ಬೆಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗಕ್ಕೆ ಇನ್ನು 4 ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯ ಹವಾಮಾನ ಇಲಾಖೆ ಆಗಸ್ಟ್ 10 ರವರೆಗಿನ ಜಿಲ್ಲೆಗಳ ಹವಾಮಾನ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಈ ಮಾಹಿತಿಯ ಪ್ರಕಾರ ಕರಾವಳಿ ಜಿಲ್ಲೆಗಳಲ್ಲಿ ಇಂದು ರೆಡ್, ನಾಳೆ ಮತ್ತು ನಾಡಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದರೆ ಭಾನುವಾರ ಮತ್ತು ಸೋಮವಾರ ರೆಡ್ ಅಲರ್ಟ್ ಘೋಷಿಸಲಾಗಿದೆ.
Advertisement
Advertisement
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದಲ್ಲೂ ಧಾರಾಕಾರ ಮಳೆಯ ಎಚ್ಚರಿಕೆ ನೀಡಿದ್ದು ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಬಾಗಲಕೋಟೆ, ಕಲಬುರಗಿ, ಬೀದರ್, ರಾಯಚೂರು, ಚಾಮರಾಜನಗರದಲ್ಲಿ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಇದನ್ನೂ ಓದಿ: ಕೊಡಗಿನಲ್ಲಿ ಬೆಟ್ಟ ಕುಸಿತದಿಂದ ನಾಲ್ವರು ನಾಪತ್ತೆ- ಎನ್‍ಡಿಆರ್‍ಎಫ್ ತಂಡ ಸ್ಥಳಕ್ಕೆ ದೌಡು
Advertisement
Advertisement
ಎಷ್ಟು ಮಳೆಯಾಗುತ್ತೆ?
64.5 ಮಿ.ಮೀ ನಿಂದ 115.5 ಮಿ.ಮೀ ಒಳಗಡೆ ಮಳೆಯಾಗುವ ಸಾಧ್ಯತೆ ಇದ್ದರೆ ಯೆಲ್ಲೋ ಅಲರ್ಟ್ ಘೋಷಣೆಯಾಗುತ್ತದೆ. 115.6 ಮಿ.ಮೀ ನಿಂದ 204.4 ಮಿ.ಮೀ. ಒಳಗಡೆ ಮಳೆಯಾಗಲಿದ್ದರೆ ಆರೆಂಜ್ ಅಲರ್ಟ್ ಎಂದು ಪ್ರಕಟಿಸಲಾಗುತ್ತದೆ. 204.5 ಮಿ.ಮೀಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದ್ದರೆ ರೆಡ್ ಅಲರ್ಟ್ ಘೋಷಣೆ ಮಾಡಲಾಗುತ್ತದೆ.