ಬೆಂಗಳೂರು: ಇಂದು ಕರ್ನಾಟಕದಲ್ಲಿ 934 ಮಂದಿಗೆ ಕೊರೊನಾ ಬಂದಿದ್ದು, ಬೆಂಗಳೂರಿನಲ್ಲಿ 628 ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ.
ಆಸ್ಪತ್ರೆಯಿಂದ 609 ಜನ ಡಿಸ್ಚಾರ್ಜ್ ಆಗಿದ್ದಾರೆ. 3 ಜನ ಕೊರೊನಾಗೆ ಬಲಿಯಾಗಿದ್ದಾರೆ. ಇಂದು ರಾಜ್ಯಾದ್ಯಂತ ಒಟ್ಟು 11,021 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.
ಇಂದು ಚಾಮರಾಜನಗರ, ಚಿಕ್ಕಬಳ್ಳಾಪುರ ಮತ್ತು ರಾಮನಗರದಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,60,272ಕ್ಕೆ ಏರಿಕೆ ಆಗಿದೆ. ಈ ಪೈಕಿ 9,39,499 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 8,364 ಸಕ್ರಿಯ ಪ್ರಕರಣಗಳಿವೆ.
ಒಟ್ಟು ಇಲ್ಲಿಯವರೆಗೆ 12,390 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 125 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 4,397 ಆಂಟಿಜನ್ ಟೆಸ್ಟ್, 68,711 ಆರ್ಟಿ ಪಿಸಿಆರ್ ಸೇರಿದಂತೆ ಒಟ್ಟು 73,108 ಮಂದಿಗೆ ಪರೀಕ್ಷೆ ಮಾಡಲಾಗಿದೆ.
ಬೆಂಗಳೂರು ನಗರದಲ್ಲಿ 628 ಮಂದಿಗೆ ಸೋಂಕು ಬಂದಿದೆ. ಕಲಬುರಗಿ 43, ದಕ್ಷಿಣ ಕನ್ನಡ 40, ಮೈಸೂರು 30, ದಾರವಾಡ 20, ಮತ್ತು ತುಮಕೂರಿನಲ್ಲಿ 17 ಮಂದಿಗೆ ಸೋಂಕು ಬಂದಿದೆ. ಒಟ್ಟು 125 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 48, ಕಲಬುರಗಿ 17, ಬೀದರ್ 12, ಶಿವಮೊಗ್ಗ ಮತ್ತು ತುಮಕೂರಿನಲ್ಲಿ 5 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.