-ಇಬ್ಬರಿಗೆ ಗಂಭೀರ ಗಾಯ
ಚೆನ್ನೈ: ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾಗ ಕಟ್ಟಡ ಕುಸಿದು ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಇದೇ ಅವಘಡದಲ್ಲಿ ಮತ್ತಿಬ್ಬರು ಗಾಯಗೊಂಡಿದ್ದಾರೆ.
Advertisement
ಎಲೆಕ್ಟ್ರಿಕಲ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆ ವೇಳೆ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾಗ ಕಟ್ಟಡ ಕುಸಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಕೆ.ಶಿವರಾಜನ್ ಮತ್ತು ಪಿ.ಕೃಷ್ಣಮೂರ್ತಿ ಮೃತ ಸಿಬ್ಬಂದಿ. ಆಸ್ಪತ್ರೆಗೆ ಸಾಗಿಸುವ ಸಮಯದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಸಾವನ್ನಪ್ಪಿದ ಅಗ್ನಿಶಾಮದಳದ ಸಿಬ್ಬಂದಿಯ ಕುಟುಂಬದ ಒಬ್ಬ ಸದಸ್ಯರಿಗೆ ಅರ್ಹತೆಯ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡುತ್ತೇವೆ. ಈ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೂ 25 ಲಕ್ಷ ಪರಿಹಾರ ನೀಡುತ್ತೇವೆ ಎಂದು ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಸಿಬ್ಬಂದಿಯ ಸಾವಿಗೆ ಸಂತಾಪ ಸೂಚಿಸಿ, ಪರಿಹಾರ ಘೋಷಿಸಿದ್ದಾರೆ.
Advertisement
ಈ ಅವಘಡದಲ್ಲಿ ಗಾಯಗೊಂಡ ಆರ್ ಕಲ್ಯಾಣಕುಮಾರ್ ಮತ್ತು ಚಿನ್ನಕರುಪ್ಪು ಅವರಿಗೆ ತಲಾ 3 ಲಕ್ಷ ಆರ್ಥಿಕ ನೆರವು ನೀಡುತ್ತೇವೆ. ಇವರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಲಿದೆ. ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದೇವೆ ಎಂದು ಸಿಎಂ ಸೂಚಿಸಿದ್ದಾರೆ.
Tamil Nadu: Fire broke out at a shop in Navabathkana area of Madurai late last night; two fire officers have lost their lives in the fire fighting operations.
More details awaited. pic.twitter.com/1WBch7nutw
— ANI (@ANI) November 14, 2020