– ತೋಟಗಾರಿಕೆ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನ
ಬೆಂಗಳೂರು: ಸಧ್ಯದಲ್ಲೇ ಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರ ನಿಷೇಧಿಸುವ ಸಾಧ್ಯತೆ ಇದೆ.
ಇಂದು ತೋಟಗಾರಿಕೆ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ವಾಹನ ಸಂಚಾರ ಸ್ಥಗಿತಕ್ಕೆ ತೀರ್ಮಾನ ಕೈಗೊಳ್ಳಲಾಗಿದ್ದು, ಅಧಿಕಾರಿಗಳ ಜೊತೆ ಸಭೆ ನಡೆಸಿದ ತೋಟಗಾರಿಕೆ ಇಲಾಖೆ ಸಚಿವ ನಾರಾಯಣ ಗೌಡ, ವಾಹನ ಸಂಚಾರ ನಿಷೇಧಿಸುವ ನಿರ್ಣಯವನ್ನು ಕೈಗೊಂಡರು. ಬಳಿಕ ಈ ಕುರಿತ ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿಗಳು ಕೈಗೊಳ್ಳಬೇಕು ಎಂದು ಸಚಿವ ನಾರಾಯಣಗೌಡ ತಿಳಿಸಿದರು.
Advertisement
Advertisement
ಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿ ಎಂದು ಪರಿಸರ ಪ್ರೇಮಿಗಳಿಂದ ಒತ್ತಾಯ ಕೇಳಿ ಬಂದಿತ್ತು. ಈ ಹಿನ್ನೆಲೆ ಇಂದು ಸಭೆ ಕರೆದು ಚರ್ಚಿಸಲಾಗಿದೆ. ಈ ಹಿಂದೆ ಪ್ರತಿ ಭಾನುವಾರ, ಸರ್ಕಾರಿ ರಜಾದಿನಗಳಂದು ಕಬ್ಬನ್ ಪಾರ್ಕ್‍ನಲ್ಲಿ ವಾಹನ ಸಂಚಾರ ಸ್ಥಗಿತ ಮಾಡಲಾಗುತ್ತಿತ್ತು. ಜೊತೆಗೆ ಪ್ರತಿದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 8 ಗಂಟೆವರೆಗೆ ವಾಹನ ಸಂಚಾರ ನಿಷೇಧಿಸಲಾಗಿತ್ತು. ಇದೀಗ ಸಂಪೂರ್ಣವಾಗಿ ವಾಹನ ಸಂಚಾರ ನಿಷೇಧಿಸಲು ನಿರ್ಣಯ ಕೈಗೊಳ್ಳಲಾಗಿದೆ.
Advertisement
Advertisement
ಕಬ್ಬನ್ ಪಾರ್ಕ್‍ಗೆ ಪ್ರತಿ ದಿನ ಬೆಳಗ್ಗೆ ಹಾಗೂ ಸಂಜೆ ವಾಯು ವಿಹಾರಕ್ಕಾಗಿ 4 ರಿಂದ 5 ಸಾವಿರ ಜನ ಬರುತ್ತಾರೆ. 5 ರಿಂದ 6 ಸಾವಿರ ಜನ ಪ್ರತಿ ನಿತ್ಯ ಪಾರ್ಕ್ ವೀಕ್ಷಣೆಗಾಗಿ ಬರುತ್ತಿದ್ದಾರೆ. ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಕಬ್ಬನ್ ಉದ್ಯಾನವನದಲ್ಲಿ ವಾಹನ ಸಂಚಾರ ನಿಷೇಧಿಸಬೇಕೆಂಬ ನಿರ್ಣಯ ಕೈಗೊಳ್ಳಲಾಗಿತ್ತು. ಜೂನ್ 30 ರಂದು ನಡೆದ ಸಭೆಯಲ್ಲಿ ಬಿಬಿಎಂಪಿ ನಿರ್ಧಾರ ತೆಗೆದುಕೊಂಡಿತ್ತು. ಜೂನ್ 3 ರಂದು ನಡೆದ ಭರವಸೆಗಳ ಸಮಿತಿ ಸಭೆಯಲ್ಲೂ ವಾಹನ ಸಂಚಾರ ನಿಷೇಧಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತವಾಗಿತ್ತು. ಇದೀಗ ಸಚಿವರು ಸಹ ಇದೇ ನಿಲುವು ವ್ಯಕ್ತಪಡಿಸಿದ್ದಾರೆ.