ಬೆಂಗಳೂರು: ರಾಜ್ಯಕ್ಕೆ ನಿಗದಿಪಡಿಸಿದ ರೆಮ್‍ಡಿಸಿವರ್ ಕೋಟಾವನ್ನು ಸಕಾಲಕ್ಕೆ ಸರಿಯಾಗಿ ಪೂರೈಕೆ ಮಾಡದಿರುವ ಔಷಧ ಕಂಪನಿಗಳಿಗೆ ನೊಟೀಸ್ ನೀಡಲಾಗಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥನಾರಾಯಣ ತಿಳಿಸಿದರು.
ರಾಜ್ಯಕ್ಕೆ ಏ. 21ರಿಂದ ಮೇ 9ರವರೆಗೆ 3,02,000 #Remdesivir ಹಂಚಿಕೆ ಆಗಿದ್ದು ಇನ್ನೂ 70,000 ಡೋಸ್‌ಗಳು ಬಾಕಿ ಇದ್ದು 2 ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೀಡುವ ಕಾರ್ಯ ನಡೆಯಲಿದೆ.
ಮೇ.10 ರಿಂದ 16ರವರೆಗೆ ಇರುವ ಬೇಡಿಕೆಯನ್ನು ಹೆಚ್ಚಿಸಲಾಗಿದೆ. ಇದನ್ನು ಪೂರೈಸಲು ಕಂಪನಿಗಳಿಗೆ ಸೂಚಿಸಲಾಗಿದೆ.https://t.co/CuoaNcLW5a
6/9
— Dr. Ashwathnarayan C. N. (@drashwathcn) May 8, 2021
Advertisement
ಮಲ್ಲೇಶ್ವರದಲ್ಲಿ ಭಾನುವಾರ ಸಂಜೆ ಮನೆ ಬಾಗಿಲಿಗೇ ಆಮ್ಲಜನಕ ಸಾಂದ್ರಕಗಳನ್ನು ಒದಗಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಮ್ಮ ನಿಗದಿತ ಕೋಟಾ ಕೊಡಲು ಕಂಪನಿಗಳಿಗೆ ಏನು ಸಮಸ್ಯೆ? ಕೊಡಬೇಕು ಎಂದರೆ ಕೊಡಬೇಕಷ್ಟೇ. ಅನಕ್ಷರಸ್ಥರಿಗೂ ಕಾನೂನಿನ ಅರಿವು ಇರುತ್ತದೆ. ದೊಡ್ಡ ದೊಡ್ಡ ಔಷಧ ಕಂಪನಿಗಳಿಗೆ ಇರುವುದಿಲ್ಲವೆ? ಒಂದು ದಿನ ಸಪ್ಲೈ ಮಾಡಿ ಇನ್ನೊಂದು ದಿನ ಮಾಡದಿದ್ದರೆ ಹೇಗೆ? ಎಂದು ಹರಿಹಾಯ್ದರು.
Advertisement
ಕೋವಿಡ್ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳನ್ನು ಸೂಕ್ತವಾಗಿ ಬಳಸಿಕೊಳ್ಳುವ ಜತೆ ಟೆಸ್ಟಿಂಗ್ ವೇಗ ಹೆಚ್ಚಿಸುವುದು, ಅಗತ್ಯ ವೈದ್ಯಕೀಯ ಸೌಲಭ್ಯ ಕಲ್ಪಿಸುವುದು, #VaccinationDrive ಸೇರಿ ಕೋವಿಡ್ ನಿರ್ವಹಣೆಗೆ ಎಲ್ಲ ಅಗತ್ಯತೆಗಳನ್ನು ಆದ್ಯತೆ ಮೇರೆಗೆ ಪೂರೈಸುವ ಕಾರ್ಯ ಮಾಡಲಾಗುತ್ತಿದೆ.#SevaHiSangathan @BSYBJP @blsanthosh
9/9
— Dr. Ashwathnarayan C. N. (@drashwathcn) May 8, 2021
Advertisement
ಮಹಾರಾಷ್ಟ್ರದ ನಂತರ ಇಡೀ ದೇಶದಲ್ಲಿಯೇ ಅತಿಹೆಚ್ಚು ರೆಮ್‍ಡಿಸಿವರ್ ಹಂಚಿಕೆ ಆಗಿರುವುದು ಕರ್ನಾಟಕಕ್ಕೆ ಮಾತ್ರ. ಆದರೆ, ಪೂರೈಕೆ ನಿರಂತರತೆ ಇಲ್ಲದಿರುವುದೇ ಸಮಸ್ಯೆಯಾಗಿದೆ. ಇದನ್ನು ಸರಿ ಮಾಡುತ್ತೇವೆ. ಅದಕ್ಕೆ ಬೇಕಾದ ಎಲ್ಲ ಕ್ರಮ ಕೈಗೊಂಡಿದ್ದೇವೆ. ಸರಿಯಾಗಿ ಪೂರೈಕೆ ಮಾಡದಿದ್ದರೆ ಆ ಕಂಪನಿಗಳ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಗುಡುಗಿದರು.
Advertisement
RT-PCR ಪರೀಕ್ಷೆಗೆ ಲ್ಯಾಬ್‌ಗಳ ಯಾವುದೇ ಕೊರತೆ ಇಲ್ಲದ ಕಾರಣ ಪರೀಕ್ಷೆಗೆ ಒಳಗಾದ 24ಗಂಟೆಯೊಳಗೆ ರಿಪೋರ್ಟ್ ನೀಡುವ ಕೆಲಸ ಆಗಲಿದೆ. ತಡವಾಗಿ ರಿಪೋರ್ಟ್ ನೀಡುವುದರಿಂದ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಾಧ್ಯವಾಗುವುದಿಲ್ಲ. ಈ ನಿಟ್ಟಿನಲ್ಲಿ ಟೆಸ್ಟ್ ರಿಪೋರ್ಟ್ ನೀಡಲು ತಡವಾದರೆ ಪ್ರತಿ ಟೆಸ್ಟ್‌ಗೆ 100-150 ರೂ. ದಂಡ ವಿಧಿಸಲಾಗುವುದು.
7/9
— Dr. Ashwathnarayan C. N. (@drashwathcn) May 8, 2021
ಸರಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ನೇರವಾಗಿ ಸರಕಾರವೇ ರೆಮ್‍ಡಿಸಿವರ್ ನೀಡುತ್ತದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು ಪೋರ್ಟಲ್ ಮೂಲಕ ಪಡೆಯಬೇಕು. ಯಾರಿಗೂ ನಾವು ಕೈಗೆ ಈ ಔಷಧ ಕೊಡುವುದಿಲ್ಲ. ಯಾರಿಗೆ ಕೊಡುತ್ತೆವೆಯೋ ಆ ಸೋಂಕಿತರ ಮೊಬೈಲ್‍ಗೂ ಸಂದೇಶ ಹೋಗುತ್ತದೆ. ಎಲ್ಲವೂ ಪಾರದರ್ಶಕವಾಗಿರುತ್ತದೆ ಎಂದರು.