– ಡಿಕೆಶಿ ಬಳಿ ಸಿಡಿ ಇದೆ
– ನನ್ನ ಬಳಿ ಸಿಡಿ ಇದ್ದರೆ ಡಿಸಿಎಂ ಆಗ್ತಿದ್ದೆ
– ಬಿಜೆಪಿ ಶಾಸಕರಿಗಿಂತ ಕೈ ಶಾಸಕರಿಗೆ ಹೆಚ್ಚಿನ ಅನುದಾನ
ಬಾಗಲಕೋಟೆ: ರಾಜ್ಯ ರಾಜಕೀಯದಲ್ಲಿ ಸಿಡಿ ಕುರಿತು ಭಾರೀ ಚರ್ಚೆ ನಡೆಯುತ್ತಿದ್ದು, ಇದೀಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಿಡಿ ಕುರಿತು ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
Advertisement
ಕೂಡಲಸಂಗಮದಲ್ಲಿ ಮಾತನಾಡಿದ ಅವರು, ಕಣ್ಣಿನಿಂದ ನೋಡಲಾಗದಂತಹ ದೃಶ್ಯಗಳು ಸಿಡಿಯಲ್ಲಿದೆ. ಈ ಕುರಿತು ಕಾಲಕ್ರಮೇಣ ಇದು ತಿಳಿಯಲಿದೆ. ಈ ಕುರಿತು ಮುಕ್ತ ತನಿಖೆಯಾಗಬೇಕಾದಲ್ಲಿ ಸಿಬಿಐಗೆ ವಹಿಸಬೇಕು. ಹಿಂದೆ ಇದ್ದದ್ದೇ ಆ ಸಿಡಿ, ಯಾರೊಂದಿಗೆ ಇದೆ ಅಂತ ಎಲ್ಲರಿಗೂ ಗೊತ್ತೇ ಇದೆ. ನಾನು ಆ ಬಗ್ಗೆ ಏನೂ ಹೇಳಬೇಕಿಲ್ಲ. ಆ ಸಿಡಿಯನ್ನೇ ಮೂವರು ನನ್ನ ಬಳಿ ತೆಗೆದುಕೊಂಡು ಬಂದಿದ್ದರು. ಅದರಲ್ಲಿ ಇಬ್ಬರು ಈಗ ಸಚಿವರಾಗಿದ್ದಾರೆ. ನನ್ನ ಬಳಿ ಆ ಸಿಡಿ ಇದ್ದಿದ್ದರೆ ನಾನೇ ಉಪಮುಖ್ಯಮಂತ್ರಿ ಆಗಿರುತ್ತಿದ್ದೆ. ಆ ಸಿಡಿಯನ್ನ ಇಟ್ಟುಕೊಂಡೇ ಕಾಂಗ್ರೆಸ್ಸಿಗರು ಅನುದಾನ ತೆಗೆದುಕೊಳ್ಳುತ್ತಿದ್ದಾರೆ. ಆ ಸಿಡಿ ಡಿಕೆಶಿ ಬಳಿಯೂ ಇದೆ. ನಿಜವಾಗಲೂ ವಿರೋಧ ಪಕ್ಷ ಆಗಿದ್ದರೆ ಸಿಡಿ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.
Advertisement
Advertisement
ಡಿಕೆಶಿ ಮಾತನಾಡೋ ದಾಟಿಯಲ್ಲೇ ಅವರ ಬಳಿ ಸಿಡಿ ಇದೆ ಅನ್ನೋದು ಗೊತ್ತಾಗುತ್ತದೆ. ಸಿಡಿ ಕುರಿತು ಸಿಬಿಐ ತನಿಖೆ ಆಗಲಿ. ಸಿದ್ದರಾಮಯ್ಯ, ಕೆ.ಜೆ.ಜಾರ್ಜ್, ಜಮೀರ್ ಅಹ್ಮದ್, ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರಕ್ಕೆ ಹೆಚ್ಚು ಅನುದಾನ ಹೋಗೋದೆ ಆ ಸಿಡಿ ಬ್ಲ್ಯಾಕ್ ಮೇಲ್‍ನಿಂದ ಎಂದು ಆರೋಪಿಸಿದರು.
Advertisement
ಸಿಡಿ ಅಂತೂ ಇದೆ. ಅದನ್ನು ಇನ್ನೂ ಕೆಲವರು ಇಟ್ಟುಕೊಂಡು ಬ್ಲ್ಯಾಕ್‍ಮೇಲ್ ಮಾಡುತ್ತಿದ್ದಾರೆ. ಅದಕ್ಕೆ ಕಾಲವೇ ಉತ್ತರ ಕೊಡುತ್ತೆ. ಕಾರ್ಯದರ್ಶಿ ಬಳಿ ಸಿಡಿಯಿದೆ ಎಂದು ಈ ಹಿಂದೆ ಡಿಕೆ ಶಿವಕುಮಾರ್ ಹಿಂದೆ ಹೇಳಿದ್ದರು. ಮೊದಲು ಅವರ ಮನೆಯೆ ಸ್ವಚ್ಛ ಇಲ್ಲ. ಹೀಗಾಗಿ ತನಿಖೆ ಮಾಡಲು ಅವರೇನು ಹೇಳುತ್ತಾರೆ. ನೀವು ವಿರೋಧ ಪಕ್ಷದ ನಾಯಕರಂತೆ ಕೆಲಸ ಮಾಡಿ, ನಿಮ್ಮ ಬಳಿಯಿರುವ ಸಿಡಿಯನ್ನು ಬಿಡುಗಡೆ ಮಾಡಿ ಎಂದು ನಾನು ಡಿಕೆಶಿಯವರನ್ನು ಅಗ್ರಹಿಸುತ್ತೇನೆ ಎಂದರು.
