ಬೆಂಗಳೂರು: ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆಗಳು ರದ್ದುಗೊಂಡ ಬೆನ್ನಲ್ಲೇ ಕರ್ನಾಟಕದಲ್ಲೂ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಂಡಿದೆ.
ಶಿಕ್ಷಣ ಸಚಿವ ಸುರೇಶ್‍ಕುಮಾರ್ ಇಂದು ಸುದ್ದಿಗೋಷ್ಠಿ ನಡೆಸಿ ರದ್ದುಗೊಂಡಿರುವ ವಿಚಾರವನ್ನು ತಿಳಿಸಿದರು. ಎಲ್ಲಾ ವಿದ್ಯಾರ್ಥಿಗಳು ಗ್ರೇಡ್ ಆಧಾರಲ್ಲಿ ಪಾಸ್ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ರಾಜ್ಯದಲ್ಲಿ ಪರೀಕ್ಷೆ ನಡೆಸುವುದು, ರದ್ದಾಗುವುದು ತಜ್ಞರು ನೀಡುವ ವರದಿಯ ಮೇಲೆ ನಿಂತಿತ್ತು. ತಜ್ಞರ ವರದಿ ಆಧಾರಿಸಿ ಸರ್ಕಾರ ಈಗ ಅಂತಿಮ ನಿರ್ಧಾರವನ್ನು ಪ್ರಕಟಿಸಿದೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಮಕ್ಕಳು ಪರೀಕ್ಷೆ ಇಲ್ಲದೇ ಪಾಸ್: ಸುರೇಶ್ ಕುಮಾರ್
Advertisement
ಕಳೆದ ವರ್ಷ ತಜ್ಞರು ನೀಡಿದ ಸಲಹೆಯ ಆಧಾರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು. ಪಿಯುಸಿ ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ. ಆದೆ ಕೊರೊನಾ ಕಾಲದಲ್ಲಿ ಪರೀಕ್ಷೆ ನಡೆಸುವುದು ಬಹಳ ಅಪಾಯಕಾರಿ. ಪರೀಕ್ಷೆ ನಡೆಸದೇ ಹೋದರೂ ಸರ್ಕಾರಕ್ಕೆ ಸಮಸ್ಯೆಯಾಗಲಿದೆ. ಒಟ್ಟಿನಲ್ಲಿ ಪರೀಕ್ಷೆ ಎಂಬ ಅಡಕತ್ತರಿಯಲ್ಲಿ ಶಿಕ್ಷಣ ಇಲಾಖೆ ಸಿಲುಕಿತ್ತು.
Advertisement
Advertisement
ಪರೀಕ್ಷೆ ಇಲ್ಲದೆ ಪಾಸ್ ಏನಾಗಬಹುದು?
ಶೈಕ್ಷಣಿಕ ಗುಣಮಟ್ಟಕ್ಕೆ ಭಾರೀ ಹೊಡೆತ ಬೀಳುವುದರ ಜೊತೆಗೆ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಬಹುದು. ನೀಟ್, ಸಿಇಟಿ ಸೀಟ್ ಹಂಚಿಕೆಯಲ್ಲಿ ಭಾರೀ ಗೊಂದಲವಾಗಲಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪರೀಕ್ಷೆಯ ಬಳಿಕ ವಿದ್ಯಾರ್ಥಿಗಳು ಕೋರ್ಟ್ ಮೆಟ್ಟಿಲು ಏರಬಹುದು. ಅತ್ಯುತ್ತಮ ಕಾಲೇಜುಗಳಲ್ಲಿ ಪ್ರವೇಶಕ್ಕೆ ಸಿಕ್ಕಾಪಟ್ಟೆ ಬೇಡಿಕೆ ಸೃಷ್ಟಿಯಾಗಬಹುದು. ಕೆಲ ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಗೆ ಒಳಗಾಗಬಹುದು.
Advertisement
ಪರೀಕ್ಷೆ ನಡೆಸಿದ್ರೆ ಏನಾಗಬಹುದು?
