ಅಯೋಧ್ಯೆ: ರಾಮ ಜನ್ಮಭೂಮಿಯಲ್ಲಿ ರಾಮನ ದೇವಾಲಯ ನಿರ್ಮಾಣ ಕಾರ್ಯ ಇಂದಿನಿಂದ ಅಧಿಕೃತವಾಗಿ ಆರಂಭಗೊಂಡಿದೆ.
ರಾಮ ಮಂದಿರ ದೇವಾಲಯ ಸಂಬಂಧ ಮಾಹಿತಿ ನೀಡಲೆಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಹೆಸರಿನಲ್ಲಿ ಟ್ವಿಟ್ಟರ್‌ನಲ್ಲಿ ಖಾತೆಯನ್ನು ತೆರೆಯಲಾಗಿದೆ.
Advertisement
Advertisement
Advertisement
ರಾಮ ಮಂದಿರ ದೇವಾಲಯದ ನಿರ್ಮಾಣ ಕಾರ್ಯ ಆರಂಭಗೊಂಡಿದೆ. ಕೇಂದ್ರ ಕಟ್ಟಡ ಸಂಶೋಧನಾ ಸಂಸ್ಥೆ(ಸಿಬಿಆರ್‌ಐ), ಮದ್ರಾಸ್ ಐಐಟಿ ಮತ್ತು ಎಲ್ ಆಂಡ್ ಟಿ ಕಂಪನಿಯ ಎಂಜಿನಿಯರ್‌ಗಳು ಈಗ ಮಂದಿರ ನಿರ್ಮಾಣವಾಗುವ ಭಾಗದಲ್ಲಿರುವ ಮಣ್ಣನ್ನು ಪರೀಕ್ಷಿಸುತ್ತಿದ್ದಾರೆ. 36-40 ತಿಂಗಳ ಒಳಗಡೆ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಟ್ವೀಟ್ ಮಾಡಿ ತಿಳಿಸಿದೆ.
Advertisement
ಎರಡನೇ ಟ್ವೀಟ್‌ನಲ್ಲಿ, ಭಾರತದ ಪ್ರಾಚೀನ ಮತ್ತು ಸಾಂಪ್ರದಾಯಿಕ ನಿರ್ಮಾಣ ತಂತ್ರಗಳನ್ನು ಅನುಸರಿಸಿ ಮಂದಿರವನ್ನು ನಿರ್ಮಿಸಲಾಗುವುದು. ಭೂಕಂಪ, ಬಿರುಗಾಳಿ ಮತ್ತು ಇತರ ನೈಸರ್ಗಿಕ ವಿಕೋಪಗಳ ಸಂಭವಿಸಿದರೂ ಅದನ್ನು ತಡೆಯಬಲ್ಲ ಸಾಮರ್ಥ್ಯ ಇರುವ ದೇವಾಲಯವನ್ನು ಕಟ್ಟಲಾಗುತ್ತದೆ. ಮಂದಿರ ನಿರ್ಮಾಣದಲ್ಲಿ ಕಬ್ಬಿಣ ಬಳಕೆ ಮಾಡುವುದಿಲ್ಲ ಎಂದು ತಿಳಿಸಿದೆ.
