– ಕ್ವೀನ್ ಗೆ ಶುರುವಾಯ್ತು ಬಂಧನ ಭೀತಿ?
– ಸೋದರಿ ರಂಗೋಲಿ ವಿರುದ್ಧ FIR
ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಬಾಂದ್ರಾ ನ್ಯಾಯಾಲಯ ಆದೇಶಿಸಿದೆ. ತುಮಕೂರು ಬಳಿಕ ಕಂಗನಾ ವಿರುದ್ಧ ಮತ್ತೊಂದು ಎಫ್‍ಐಆರ್ ದಾಖಲಾಗಿದ್ದು, ಇದೀಗ ನಟಿಗೆ ಬಂಧನದ ಭೀತಿ ಶುರುವಾಗಿದೆ. ಹಿಂದೂ-ಮುಸ್ಲಿಂ ಹೆಸರಲ್ಲಿ ಬಾಲಿವುಡ್ ವಿಭಜನೆಗೆ ಕಂಗನಾ ಮುಂದಾಗಿದ್ದರು ಅನ್ನೋ ಆರೋಪ ಕೇಳಿ ಬಂದಿದೆ. ಅದೇ ರೀತಿ ಕಂಗನಾ ಸೋದರಿ ರಂಗೋಲಿ ವಿರುದ್ಧವೂ ಪ್ರಕರಣ ದಾಖಲಾಗಿದೆ.
Advertisement
ಅರ್ಜಿದಾರ ಸಾಹಿಲ್ ಆಶ್ರಫ್ ಅಲಿ ಸೈಯದ್ ಆರೋಪವೇನು?: ಸಾಹಿಲ್ ಆಶ್ರಫ್ ಅಲಿ ಸೈಯದ್ ಎಂಬವರು ಕಂಗನಾ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿಯೊಂದನ್ನ ಸಲ್ಲಿಸಿದ್ದರು. ಕಂಗನಾ ರಣಾವತ್ ಕಳೆದ ಕೆಲ ತಿಂಗಳುಗಳಿಂದ ಸ್ವಜನಪಕ್ಷಪಾತ ಮತ್ತು ಫೇವರಿಟಿಸಂ ಹೆಸರಲ್ಲಿ ಬಾಲಿವುಡ್ ನ್ನು ಅವಮಾನಿಸುತ್ತಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆ ಮತ್ತು ಖಾಸಗಿ ವಾಹಿನಿಗಳಿಗೆ ನೀಡಿರುವ ಸಂದರ್ಶನದಲ್ಲಿ ಹಿಂದೂ ಮತ್ತು ಮುಸ್ಲಿಂ ಎಂದು ಕಲಾವಿದರನ್ನ ವಿಂಗಡನೆ ಮಾಡುವ ಮೂಲಕ ಉದ್ಯಮವನ್ನ ಇಬ್ಭಾಗಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ಸಾಹಿಲ್ ಅರ್ಜಿಯಲ್ಲಿ ಆರೋಪಿಸಿದ್ದರು. ಇದನ್ನೂ ಓದಿ: ಕೋರ್ಟ್ ಆದೇಶದಂತೆ ತುಮಕೂರಲ್ಲಿ ಕಂಗನಾ ವಿರುದ್ಧ ಎಫ್‍ಐಆರ್
Advertisement
Advertisement
ಕಂಗನಾ ಹಲವು ವಿವಾದಾತ್ಮಕ ಮತ್ತು ಸಮಾಜದ ಸ್ವಾಸ್ಥ್ಯ ಕದಡುವ ರೀತಿಯಲ್ಲಿ ಟ್ವೀಟ್ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದ್ದಾರೆ. ಇದರ ಜೊತೆ ಬಾಲಿವುಡ್ ನಲ್ಲಿರುವ ಹಲವು ಸಹದ್ಯೋಗಿಗಳ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಆರೋಪಿಸಿರುವ ಸಾಹಿಲ್ ನ್ಯಾಯಾಲಯಕ್ಕೆ ಕಂಗನಾ ಮಾಡಿರುವ ಟ್ವೀಟ್ ಸಾಕ್ಷ್ಯ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರದ ಬಳಿ ಕ್ಷಮೆ ಕೇಳು: ಕಂಗನಾಗೆ ರಾಖಿ ಸಾವಂತ್ ಆಗ್ರಹ
Advertisement
ಕಂಗನಾ ಬಂಧನ ಸಾಧ್ಯತೆ: ಬಾಂದ್ರಾ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಜಯದೇವ್ ವೈ. ಗುಲೆ, ನಟಿ ಕಂಗನಾ ರಣಾವತ್ ವಿರುದ್ಧ ಸಿಆರ್‍ಪಿಸಿ 156 (3) ಪ್ರಕಾರ ಎಫ್‍ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಂಗನಾ ಅವರನ್ನ ವಿಚಾರಣೆಗೆ ಒಳಪಡಿಸಬಹುದು ಮತ್ತು ನಟಿ ವಿರುದ್ಧ ಸಾಕ್ಷ್ಯ ಲಭ್ಯವಾದ್ರೆ ಬಂಧಿಸುವ ಸಾಧ್ಯತೆಗಳು ದಟ್ಟವಾಗಿವೆ. ಇದನ್ನೂ ಓದಿ: ಕಂಗನಾ ಕಟ್ಟಡ ನೆಲಸಮಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ: ಶಿವಸೇನೆ
