ಔರಾದ್ ತಾಲೂಕಿನಲ್ಲಿ ಮಳೆಯ ಅಬ್ಬರ- ಅಪಾರ ಪ್ರಮಾಣದ ಬೆಳೆ ಹಾನಿ

bdr rain

ಬೀದರ್: ಗಡಿ ಜಿಲ್ಲೆಯಲ್ಲಿ ಇಂದು ಸಂಜೆಯಿಂದ ಮಳೆಯ ಅಬ್ಬರ ಮುಂದುವರಿದಿದ್ದು, ಔರಾದ್ ತಾಲೂಕಿನಲ್ಲಿ ಅವಾಂತರಗಳು ಸೃಷ್ಟಿಯಾಗಿವೆ.

bdr rain 2 2 medium

ಮಹಾಮಳೆಗೆ ಔರಾದ್ ಸೇರಿದಂತೆ ಜಿಲ್ಲೆಯಲ್ಲಿ ಸೋಯಾ, ಹೆಸರು, ಕಡಲೆ ಸೇರಿದಂತೆ ವಿವಿಧ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಔರಾದ್ ತಾಲೂಕಿನ ಜಿರ್ಗಾ ಬಿ, ಶೆಂಬೆಳ್ಳಿ, ಜೋಜನಾ, ಹೆಡಗಾರಪುರ, ಮುಸ್ತಾಪೂರ್ ಸೇರಿದಂತೆ ಹಲವು ಗ್ರಾಮಗಳಲ್ಲಿ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

bdr rain 2 1 medium

ವರುಣನ ಅಬ್ಬರಕ್ಕೆ ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದು, ಇಷ್ಟೆಲ್ಲ ಬೆಳೆ ಹಾನಿಯಾದರೂ ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿಲ್ಲ. ಹೀಗಾಗಿ ಸ್ಥಳೀಯ ಹೋರಾಟಗಾರು ಆಕ್ರೊಶ ವ್ಯಕ್ತಪಡಿಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *