ಮುಂಬೈ: ನಟಿ ಕಂಗನಾ ರಣಾವತ್ ಅವರ ಖಾತೆಯನ್ನು ಟ್ವಿಟ್ಟರ್ ಸಸ್ಪೆಂಡ್ ಮಾಡಿದೆ. ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸಸ್ಪೆಂಡ್ ಮಾಡಲಾಗಿದೆ ಎಂದು ಟ್ವಿಟ್ಟರ್ ಹೇಳಿಕೊಂಡಿದೆ.
Advertisement
ಕಂಗನಾ ಮೇ 2 ರಂದು ಸರಣಿ ಟ್ವೀಟ್ ಮಾಡುವ ಮೂಲಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಕಮೆಂಟ್‍ಗಳನ್ನು ಮಾಡಿದ್ದರು. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಗಲಭೆ ಸೃಷ್ಟಿಯಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮಾಡುವ ಮೂಲಕ ಮಮತಾ ಬ್ಯಾನರ್ಜಿ ವಿರುದ್ಧ ಕಂಗನಾ ರಣಾವತ್ ಆಕ್ರೋಶ ವ್ಯಕ್ತಪಡಿಸಿದ್ದರು.
Advertisement
ಬಿಜೆಪಿ ಜಯಭೇರಿ ಬಾರಿಸಿದ ಅಸ್ಸಾಂ ಹಾಗೂ ಪುದುಚೆರಿಗಳಲ್ಲಿ ಯಾವುದೇ ರೀತಿಯ ಗಲಭೆ ನಡೆದಿಲ್ಲ. ಆದರೆ ಇದೀಗ ಟಿಎಂಸಿ ಜಯಗಳಿಸಿರುವ ಪಶ್ಚಿಮ ಬಂಗಾಳದಲ್ಲಿ ಕೊಲೆಗಳೇ ನಡೆಯುತ್ತಿವೆ ಬಂಗಾಳ ಉರಿಯುತ್ತಿದೆ ಎಂದು ಕಂಗನಾ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಇಂದಿರಾ ಗಾಂಧಿ ಕುರಿತು ಸಹ ಕಂಗನಾ ಟ್ವೀಟ್ ಮಾಡಿದ್ದರು.
Advertisement
Advertisement
ಮೇ 2ರಂದು ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಒಟ್ಟು 294 ಕ್ಷೇತ್ರಗಳ ಪೈಕಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 213 ಸ್ಥಾನಗಳಲ್ಲಿ ಜನಯಗಳಿಸುವ ಮೂಲಕ ಬಹುಮತ ಸಾಧಿಸಿದೆ. ಬಿಜೆಪಿ 77 ಸ್ಥಾನಗಳಲ್ಲಿ ಜಯಗಳಿಸಿದೆ.