ಬೆಂಗಳೂರು: ಅಪಾರ್ಟ್‌ಮೆಂಟ್ ಖರೀದಿಸುವ ಮಂದಿಗೆ ಸಿಎಂ ಯಡಿಯೂರಪ್ಪ ಗುಡ್‌ನ್ಯೂಸ್ ನೀಡಿದ್ದಾರೆ.
ಕೈಗೆಟಕುವ ದರಗಳ ಮನೆಗಳನ್ನು ಪ್ರೋತ್ಸಾಹಿಸಲು, 35 ಲಕ್ಷ ರೂ.ಗಳಿಂದ 45 ಲಕ್ಷ ರೂ.ಗಳವರೆಗಿನ ಮೌಲ್ಯದ ಅಪಾರ್ಟ್‌ಮೆಂಟ್‌ಗಳ ಮೊದಲನೇ ನೋಂದಣಿಗೆ ಇದ್ದ ಮುದ್ರಾಂಕ ಶುಲ್ಕವನ್ನು ಶೇ.5 ರಿಂದ ಶೇ.3ಕ್ಕೆ ಕಡಿಮೆ ಮಾಡುವುದಾಗಿ ಹೇಳಿದ್ದಾರೆ.
2020-21ನೇ ಸಾಲಿನ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 12,655 ಕೋಟಿ ರೂ. ಆದಾಯ ನಿಗದಿ ಪಡಿಸಲಾಗಿತ್ತು. ಆದರೆ ಫೆಬ್ರವರಿ ಅಂತ್ಯಕ್ಕೆ 9,014 ಕೋಟಿ ರೂ. ಆದಾಯ ಸಂಗ್ರಹವಾಗಿದೆ.
2021-22ನೇ ಆರ್ಥಿಕ ವರ್ಷದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 12,655 ಕೋಟಿ ರೂ. ಆದಾಯ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.