ಬೆಂಗಳೂರು: ಕಬ್ಜ ಸಿನಿಮಾ ಚಿತ್ರೀಕರಣ ವೇಳೆ ನಟ ಉಪೇಂದ್ರ ಅವರ ತಲೆಗೆ ಗಾಯವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಸಿನಿಮಾದ ಸಾಹಸ ದೃಶ್ಯಗಳ ಚಿತ್ರೀಕರಣ ವೇಳೆ ರಾಡ್ ನಿಂದ ಪೆಟ್ಟು ಬಿದ್ದಿದೆ. ಗಾಯವಾದರೂ ಚಿತ್ರೀಕರಣ ನಿಲ್ಲಿಸದ ಉಪೇಂದ್ರ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಕಳೆದ ರಾತ್ರಿ ಮಿನರ್ವ ಮಿಲ್ ನಲ್ಲಿ ಆಯಿಲ್ ಮಾರ್ಕೆಟ್ ಸೆಟ್ ನಿರ್ಮಿಸಲಾಗಿತ್ತು. ಇಲ್ಲಿ ಸ್ಟಂಟ್ ಮಾಸ್ಟರ್ ರವಿವರ್ಮ ಮಾರ್ಗದರ್ಶನದಲ್ಲಿ ಚಿತ್ರದ ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿತ್ತು.
ಉಪೇಂದ್ರ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಆರ್.ಚಂದ್ರು ನಿರ್ಮಾಣದ ಜೊತೆ ಸಿನಿಮಾಗೆ ಆ್ಯಕ್ಟನ್ ಕಟ್ ಹೇಳುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣವಾಗುತ್ತಿದ್ದು, ಚಿತ್ರಕ್ಕಾಗಿ ಅದ್ಧೂರಿ ಸೆಟ್ ನಿರ್ಮಿಸಲಾಗಿದೆ.