ಬೆಂಗಳೂರು: ಮುಂದಿನ 4-5 ದಿನಗಳಲ್ಲಿ ರಾಜ್ಯದಲ್ಲಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಲಿದೆ.
ಶೀಘ್ರದಲ್ಲೇ ಮುಂಗಾರು ದುರ್ಬಲವಾಗುವ ಸಾಧ್ಯತೆಯಿದ್ದು, ನಂತರ ಮಳೆಯ ಅಬ್ಬರ ಇಳಿಮುಖವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
Advertisement
ರಾಜ್ಯದ ಮಲೆನಾಡು ಭಾಗದಲ್ಲಿ ಇಂದು ಕೊಂಚ ಮಳೆಯಾಗಲಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಧಿಕ ಮಳೆಯಾದರೆ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇದನ್ನೂ ಓದಿ : ಇಂದು ಅಥವಾ ನಾಳೆ ಸಂಪುಟ ರಚನೆ: ಸಿಎಂ ಬೊಮ್ಮಾಯಿ
Advertisement
Advertisement
ರಾಜಧಾನಿ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ದಾವಣಗೆರೆ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ
Advertisement
ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಮತ್ತು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ದಾವಣಗೆರೆ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲೂ ಸಹ ಸಾಧಾರಣ ಮಳೆಯಾಗಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ನಿರೀಕ್ಷೆ ಇದೆ.