ಯುವರಾಜ್ ಪ್ರಕರಣ ಮುಚ್ಚಿಹಾಕಲಾಗಿದೆ: ಯುವರಾಜ್ ಬಂಧನವಾದ ಬಳಿಕ ಹಲವು ಸಚಿವರ ಜೊತೆ ಫೋಟೋ ತೆಗೆಸಿಕೊಂಡಿದ್ದನ್ನು ಬಿಡುಗಡೆ ಮಾಡಲಾಗಿದೆ. ಸಚಿವ ಸಂಪುಟ ವಿಸ್ತರಣೆ ಹೊತ್ತಲ್ಲೇ ಫೋಟೋ ಯಾಕೆ ಬಿಡುಗಡೆ ಮಾಡಿದಿರಿ. ಸಿಸಿಬಿ ದುರ್ಬಳಕೆ ಮಾಡಿಕೊಂಡು ಬಿಜೆಪಿ ನಾಯಕರ ಜೊತೆ ಯುವರಾಜ್ ಇದ್ದ ಫೋಟೋ ಬಿಡುಗಡೆ ಮಾಡಿದ್ದೀರಿ ಎಂದು ಯತ್ನಾಳ್ ಆರೋಪಿಸಿದ್ದಾರೆ. ಅಲ್ಲದೆ ಯುವರಾಜ್ ಪ್ರಕರಣವನ್ನು ಮುಚ್ಚಿ ಹಾಕಲಾಗುತ್ತಿದೆ ಎಂದಿದ್ದಾರೆ.
ದಲಿತ ಶಾಸಕನ ಮನೆ ಸುಡುವ ವಿಚಾರವಾಗಿ ಪ್ರತಿಯೊಂದು ವಿಷಯದಲ್ಲೂ ನೀವು ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದೀರಿ. ನಿಮ್ಮ ನಾಯಕಿ ಸೋನಿಯಾ ಬಗ್ಗೆ ನಿಮಗೆ ಗೌರವಯಿದ್ದರೆ ನಿಮ್ಮ ಬಳಿ ಇರುವ ಸಿಡಿಯನ್ನು ತಕ್ಷಣವೇ ಬಿಡುಗಡೆಮಾಡಿ. ಆ ಸಿಡಿ ತೋರಿಸಿಯೇ ನೀವು ಬಿಎಸ್‍ವೈ ಬಳಿ ಹೆಚ್ಚಿನ ಕೆಲಸ ಮಾಡಿಸಿಕೊಳ್ಳುತ್ತಿದ್ದೀರಿ. ಬಿಜೆಪಿ ಶಾಸಕರಿಗಿಂತ ಕಾಂಗ್ರೆಸ್ ಶಾಸಕರಿಗೆ ಹೆಚ್ಚು ಅನುದಾನ ಬಿಡುಗಡೆ ಅಗುತ್ತಿದೆ. ಬೆಳಗಾವಿಯಲ್ಲಿ ಅಭಯ ಪಾಟೀಲ್ ಅವರಿಗಿಂತ ಬೇರೆ ಪಕ್ಷದ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರಕ್ಕೆ ಹೆಚ್ಚು ಅನುದಾನ ಹೋಗಿದೆ. ಇದರ ಜೊತೆ ನೀವು ಶಿಕಾರಿಪುರ ಸೇರಿದಂತೆ ಕೆಲವೇ ಜಿಲ್ಲೆಗಳಿಗೆ ಸಿಎಂ ಅಗಿದ್ದೀರಿ. ನಿಮ್ಮನ್ನು ಸಿಎಂ ಸ್ಥಾನದಿಂದ ತೆಗೆಯುತ್ತಿದ್ದಾರೆಂಬ ಮಾತು ಕೇಳಿ ಬರುತ್ತಿದ್ದಂತೆ ಕೊಡಲ ಸಂಗಮಕ್ಕೆ 500 ಕೋಟಿ ರೂಪಾಯಿ ಘೋಷಣೆ ಮಾಡತ್ತೀರಿ. ದುಡ್ಡು ಎಲ್ಲಿದೆ, ಸುಮ್ಮನೆ ಘೋಷಣೆ ಮಾಡುತ್ತಾ ಹೋಗುತ್ತೀರಿ. ವಿಜಯಪುರ ವಿಮಾನ ನಿಲ್ದಾಣಕ್ಕೆ ಹಣ ನೀಡಿಲ್ಲ. ಅದರೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅನುದಾನ ನೀಡುತ್ತೀರಿ. ಸಿಎಂ ಅಗಿ ಈ ರೀತಿ ತಾರತ್ಯಮ ಮಾಡುವುದು ಸರಿನಾ ಎಂದು ಪ್ರಶ್ನಿಸಿದ್ದಾರೆ.