisement
ಕೆ.ಆರ್. ಪೇಟೆಯಲ್ಲಿ ನಿರ್ಮಿಸಲಾಗುತ್ತಿದೆ ಹೈಟೆಕ್ ಕ್ರೀಡಾಂಗಣ
ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನಲ್ಲಿ ಅತ್ಯಂತ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. ಕ್ರೀಡಾಂಗಣ ಯಾವ ರೀತಿ ಇರಬೇಕು, ಯಾವೆಲ್ಲ ಕ್ರೀಡೆಗೆ ಅಗತ್ಯವಾದ ಸೌಲಭ್ಯ ಇರಬೇಕು ಎಂಬಿತ್ಯಾದಿ ವಿಚಾರವಾಗಿ ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು.@CMofKarnataka pic.twitter.com/WReLLF8NQm
— Dr.Narayana Gowda / ಡಾ.ನಾರಾಯಣ ಗೌಡ (@narayanagowdakc) June 24, 2021
Advertisement
ರಾಜ್ಯದ ಈಕ್ವೆಸ್ಟ್ರಿಯನ್ ಕ್ರೀಡಾಪಟು ಒಲಿಂಪಿಕ್ಸ್‌ಗೆ ಆಯ್ಕೆಯಾಗಿದ್ದಾರೆ. ರಾಜ್ಯದ ಇನ್ನೂ ನಾಲ್ವರು ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಹೀಗಾಗಿ ಅವರಿಗೆ ಪ್ರೋತ್ಸಾಹ ಧನ ನೀಡಿ ಬೆಂಬಲಿಸಬೇಕಾಗಿದೆ. ಐವರೂ ಕ್ರೀಡಾಪಟುಗಳು ರಾಜ್ಯದ, ರಾಷ್ಟ್ರದ ಕೀರ್ತಿಪತಾಕೆಯನ್ನು ಜಪಾನ್‍ನ ಟೋಕಿಯೋದಲ್ಲಿ ಹಾರಿಸಲಿ. ಮತ್ತಷ್ಟು ಕಠಿಣ ಶ್ರಮವಹಿಸಿ ಒಲಿಂಪಿಕ್ಸ್ ನಲ್ಲಿ ಪಾಲ್ಗೊಳ್ಳಬೇಕು. ಆದ್ದರಿಂದ ತಲಾ ರೂ. 10 ಲಕ್ಷ ನೀಡಿ ಪ್ರೋತ್ಸಾಹಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಂತೆಯೆ ರಾಜ್ಯ ಸರ್ಕಾರ ಕರ್ನಾಟಕದಕ್ರೀಡಾ ಪ್ರೋತ್ಸಾಹ ಧನ ಘೋಷಿಸಿ ಆದೇಶಿಸಿ ಶುಭಹಾರೈಸಿದ್ದಾರೆ.
Advertisement
ಪ್ರಪಂಚದಾದ್ಯಂತದ ಒಲಿಂಪಿಯನ್ನರು ತಮ್ಮ ಸಾಧನೆಯಿಂದ ಜಗತ್ತನ್ನು ಪ್ರೇರೇಪಿಸಿದ್ದಾರೆ.
ಅಂತಾರಾಷ್ಟ್ರೀಯ ಒಲಿಂಪಿಕ್ಸ್ ದಿನವಾದ ಇಂದು ಫಿಟ್‌ನೆಸ್ ಮತ್ತು ಸ್ಪೋರ್ಟ್ಸ್ ಗಾಗಿ ಮೀಸಲಿಡೋಣ.
