ಟೋಕಿಯೋ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಮೊದಲ ದಿನವೇ ಭಾರತ ಶುಭಾರಂಭ ಮಾಡಿದೆ. 49 ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ 26 ವರ್ಷದ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದು ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ಗಳಿಸಿ ಕೊಟ್ಟಿದ್ದಾರೆ.
Advertisement
ಚೀನಾದ ಹೊ ಜಿಹೂಹು ಒಟ್ಟು 210 ಕೆಜಿ (94+116 ಕೆಜಿ) ಭಾರ ಎತ್ತಿ ಚಿನ್ನದ ಪದಕ ಬೇಟೆಯಾಡಿದರೆ, ಮೀರಾಬಾಯಿ ಚಾನು 202 ಕೆಜಿ (87+115 ಕೆಜಿ) ಭಾರ ಎತ್ತಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು. ಇಂಡೋನೇಷ್ಯಾದ ಐಸಾಹ್ ವಿಂಡಿ ಕಾಂಟಿಕಾ ವಿಂಡಿ 194 ಕೆಜಿ (84+110ಕೆಜಿ) ಕಂಚಿನ ಪದಕ ಪಡೆದರು.
Advertisement
Could not have asked for a happier start to @Tokyo2020! India is elated by @mirabai_chanu’s stupendous performance. Congratulations to her for winning the Silver medal in weightlifting. Her success motivates every Indian. #Cheer4India #Tokyo2020 pic.twitter.com/B6uJtDlaJo
— Narendra Modi (@narendramodi) July 24, 2021
Advertisement
84 ಕೆಜಿ ಮತ್ತು 87 ಕೆಜಿ ಭಾರವನ್ನು ಯಶಸ್ವಿಯಾಗಿ ಎತ್ತಿದ ಮಿರಾಬಾಯ್ ಚಾನು 89 ಕೆಜಿ ಭಾರ ಎತ್ತುವಲ್ಲಿ ವಿಫಲರಾದರು. ಆದರೆ ಚೀನಾದ ಸ್ಪರ್ಧಿ ಜಿಹೂಹು 94 ಕೆಜಿ ಭಾರ ಎತ್ತಿ ಒಲಿಂಪಿಕ್ ದಾಖಲೆ ಬರೆದರು.
Advertisement
That's how you go into the history books! ????
Saikhom Mirabai Chanu – Olympic silver medallist ????????#BestOfTokyo | #Tokyo2020 | #UnitedByEmotion | #StrongerTogether | @mirabai_chanu pic.twitter.com/r1wpEerN9u
— Olympic Khel (@OlympicKhel) July 24, 2021
ಇದು ಒಲಿಂಪಿಕ್ಸ್ ನಲ್ಲಿ ಭಾರ ಎತ್ತುವ ಸ್ಪರ್ಧೆಯಲ್ಲಿ ಭಾರತದ ಶ್ರೇಷ್ಠ ಸಾಧನೆಯಾಗಿದೆ. ಈ ಹಿಂದೆ ಸಿಡ್ನಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕ ಗೆದ್ದು ಸಾಧನೆ ಮಾಡಿದ್ದರು. 69 ಕೆಜಿ ವಿಭಾಗದಲ್ಲಿ ಕರ್ಣಂ ಮಲ್ಲೇಶ್ವರಿ ಅವರು ಕಂಚಿನ ಪದಕ ಗಳಿಸಿದ್ದರು.
Heartiest congratulations to Mirabai Chanu for starting the medal tally for India in the Tokyo Olympics 2020 by winning silver medal in weightlifting.
— President of India (@rashtrapatibhvn) July 24, 2021
ಮಣಿಪುರದ ಚಾನು ಬೆಳ್ಳಿ ಪದಕ ಪಡೆಯುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಸ್ಟಾರ್ ಆದ್ರು. ಮೀರಾಬಾಯಿ ಚಾನು ಹೆಸರು ಟ್ವಿಟ್ಟರ್‍ನಲ್ಲಿ ಟ್ರೆಂಡ್ ಆಗಲು ಶುರುವಾಯಿತು. ಮೀರಾಬಾಯಿ ಸಾಧನೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲಾದ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
#WATCH | Manipur: Family and neighbours of weightlifter Mirabai Chanu burst into celebrations as they watch her win the #Silver medal for India in Women's 49kg category. #OlympicGames pic.twitter.com/F2CjdwpPDc
— ANI (@ANI) July 24, 2021