ಶಿಕ್ಷಕರು, ವಿದ್ಯಾರ್ಥಿಗಳಿಗೆ ಕೋವಿಡ್ ಅಪಾಯವಾಗಿ ಸೋಂಕು ಸ್ಫೋಟ ಆಗಬಹುದು. ಕೋವಿಡ್ ಸಾವು ನೋವು ಹೆಚ್ಚಾಗಬಹುದು.
ತಜ್ಞರು ಏನು ಹೇಳಿದ್ರು?
ಕೊರೊನಾ ಸಮಯದಲ್ಲಿ ಪರೀಕ್ಷೆ ನಡೆಸುವುದು ಸೂಕ್ತ ಅಲ್ಲ. ಪರೀಕ್ಷೆಗೆ ಸರ್ಕಾರ ಆತುರ ಪಡಬಾರದು. ಪರೀಕ್ಷೆ ಮಾಡಲೇಬೇಕು ಅಂದರೆ ಸೋಂಕು ನಿಯಂತ್ರಣಗೊಂಡ ಬಳಿಕ ನಡೆಸಬಹುದು. ಶಾಲಾ-ಕಾಲೇಜುಗಳ ಹಂತದಲ್ಲಿಯೇ ಆಫ್‍ಲೈನ್ ಬದಲು ಆನ್‍ಲೈನ್ ಪರೀಕ್ಷೆ ನಡೆಸಬೇಕು.
ಪರೀಕ್ಷೆ ಬೇಡ ಎನ್ನುವವರ ವಾದ ಏನು?
ಕೊರೊನಾ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸಬಾರದು. ಮಕ್ಕಳ ಶಿಕ್ಷಣಕ್ಕಿಂತ ಮಕ್ಕಳ ಜೀವ ನಮಗೆ ಮುಖ್ಯ. ಈ ಕೊರೊನಾ ವರ್ಷದಲ್ಲಿ ಪರೀಕ್ಷೆಯೇ ಬೇಡ. ಸಿಬಿಎಸ್‍ಇ ಮಾದರಿಯಲ್ಲಿ ಎಲ್ಲರನ್ನು ಪಾಸ್ ಮಾಡಿ.
ಪರೀಕ್ಷೆ ಬೇಕು ಎನ್ನುವವರ ವಾದ ಏನಿತ್ತು?
ಸರ್ಕಾರ ಪರೀಕ್ಷೆ ರದ್ದು ಮಾಡಬಾರದು. ಸೆಕೆಂಡ್ ಪಿಯುಸಿ ಪರೀಕ್ಷೆ ಮುಖ್ಯ. ಸಾಮೂಹಿಕವಾಗಿ ಪಾಸ್ ನಿರ್ಧಾರ ಸರಿಯಲ್ಲ. ಒಂದು ವೇಳೆ ಎಲ್ಲರನ್ನೂ ಪಾಸ್ ಮಾಡಿದರೆ ಅಷ್ಟು ವಿದ್ಯಾರ್ಥಿಗಳಿಗೆ ಪಿಯು ಕಾಲೇಜುಗಳಲ್ಲಿ ಸೀಟ್ ಸಿಗಲಾರದು. ಬೇಡಿಕೆ ಜಾಸ್ತಿಯಾದರೆ ಕಾಲೇಜುಗಳೇ ಪರೀಕ್ಷೆ ನಡೆಸಿ ಪ್ರವೇಶ ನೀಡಬಹುದು. ಹೀಗಾಗಿ ಸೋಂಕು ನಿಯಂತ್ರಣಕ್ಕೆ ಬಂದ ಮೇಲೆ ಪರೀಕ್ಷೆ ನಡೆಸಬೇಕಾಗುತ್ತದೆ. ಇಲ್ಲ ಅಂದ್ರೆ ನೀಟ್, ಸಿಇಟಿ ವೇಳೆ ಮಕ್ಕಳಿಗೆ ತೊಂದರೆ ಆಗುತ್ತದೆ.
ಕರ್ನಾಟಕ ಸರ್ಕಾರದ ಈ ನಿರ್ಧಾರದ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಕಮೆಂಟ್ ಮಾಡಿ