ಕಂಗನಾ ಪ್ರತಿಕ್ರಿಯೆ: ತಮ್ಮ ವಿರುದ್ಧ ಎಫ್‍ಐಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕಂಗನಾ, ನನ್ನ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರದ ಪಪ್ಪು ಸೇನೆ ನನ್ನ ಹಿಂದೆಯೇ ಬಿದ್ದಿದೆ. ನೀವು ನನ್ನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ನಾನೇ ನಿಮ್ಮ ಬಳಿ ಬರುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಂಗನಾ ವಿರುದ್ಧ ಡ್ರಗ್ ಪರೀಕ್ಷೆ – ಸಾಬೀತಾದ್ರೆ ಮುಂಬೈ ತೊರೆಯುತ್ತೇನೆ
ನಾಲ್ಕು ದಿನದ ಹಿಂದೆ ತುಮಕೂರಿನಲ್ಲಿ ಎಫ್‍ಐಆರ್: ಕಂಗನಾ ಟ್ವಿಟರ್ ನಲ್ಲಿ ರೈತರನ್ನ ಭಯೋತ್ಪಾದಕರು ಎಂದು ನಿಂದಿಸಿದ್ದಾರೆ ಎಂದು ಆರೋಪಿಸಿ ವಕೀಲ ರಮೇಶ್ ನಾಯ್ಕ್, ಜೆಎಂಎಫ್‍ಸಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಕೋರ್ಟ್ ನಿರ್ದೇಶನ ಮೇರೆಗೆ ನಟಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಕಂಗನಾ V/s ಮಹಾರಾಷ್ಟ್ರ ಸರ್ಕಾರ- ಮನೆ, ಕಚೇರಿ ನೆಲಸಮಕ್ಕೆ ಹೈಕೋರ್ಟ್ ತಡೆ-ಮಹಾರಾಷ್ಟ್ರ ಸರ್ಕಾರಕ್ಕೆ ಮುಖಭಂಗ
ಕೇಂದ್ರ ಸರ್ಕಾರ ಜಾರಿ ತಂದಿದ್ದ ಕೃಷಿ ತಿದ್ದುಪಡಿ ಮಸೂದೆ ವಿರೋಧಿಸಿ ರೈತರು ದೇಶಾದ್ಯಂತ ಪ್ರತಿಭಟನೆ ನಡೆಸಿದ್ದರು. ಹಲವು ರೈತ ಸಂಘಟನೆಗಳು ರಾಷ್ಟ್ರವ್ಯಾಪಿ ಬಂದ್‍ಗೆ ಕರೆ ನೀಡಿದ್ದರು. ಅಲ್ಲದೆ ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರಗೊಂಡಿತ್ತು. ಈ ಪ್ರತಿಭಟನೆ ಕುರಿತು ಕಂಗನಾ ರಣಾವತ್ ಟ್ವೀಟ್ ಮಾಡಿ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದರು. ಈ ಟ್ವೀಟ್ ಭಾರೀ ವಿವಾದ ಹುಟ್ಟಿಸಿತ್ತು. ಇದನ್ನೂ ಓದಿ: ಕಂಗನಾ ಮನೆ, ಆಫೀಸ್ ಕೆಡವಿದ ಬಿಎಂಸಿ – ನನ್ನ ಮುಂಬೈ ಪಿಓಕೆ ಆಗಿದೆಯೆಂದ ನಟಿ
ರೈತರಿಗೆ ಅವಮಾನ: ಈ ಸಂಬಂಧ ಹೈಕೋರ್ಟ್ ವಕೀಲ ರಮೇಶ್ ನಾಯಕ್ ಖಾಸಗಿ ದೂರು ದಾಖಲಿಸಿದ್ದು, ಸಂಸತ್ತಿನಲ್ಲಿ ಕೃಷಿ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದೆ. ಇದನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರನ್ನು ಭಯೋತ್ಪಾದಕರು ಎಂದು ಕಂಗನಾ ಟ್ವಿಟ್ಟರ್ ನಲ್ಲಿ ಅಪಮಾನಿಸಿದ್ದಾರೆ. ಇದರಿಂದ ಲಕ್ಷಾಂತರ ರೈತರಿಗೆ ಅಪಮಾನ ಮಾಡಿದ್ದಾರೆ ಎಂದು ನ್ಯಾಯಾಲಯದಲ್ಲಿ ಪಿಸಿಆರ್ ಕ್ರಿಮಿನಲ್ ದೂರನ್ನು ದಾಖಲಿಸಿದ್ದರು. ಇದನ್ನೂ ಓದಿ: ಶಿವಸೇನೆ ಧಮ್ಕಿ -ನಟಿ ಕಂಗನಾ ರಣಾವತ್‍ಗೆ ವೈ ದರ್ಜೆಯ ಭದ್ರತೆ
ಕಂಗನಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿಪಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದರು. ಪೊಲೀಸರು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ದೂರು ಸಲ್ಲಿಸಲು ಜಿಲ್ಲಾ ಪ್ರಧಾನ ಮತ್ತು ನ್ಯಾಯಾಧೀಶರಿಗೆ ಅನುಮತಿ ಕೋರಿದ್ದರು. ಅನುಮತಿ ಸಿಕ್ಕ ಹಿನ್ನೆಲೆಯಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಎಫ್‍ಐಆರ್ ದಾಖಲಿಸುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿತ್ತು. ಇದನ್ನೂ ಓದಿ: ನನ್ನ ಮನೆಯಂತೆ ನಾಳೆ ನಿನ್ನ ಅಹಂಕಾರ ನೆಲಸಮ ಆಗುತ್ತೆ: ಸಿಎಂ ಠಾಕ್ರೆ ವಿರುದ್ಧ ಕಂಗನಾ ಪ್ರಹಾರ