ವ್ಯಾಯಾಮದೊಂದಿಗೆ ಆರೋಗ್ಯವಾಗಿರಿ, ಸದೃಢವಾಗಿರಿ ಮತ್ತು ಸಕ್ರಿಯರಾಗಿರಿ ಎಂಬುದು 2021ರ ಒಲಂಪಿಕ್ ದಿನದ ಥೀಮ್ ಆಗಿದೆ.#InternationalOlympicDay pic.twitter.com/b9GA6q5FND
— Dr.Narayana Gowda / ಡಾ.ನಾರಾಯಣ ಗೌಡ (@narayanagowdakc) June 23, 2021
Advertisement
ಸಂಭವನೀಯ ಪಟ್ಟಿಯಲ್ಲಿರುವ ಕ್ರೀಡಾಪಟುಗಳು:
ಪೌವಾದ್ ಮಿರ್ಜಾ – ಈಕ್ವೆಸ್ಟ್ರಿಯನ್ – ಆಯ್ಕೆಯಾಗಿದ್ದಾರೆ.
ಎಸ್.ವಿ. ಸುನೀಲ್ – ಹಾಕಿ – ಸಂಭವನೀಯ
ರೋಹನ್ ಬೋಪಣ್ಣ – ಟೆನ್ನಿಸ್ – ಸಂಭವನೀಯ
ಶ್ರೀಹರಿ ನಟರಾಜ್ – ಈಜು – ಸಂಭವನೀಯ
ಕುಮಾರಿ ಅದಿತಿ ಅಶೋಕ್ – ಗಾಲ್ಫ್ -ಸಂಭವನೀಯ
ಕ್ರೀಡೆಯಲ್ಲಿ ರಾಜ್ಯ, ರಾಷ್ಟ್ರಕ್ಕೆ ಕೀರ್ತಿ ತಂದು ಕೊಟ್ಟ ಮಂಡ್ಯ ಜಿಲ್ಲೆಯವರಾದ ಮಮತಾ ಶೆಟ್ಟಿ, ಸವಿತಾ, ಪವಿತ್ರ, ಭವ್ಯ ಅವರಂತೆ, ನಾವೂ ಸಾಧಿಸಬೇಕು ಎಂಬ ಹಂಬಲದಲ್ಲಿರುವ ಮಂಡ್ಯದ ಕ್ರೀಡಾ ವಿದ್ಯಾರ್ಥಿನಿಯರಿಗೆ ಸರ್ಕಾರ ಬಂಪರ್ ಕೊಡುಗೆ ನೀಡಿದೆ. @CMofKarnataka pic.twitter.com/6r7seigziB
— Dr.Narayana Gowda / ಡಾ.ನಾರಾಯಣ ಗೌಡ (@narayanagowdakc) June 22, 2021
ಪ್ರತಿಷ್ಕೃತ ಕ್ರೀಡಾಕೂಟದಲ್ಲಿ ಭಾರತ ತಂಡದ ಪರವಾಗಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪೂರ್ವ ತಯಾರಿ ಮತ್ತು ಬೆಂಬಲದ ದ್ಯೋತಕವಾಗಿ ತಮಿಳುನಾಡು ಮತ್ತು ಮಧ್ಯಪ್ರದೇಶ ರಾಜ್ಯಗಳು ತಲಾ ರೂ.10.00 ಲಕ್ಷ ಪ್ರೋತ್ಸಾಹ ಧನ ನೀಡಿವೆ. ಅದೇ ರೀತಿ ಕರ್ನಾಟಕ ಸಹ ಕ್ರೀಡಾಪಟುಗಳಿಗೆ ನಗದು ನೀಡಲಾಗುತ್ತಿದೆ. ಇದನ್ನೂ ಓದಿ: ಸಿಎಂಗೆ ರೆಬೆಲ್ ಶಾಸಕ ಯತ್ನಾಳ್ ಮತ್ತೆ ಟಾಂಗ್
ಪ್ರೋತ್ಸಾಹಧನ ನೀಡುವ ಸಂಬಂಧ ಇತ್ತೀಚೆಗೆ ನಡೆದ ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆಯುಕ್ತ ಡಾ. ಗೋಪಾಲಕೃಷ್ಣ ಹಾಗೂ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.