ಮಂಗಳೂರು: ರಾಜ್ಯದ ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.
ಇಂದು ಸಂಜೆಯಿಂದ ನಾಳೆ ರಾತ್ರಿಯವರೆಗೂ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ ಈ ಸಂದರ್ಭ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ನಾಳೆಯಿಂದ ಆಗಸ್ಟ್ 9ರವರೆಗೂ ಆರೆಂಜ್ ಅಲರ್ಟ್ ಘೋಷಿಸಿದ್ದು ಈ ಎಲ್ಲಾ ದಿನದಲ್ಲಿ ಕರಾವಳಿಯಾದ್ಯಂತ ಮೀನುಗಾರಿಕೆ ಸಂಪೂರ್ಣವಾಗಿ ನಿಷೇಧಿಸಲು ಸೂಚಿಸಿದೆ.
Advertisement
ಎಲ್ಲಿ ನೋಡಿದ್ರೂ ನೀರು- ಮಹಾಮಳೆಗೆ ತತ್ತರಿಸಿದ ಮುಂಬೈhttps://t.co/77qT3JyCbX#MumbaiRain #Rain
— PublicTV (@publictvnews) August 4, 2020
Advertisement
ಸಮುದ್ರ ಹಾಗೂ ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಹಾಗೂ ಮೀನುಗಾರರು ಮೀನುಗಾರಿಕೆ ನಡೆಸದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಕೊಡಗು ಜಿಲ್ಲೆಯ 15 ಪಂಚಾಯ್ತಿ ವ್ಯಾಪ್ತಿಯಲ್ಲಿ 100 ಮಿಲಿ ಮೀಟರ್ ಗೂ ಅಧಿಕ ದಾಖಲೆ ಮಳೆಯಾಗಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರುವಂತೆ ಜಿಲ್ಲಾಡಳಿತ ಸೂಚಿಸಿದೆ. ಮಡಿಕೇರಿಯ ಓಂಕಾರೇಶ್ವರ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಗುಡ್ಡ ಕುಸಿತವಾಗಿದೆ. ಚಿಕ್ಕಮಗಳೂರು- ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿಯಲ್ಲಿ ಗುಡ್ಡ ಕುಸಿತವಾಗಿದೆ.
Advertisement
ಕೊಡಗಿನ ಹದಿನೈದು ಪಂಚಾಯಿತಿ ವ್ಯಾಪ್ತಿಯಲ್ಲಿ 100 ಮಿ.ಮೀಟರ್ ದಾಖಲೆ ಮಳೆ
– ಎಚ್ಚರಿಕೆಯಿಂದಿರುವಂತೆ ಹೇಳಿದ ಜಿಲ್ಲಾಡಳಿತ
– ಮಡಿಕೇರಿಯಲ್ಲಿ ಗುಡ್ಡ ಕುಸಿತhttps://t.co/5yqPqvcQaQ#Kodagu #Rain #LandSlide #RedAlert
— PublicTV (@publictvnews) August 4, 2020