ಈ ಟ್ವೀಟ್‌ಗೆ ಜನರು ಕಬ್ಬಿಣ ಇಲ್ಲದೇ ದೇವಾಲಯವನ್ನು ಹೇಗೆ ನಿರ್ಮಾಣ ಮಾಡಲಾಗುತ್ತದೆ ಎಂದು ಕೇಳುತ್ತಿದ್ದಾರೆ. ಇದಕ್ಕೆ ಕೆಲವರು ಹಿಂದಿನ ಕಾಲದ ದೇವಾಲಯದಲ್ಲಿ ಕಬ್ಬಿಣದ ಬಳಕೆ ಇರಲಿಲ್ಲ. ಕಬ್ಬಿಣದ ಬಳಕೆ ಮಾಡಿದರೆ ಹಲವು ವರ್ಷಗಳ ಬಳಿಕ ತುಕ್ಕು ಹಿಡಿಯುವ ಸಾಧ್ಯತೆ ಇರುತ್ತದೆ. ಈ ಹಿಂದೆ ನಿರ್ಮಾಣವಾದ ದೇವಾಲಯಗಳಲ್ಲಿ ಕಬ್ಬಿಣ ಇರಲಿಲ್ಲ. ಕಲ್ಲುಗಳನ್ನು ಬಳಸಿ ನಿರ್ಮಿಸಿದ ದೇವಾಲಯ ನೂರಾರು ವರ್ಷಗಳ ಕಾಲ ಬಾಳಿಕೆ ಬಂದಿದೆ ಎಂದು ಉತ್ತರಿಸಿದ್ದಾರೆ.
ಭೂಕಂಪ ಸಂಭವಿಸಿದರೂ ದೇವಾಲಯಕ್ಕೆ ಯಾವುದೇ ಹಾನಿ ಆಗದೇ ಇರುವ ಅತ್ಯುನ್ನತ ಮತ್ತು ಸಾಂಪ್ರದಾಯಿಕ ತಂತ್ರಜ್ಞಾನವನ್ನು ಬಳಸಿ ರಾಮ ಮಂದಿರವನ್ನು ನಿರ್ಮಿಸಲಾಗುತ್ತದೆ.
ಯಾವುದೇ ದೊಡ್ಡ ಕಟ್ಟಡವನ್ನು ನಿರ್ಮಿಸಿದಾಗ ಆ ಪ್ರದೇಶದಲ್ಲಿ ಎಷ್ಟು ಪ್ರಮಾಣದ ಭೂಕಂಪ ಸಂಭವಿಸಬಹುದು? ಎಷ್ಟು ತೀವ್ರತೆಯ ಭೂಕಂಪ ಸಂಭವಿಸಿದರೆ ಯಾವ ರೀತಿ ಹಾನಿಯಾಗಬಹುದು ಎಂಬುದನ್ನು ಲೆಕ್ಕಾಚಾರ ಹಾಕಿ ನಿರ್ಮಾಣ ಮಾಡಲಾಗುತ್ತದೆ. ಈ ಲೆಕ್ಕಾಚಾರವನ್ನು ರಾಮಮಂದಿರ ನಿರ್ಮಾಣಕ್ಕೂ ಮಾಡಲಾಗಿದೆ.
ರಿಕ್ಟರ್ ಮಾಪಕದಲ್ಲಿ 10ರಷ್ಟು ತೀವ್ರತೆ ದಾಖಲಾದರೂ ದೇವಾಲಯಕ್ಕೆ ಹಾನಿಯಾಗದಂತೆ ನಿರ್ಮಾಣ ಮಾಡಲಾಗುತ್ತದೆ. ಮಂದಿರ ನಿರ್ಮಾಣ ಸ್ಥಳದಲ್ಲಿ 200 ಅಡಿ ಅಗೆದು ಭೂಸಾರ ಪರೀಕ್ಷೆ ಮಾಡಲಾಗಿದೆ. ಸಾವಿರ ವರ್ಷವಾದರೂ ನಾಶವಾಗದ ರೀತಿಯಲ್ಲಿ ಮಂದಿರ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಆಗಾಗ ಭೂಕಂಪ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಜಪಾನ್ ದೇಶದಲ್ಲಿ ದೊಡ್ಡ ಕಟ್ಟಡವನ್ನು ನಿರ್ಮಾಣ ಮಾಡುವಾಗ ಇವುಗಳನ್ನು ಜಾಸ್ತಿ ಲೆಕ್ಕಾಚಾರ ಹಾಕಲಾಗುತ್ತದೆ.
ಅಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲನ್ಯಾಸ ಮಾಡಿದ್ದರು.