ಬೆಂಗಳೂರು: ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ. ಕನ್ನಡಿಗರ ತೆರಿಗೆ ಹಣದಲ್ಲಿ ಹಿಂದಿ ದಿವಸ್ ಆಚರಣೆ ಯೋಗ್ಯವಲ್ಲ. ಅದು ಕೇವಲ ಉತ್ತರ ಭಾರತದ ಕೆಲವು ರಾಜ್ಯಗಳಿಗೆ ಸೀಮಿತವಾಗಿದ್ದರೆ ಒಳಿತು ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಪ್ರತಿ ವರ್ಷ ಆಚರಿಸಲ್ಪಡುತ್ತಿರುವ ಹಿಂದಿ ದಿವಸ್ ಬಗ್ಗೆ ಫೇಸ್‌ಬುಕ್‌ನಲ್ಲಿ ದೀರ್ಘವಾದ ಪೋಸ್ಟ್ ಬರೆದು ದರ್ಶನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Advertisement
Advertisement
ಪೋಸ್ಟ್‌ನಲ್ಲಿ ಏನಿದೆ?
ಬಹಳ ವರ್ಷಗಳಿಂದಲೂ ಈ ಹಿಂದಿ ಹೇರಿಕೆ ಕಾಲ ಕ್ರಮೇಣ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕರ್ನಾಟಕದ ಬಾರ್ಡರ್ ಪ್ರದೇಶಗಳಲ್ಲಿ ಅನ್ಯ ಭಾಷೆಗಳ ಬಳಕೆಯಿಂದ ನಮ್ಮ ಕನ್ನಡ ಭಾಷೆಯ ಅಸ್ತಿತ್ವಕ್ಕೆ ಧಕ್ಕೆಯುಂಟಾಗುತ್ತಿದೆ. ಇದನ್ನು ಪ್ರತಿಭಟಿಸದೆ ನಾವು ಸುಮ್ಮನಿದ್ದರೆ ಮುಂದೆ ಕನ್ನಡಿಗ ಎನ್ನುವ ಅಸ್ತಿತ್ವವೇ ದೂರವಾಗುವ ದಿನಗಳು ಹತ್ತಿರದಲ್ಲೇ ಇದೆ.
Advertisement
ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ. ಕನ್ನಡಿಗರ ತೆರಿಗೆ ಹಣದಲ್ಲಿ ಹಿಂದಿ ದಿವಸ್ ಆಚರಣೆ ಯೋಗ್ಯವಲ್ಲ. ಅದು ಕೇವಲ ಉತ್ತರ ಭಾರತದ ಕೆಲವು ರಾಜ್ಯಗಳಿಗೆ ಸೀಮಿತವಾಗಿದ್ದರೆ ಒಳಿತು. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವುದು ನಮ್ಮ ಭಾರತ ಸಂವಿಧಾನದ ಪ್ರತೀಕವಾಗಿದೆ.
Advertisement
ಯಾವುದೋ ಉತ್ತರದ ಒಂದು ಪ್ರಾದೇಶಿಕ ಭಾಷೆಯನ್ನು ನಮ್ಮ ಮೇಲೆ ಹೇರಿ ನಮ್ಮ ಸಂಸ್ಕೃತಿ, ಭಾಷೆ, ನೆಲೆಯನ್ನು ಕಸಿದುಕೊಳ್ಳುವುದು ಹೀನಾಯಕರ ಸಂಗತಿಯೆಂದರೆ ತಪ್ಪಾಗಲಾರದು. ನಮ್ಮ ಕೊನೆಯುಸಿರಿರುವವರೆಗೂ ಕನ್ನಡ ಪರವಾಗಿ ನಿಲ್ಲುತ್ತೇವೆ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ.
ಹಲವು ಭಾಷೆ ಬಲ್ಲೆ.. ಹಲವು ಭಾಷೆಗಳಲ್ಲಿ ಕೆಲಸ ಮಾಡಬಲ್ಲೆ..ಆದರೆ ನನ್ನ ಕಲಿಕೆ..ನನ್ನ ಗ್ರಹಿಕೆ..ನನ್ನ ಬೇರು..ನನ್ನ ಶಕ್ತಿ…ನನ್ನ ಹೆಮ್ಮೆ..ನನ್ನ ಮಾತೃಭಾಷೆ ಕನ್ನಡ #ಹಿಂದಿ_ಹೇರಿಕೆ_ಬೇಡ ..NO #HindiImposition #justasking pic.twitter.com/B8RWHt8dVC
— Prakash Raj (@prakashraaj) September 13, 2020
ಬಹುಭಾಷಾ ಹಿರಿಯ ನಟ ಪ್ರಕಾಶ್ ರೈ ಅವರು, ಹಲವು ಭಾಷೆ ಬಲ್ಲೆ. ಹಲವು ಭಾಷೆಗಳಲ್ಲಿ ಕೆಲಸ ಮಾಡಬಲ್ಲೆ. ಆದರೆ ನನ್ನ ಕಲಿಕೆ, ನನ್ನ ಗ್ರಹಿಕೆ, ನನ್ನ ಬೇರು, ನನ್ನ ಶಕ್ತಿ, ನನ್ನ ಹೆಮ್ಮೆ ನನ್ನ ಮಾತೃಭಾಷೆ ಕನ್ನಡ ಹಿಂದಿ ಹೇರಿಕೆ ಬೇಡ ಎಂದು ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ವಿರೋಧವಿದೆ: ಹೆಚ್‍ಡಿಕೆ
ನನ್ನ ದೇಶ ಭಾರತ
ನನ್ನ ಬೇರು ಕನ್ನಡ
ಎಲ್ಲ ಭಾಷೆಯನ್ನು ಗೌರವಿಸುತ್ತೇನೆ
ನನ್ನ ಭಾಷೆಯನ್ನು ಹೆಚ್ಚು ಪ್ರೀತಿಸುತ್ತೇನೆ
ಯಾವುದೇ ಹೇರಿಕೆ ಸಲ್ಲದು.#StopHindiImposition #ServeInMyLanguage @dr_bhushana @PoornaMysore @baadalvirus @ImSimhaa @SathishNinasam pic.twitter.com/Ro3nPwaktg
— Gurudev Hoysala (@Dhananjayaka) September 14, 2020
ಕನ್ನಡದ ನಟ ಧನಂಜಯ್ ಅವರು, ನನ್ನ ದೇಶ ಭಾರತ. ನನ್ನ ಬೇರು ಕನ್ನಡ. ಎಲ್ಲ ಭಾಷೆಯನ್ನು ಗೌರವಿಸುತ್ತೇನೆ. ನನ್ನ ಭಾಷೆಯನ್ನು ಹೆಚ್ಚು ಪ್ರೀತಿಸುತ್ತೇನೆ. ಯಾವುದೇ ಹೇರಿಕೆ ಸಲ್ಲದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.