– ಬಸ್ಸಿಗೆ ಕಲ್ಲು ತೂರಿದವರ ಮೇಲೆ ಎಫ್‍ಐಆರ್
ಚಾಮರಾಜನಗರ: ಸಾರಿಗೆ ನೌಕರರ ಮುಷ್ಕರ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಚಾಮರಾಜನಗರದಲ್ಲಿ ಮುಷ್ಕರದ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಪ್ರಶಂಸನಾ ಪತ್ರ ಹಾಗೂ ಸಿಹಿ ವಿತರಿಸಿ ಗೌರವಿಸಲಾಯಿತು.
ಚಾಮರಾಜನಗರ ವಿಭಾಗದಲ್ಲಿ ಮೊದಲ ಹಂತದಲ್ಲಿ 41 ಮಂದಿ ಸಿಬ್ಬಂದಿಗೆ ಪ್ರಶಂಸನಾ ಪತ್ರ ಹಾಗೂ ಸಿಹಿ ವಿತರಣೆ ಮಾಡಲಾಗಿದ್ದು, ಏಪ್ರಿಲ್ 7 ರಿಂದ ಕರ್ತವ್ಯ ಧಕ್ಕೆ ತರುತ್ತಿರುವ ಸಿಬ್ಬಂದಿಗೆ ಮಾರ್ಚ್ ತಿಂಗಳ ವೇತನ ಬಿಡುಗಡೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್ ತಿಳಿಸಿದ್ದಾರೆ.
ನಿನ್ನೆ ಚಾಮರಾಜನಗರ ವಿಭಾಗದಲ್ಲಿ 150ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್ ಗಳ ಕಾರ್ಯಾಚರಣೆ ನಡೆಸಿವೆ. ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಪ್ರೋತ್ಸಾಹಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಅವರು ಹೇಳಿದ್ದಾರೆ. ನಿನ್ನೆ ಕಿಡಿಗೇಡಿಗಳು ಎರಡು ಬಸ್ ಗಳ ಮೇಲೆ ಕಲ್ಲು ತೂರಿದ್ದಾರೆ.
ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಕೆಎಸ್‍ಆರ್‍ಟಿಸಿ ಬಸ್ಸುಗಳಿಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.