ಮುಂಬೈ: ನಟನೆಯಲ್ಲೂ ಮಿಂಚಿದ್ದ ಸುಶಾಂತ್ ಸಿಂಗ್ ರಜಪೂತ್ ಅಧ್ಯಯನದಲ್ಲೂ ಮುಂದಿದ್ದರು. ರ‍್ಯಾಂಕ್ ವಿದ್ಯಾರ್ಥಿಯಾಗಿದ್ದ ಇವರು ಎಂಜಿನಿಯರಿಂಗ್ ಓದಿದ್ದರು.
1986ರ ಜನವರಿ 21ರಂದು ಬಿಹಾರ ಪಾಟ್ನಾದಲ್ಲಿ ಜನಿಸಿದ್ದ ಸುಶಾಂತ್ ರಾಷ್ಟ್ರಮಟ್ಟದ ಫಿಸಿಕ್ಸ್ ಒಲಿಂಪಿಯಾಡ್‌ನಲ್ಲಿ ಭಾಗವಹಿಸಿ ಬಹುಮಾನ ಗೆದ್ದಿದ್ದರು. 2003ರ ದೆಹಲಿ ಕಾಲೇಜ್ ಆಫ್ ಎಂಜಿನಿಯರಿಂಗ್ ಪರೀಕ್ಷೆಯಲ್ಲಿ 7ನೇ ರ‍್ಯಾಂಕ್ ಪಡೆದಿದ್ದರು. ಬಳಿಕ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಓದಿದ್ದರು. ಈ ವೇಳೆ ಓದಿನ ಕಡೆ ಹೆಚ್ಚು ಒಲವು ನೀಡದ ಪರಿಣಾಮ ಹಲವು ವಿಷಯಗಳಲ್ಲಿ ಅನುತ್ತೀರ್ಣಗೊಂಡಿದ್ದರು. 4 ವರ್ಷದ ಎಂಜಿಯರಿಂಗ್ ಪದವಿಯಲ್ಲಿ ಸುಶಾಂತ್ ಮೂರು ವರ್ಷ ಮಾತ್ರ ಓದಿ ಅರ್ಧದಲ್ಲೇ ಶಿಕ್ಷಣ ಗುಡ್‌ಬೈ ಹೇಳಿ ಕಲಾ ಜೀವನದತ್ತ ಮುಖ ಮಾಡಿದರು.
Advertisement
ಎಂಜಿನಿಯರಿಂಗ್ ಓದುತ್ತಿರುವಾಗಲೇ ನೃತ್ಯ ತರಗತಿಗೆ ಸೇರಿ ನೃತ್ಯಪಟುವಾಗಿ ಗುರುತಿಸಿಕೊಂಡಿದ್ದರು. 51ನೇ ಫಿಲ್ಮ್‌ಫೇರ್ ಪ್ರಶಸ್ತಿ ಕಾರ್ಯಕ್ರಮದಲ್ಲಿ ನೃತ್ಯ ಮಾಡಿದ್ದ ಸುಶಾಂತ್ 2006ರ ಕಾಮನ್‌ವೇಲ್ತ್ ಗೇಮ್ಸ್ ಉದ್ಘಾಟನಾ ಸಮಾರಂಭದ ವೇಳೆ ನೃತ್ಯ ಪ್ರದರ್ಶನ ನೀಡಿದ್ದರು.
Advertisement
Advertisement
2009ರಲ್ಲಿ ಪವಿತ್ರ ರಿಸ್ತಾ ಸಿನಿಮಾಕ್ಕಾಗಿ ಇಂಡಿಯನ್ ಟೆಲಿವಿಷನ್ ಅಕಾಡೆಮಿ ಪ್ರಶಸ್ತಿ, 2010ರಲ್ಲಿ ಬೆಸ್ಟ್ ಸ್ಟಾರ್ ಎಂಟರ್‌ಟೈನ್ಮೆಂಟ್ ಪ್ರಶಸ್ತಿ ಸಿಕ್ಕಿತ್ತು. ಎಂಎಸ್ ಧೋನಿ ಅನ್‌ಟೋಲ್ಡ್ ಸ್ಟೋರಿ ಸಿನಿಮಾದ ಅಭಿನಯಕ್ಕಾಗಿ 2017ರಲ್ಲಿ ಆಸ್ಟ್ರೇಲಿಯಾದ ಮೆಲ್ಬರ್ನ್‌ನಲ್ಲಿ ನಡೆದ ಇಂಡಿಯನ್ ಫಿಲ್ಮ್ ಫೆಸ್ಟಿವಲ್ ಕಾರ್ಯಕ್ರಮದಲ್ಲಿ ಉತ್ತಮ ನಟ ಪ್ರಶಸ್ತಿಯನ್ನು ಗೆದ್ದಿದ್ದರು.
Advertisement
ಓದಿನಲ್ಲೂ, ನಟನೆಯಲ್ಲೂ ಮುಂದಿದ್ದ ಸುಶಾಂತ್ ಸಿಂಗ್ ರಜಪೂತ್ (34) ಆತ್ಮಹತ್ಯೆಗೆ ಶರಣಾಗಿದ್ದು ಯಾಕೆ ಎನ್ನುವುದು ಇನ್ನೂ ನಿಗೂಢವಾಗಿದೆ. ಮುಂಬೈ ಬಾಂದ್ರಾ ನಿವಾಸದಲ್ಲಿ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ.
ಖಾಸಗಿ ವಾಹಿನಿಯ ಪವಿತ್ರ ರಿಶ್ತಾ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದ ಸುಶಾಂತ್, ಕೈ ಪೋ ಚೇ ಸಿನಿಮಾ ಮೂಲಕ ಬಾಲಿವುಡ್ ಪ್ರವೇಶಿಸಿದ್ದರು. ತದನಂತರ ಬಿಡುಗಡೆಯಾಗಿದ್ದ ‘ಶುದ್ಧ್ ದೇಶಿ ರೊಮ್ಯಾನ್ಸ್’ ಸಿನಿಮಾದ ನಟನೆ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಜೀವನಾಧರಿತ ಚಿತ್ರ ಸುಶಾಂತ್ ಸಿಂಗ್ ದೊಡ್ಡ ಮಟ್ಟದ ಬ್ರೇಕ್ ನೀಡಿತ್ತು.