ಕಂಟೈನ್ಮೆಂಟ್ ಝೋನ್ ತೆರವುಗೊಳಿಸುವಂತೆ ಕೂಲಿಕಾರ್ಮಿಕರ ಪ್ರತಿಭಟನೆ

Public TV
1 Min Read
HVR PROTEST a

ಹಾವೇರಿ: ಕಂಟೈನ್ಮೆಂಟ್ ಪ್ರದೇಶ ತೆರವು ಮಾಡುವಂತೆ ಆಗ್ರಹಿಸಿ ಹಾವೇರಿ ಜಿಲ್ಲೆ ಸವಣೂರು ಪಟ್ಟಣದ ಎಸ್.ಎಂ.ಕೃಷ್ಣ ನಗರ ಮತ್ತು ರಾಜೀವಗಾಂಧಿ ನಗರದ ನಿವಾಸಿಗಳಿಂದ ಪ್ರತಿಭಟನೆ ನಡೆಸಿದ್ದಾರೆ.

ಮೇ 4 ರಂದು ಪ್ರದೇಶದ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದ ಇಡೀ ಪ್ರದೇಶವನ್ನು ಜಿಲ್ಲಾಡಳಿತ ಸಂಪೂರ್ಣ ಸೀಲ್ ಡೌನ್ ಮಾಡಿತ್ತು. ಅಲ್ಲದೇ ಸೋಂಕಿತನಿಂದ ಪ್ರದೇಶದಲ್ಲಿ ಮತ್ತೆ ಮೂವರಿಗೆ ಸೋಕು ಕಾಣಿಸಿಕೊಂಡಿತ್ತು. ಸದ್ಯ ಮೂವರು ಸೋಂಕಿತರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆದರೂ ಪ್ರದೇಶಗದಲ್ಲಿ ಸೀಲ್‍ಡೌನ್ ತೆರವು ಮಾಡದ್ದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೇ 23, ಮೇ 25 ಮತ್ತು ಜೂನ್ 1 ರಂದು ಆಸ್ಪತ್ರೆಯಿಂದ ಮೂವರು ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. ಕೂಲಿ ಕೆಲಸವನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದೇವೆ. ಕೂಡಲೇ ಕಂಟೈನ್ಮೆಂಟ್ ಝೋನ್ ತೆರವುಗೊಳಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಸವಣೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾರೆ.

HVR PROTEST

Share This Article