ಕಾರವಾರ: ಯಲ್ಲಾಪುರದಲ್ಲಿ ಖಾಸಗಿ ಶಾಲೆಯ 21 ವಿದ್ಯಾರ್ಥಿಗಳಿಗೆ ಹಾಗೂ ಇಬ್ಬರು ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿರುವುದು ಇಂದು ದೃಢಪಟ್ಟಿದೆ.
Advertisement
ಕೆಲವು ದಿನಗಳ ಹಿಂದೆ 10ನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಆತನ ಸಂಪರ್ಕ ಹೊಂದಿದ್ದ 123 ವಿದ್ಯಾರ್ಥಿಗಳ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ನಂತರ ಇಂದು 21 ವಿದ್ಯಾರ್ಥಿಗಳಿಗೆ ಹಾಗೂ ಇಬ್ಬರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ.
Advertisement
ಮಂಗಳವಾರ ಇವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದ ವಿದ್ಯಾರ್ಥಿಗಳ ಗಂಟಲು ದ್ರವ ಪರೀಕ್ಷೆಯನ್ನು ಮಾಡಲಾಗುವುದು. ಶಾಲೆಯನ್ನು ಸೀಲ್ ಡೌನ್ ಮಾಡುವ ಕುರಿತು ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಹಶೀಲ್ದಾರ್ ಶ್ರೀಕೃಷ್ಣ ಕಾಮಕರ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.
Advertisement
Advertisement
ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಕರೊನಾ ಸೋಂಕು ಕಾಣಿಸಿಕೊಂಡಿದ್ದು, ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಇವರ ಸಂಪರ್ಕದಲ್ಲಿರುವ ಇನ್ನೂ ಎಷ್ಟು ಜನರಿಗೆ ಸೋಂಕು ತಗುಲಿದೆಯೋ ಎಂಬ ಚಿಂತೆ ಕಾಡುತ್ತಿದೆ.