ಗದಗ: ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಮತ್ತೆ ಅಗ್ನಿ ಅವಘಡ ಸಂಭವಿಸಿದೆ. ಉತ್ತರ ಕರ್ನಾಟಕದ ಔಷಧೀಯ ಸಸ್ಯಕಾಶಿ ಬೆಂಕಿಗಾಹುತಿಯಾಗಿದೆ.
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದ ಬಳಿ ಗುಡ್ಡಕ್ಕೆ ಬೆಂಕಿ ಬಿದ್ದಿದೆ. ಬೆಂಕಿಯ ಕೆನ್ನಾಲಿಗೆ ಅಪಾರ ಪ್ರಮಾಣದ ಔಷಧಿ ಸಸ್ಯಗಳು ಸುಟ್ಟುಭಸ್ಮವಾಗಿವೆ. ಸುಮಾರು ಹತ್ತಾರು ಹೆಕ್ಟೇರ್ ಪ್ರದೇಶದ ಔಷಧಿ ಸಸ್ಯಗಳು ಭಸ್ಮವಾಗಿವೆ. ಕೆಲ ಗಂಟೆಯಿಂದ ಬೆಂಕಿ ಹೊತ್ತಿಕೊಂಡಿದ್ದು, ಕೂಡಲೇ ಶಿರಹಟ್ಟಿ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟರು.
Advertisement
Advertisement
2017ರ ಏಪ್ರಿಲ್ ತಿಂಗಳಲ್ಲಿ ಕೂಡ ಕಪ್ಪತ್ತಗುಡ್ಡ ಬೆಂಕಿಯ ಕೆನ್ನಾಲಿಗೆಯಿಂದ ಧಗಧಗಿಸಿತ್ತು. ಅಂದು ಕೂಡ ಸುಮಾರು 1 ಹೆಕ್ಟರ್ ಗೂ ಅಧಿಕ ಪ್ರದೇಶದವರೆಗೆ ಬೆಂಕಿ ವ್ಯಾಪಿಸಿತ್ತು. ಇದರಿಂದ ಅಪಾರ ಪ್ರಮಾಣದ ಆಯುರ್ವೇದ ಔಷಧೀಯ ಸಂಪತ್ತು ಬೆಂಕಿಗೆ ಆಹುತಿಯಾಗಿತ್ತು. ಇದನ್ನೂ ಓದಿ: ಬೆಂಕಿಯ ಕೆನ್ನಾಲಿಗೆಗೆ ಧಗ-ಧಗಿಸಿದ ಸಸ್ಯಕಾಶಿ