ದಾವಣಗೆರೆ: ಕೊರೊನಾ ಸೋಂಕಿತನ ಏರಿಯಾವನ್ನು ಕಂಟೈನ್ಮೆಂಟ್ ಝೋನ್ ಆಗಿ ಮಾಡಲು ಜಿಲ್ಲಾಡಳಿತ ಮುಂದಾಗಿದ್ದು, ಇದಕ್ಕೆ ಜನರು ವಿರೋಧ ವ್ಯಕ್ತಪಡಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಶಿವನಗರದಲ್ಲಿ ಕಂಟೈನ್ಮೆಂಟ್ ಝೋನ್ ಮಾಡಲು ಜನರು ವಿರೋಧ ಮಾಡುತ್ತಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಯುವಕನ ಏರಿಯಾವನ್ನು ಕಂಟೈನ್‍ಮೆಂಟ್ ವಲಯವನ್ನಾಗಿ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಈ ವೇಳೆ ಕಂಟೈನ್ಮೆಂಟ್ ಝೋನ್ ಮಾಡಬೇಡಿ ಎಂದು ನೂರಾರು ಜನರು ತಡೆದಿದ್ದಾರೆ.
Advertisement
Advertisement
ಅಜ್ಮೀರ್‌ನಿಂದ ದಾವಣಗೆರೆಗೆ ಆಗಮಿಸಿದ್ದ 22 ವರ್ಷದ ಯುವಕನಿಗೆ ಕೊರೊನಾ ಬಂದಿದೆ. ರೋಗಿ ನಂಬರ್ 847 ಯುವಕ ಶಿವನಗರದ ನಿವಾಸಿ. ಹೀಗಾಗಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಯುವಕನ ಇಡೀ ಏರಿಯಾವನ್ನು ಕಂಟೈನ್ಮೆಂಟ್ ಝೋನ್ ಮಾಡಲು ಜಿಲ್ಲಾಡಳಿತ ಹೋಗಿದೆ. ಆಗ ಶಿವನಗರ ನಿವಾಸಿಗಳು ಕಂಟೈನ್ಮೆಂಟ್ ಝೋನ್ ಮಾಡದಂತೆ ಅಡ್ಡಿಪಡಿಸಿದ್ದಾರೆ.
Advertisement
ನೂರಾರು ಜನರು ಒಂದೇ ಸ್ಥಳದಲ್ಲಿ ಆಗಮಿಸಿ ವಿರೋಧ ವ್ಯಕ್ತಪಡಿಸಿದ್ದಾರೆ. ಜೊತೆಗೆ 144 ಸೆಕ್ಷನ್ ಇದ್ದರೂ ಕೂಡ ಜನರು ಉಲ್ಲಂಘನೆ ಮಾಡಿದ್ದಾರೆ. ಅಲ್ಲದೇ ಪೊಲೀಸರಿಗೆ ಹಾಗೂ ನಿವಾಸಿಗಳ ನಡುವೆ ವಾಗ್ವಾದ ನಡೆದಿದೆ. ಒಂದೇ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಕಂಟೈನ್ಮೆಂಟ್ ಝೋನ್ ಮಾಡುತ್ತೀರ ಎಂದು ಜನರು ಆರೋಪ ಮಾಡಿದ್ದಾರೆ.
Advertisement