Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕ, ಕೇರಳ ಸಾರಿಗೆ ಹೆಸರಿನಲ್ಲಿ ಪೈಪೋಟಿ ಇಲ್ಲ – ಸವದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕ, ಕೇರಳ ಸಾರಿಗೆ ಹೆಸರಿನಲ್ಲಿ ಪೈಪೋಟಿ ಇಲ್ಲ – ಸವದಿ

Bengaluru City

ಕರ್ನಾಟಕ, ಕೇರಳ ಸಾರಿಗೆ ಹೆಸರಿನಲ್ಲಿ ಪೈಪೋಟಿ ಇಲ್ಲ – ಸವದಿ

Public TV
Last updated: June 3, 2021 1:11 pm
Public TV
Share
2 Min Read
Laxman Savadi 1
SHARE

– ಅಧಿಕೃತವಾಗಿ ತೀರ್ಪಿನಲ್ಲಿರುವ ಅಂಶ ತಿಳಿದು ಬಂದಿಲ್ಲ
– ಪೈಪೋಟಿಗೆ ಇಳಿದಿಲ್ಲ, ನಮಗೆ ಜನರ ಸೇವೆ ಮುಖ್ಯ

ಬೆಂಗಳೂರು: ಕರ್ನಾಟಕ ಮತ್ತು ಕೇರಳ ಸಾರಿಗೆ ವ್ಯವಸ್ಥೆಯ ಹೆಸರಿನಲ್ಲಿ ಪೈಪೋಟಿ ಏನು ಇಲ್ಲ ಎಂದು ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಕರ್ನಾಟಕ – ಕೇರಳ ಸಾರಿಗೆಯಲ್ಲಿ ಪೈಪೋಟಿ ಏನಿಲ್ಲ

ಕೇರಳವು `ಕೆಎಸ್‍ಆರ್ಟಿಸಿ’ ಎಂಬ ಶಬ್ದವನ್ನು ತಾವೇ ಮೊದಲು ಬಳಸಿದ್ದರಿಂದ ಕರ್ನಾಟಕವು ಈ ಶಬ್ದವನ್ನು ಬಳಸಬಾರದು ಎಂದು ತಕರಾರು ತೆಗೆದ ಬಗ್ಗೆ ಈಗ ಟ್ರೇಡ್ಮಾರ್ಕ್ ರಜಿಸ್ಟ್ರಿಯು ತೀರ್ಪು ನೀಡಿದೆ ಎಂದು ಮಾಧ್ಯಮಗಳ ವರದಿಯ ಮೂಲಕ ತಿಳಿದುಬಂದಿದೆ.

(1/n) pic.twitter.com/tFFc5z2fzW

— Laxman Savadi (@LaxmanSavadi) June 3, 2021

ಟ್ರೇಡ್‍ಮಾರ್ಕ್ ರಿಜಿಸ್ಟ್ರಿ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಮೂಲಕ ತಿಳಿಸಿದ ಸವದಿ, ನಮ್ಮದು ಒಕ್ಕೂಟ ವ್ಯವಸ್ಥೆ ಎಂದರೆ ಫೆಡರಲ್ ಸಿಸ್ಟಮ್. ಒಂದು ರಾಜ್ಯವು ಮತ್ತೊಂದು ರಾಜ್ಯದ ಜೊತೆಗೆ ಯಾವುದೇ ಸಂಘರ್ಷವಿಲ್ಲದೆ ಸೌಹಾರ್ದಯುತವಾಗಿ ಸಂಬಂಧವನ್ನು ಇಟ್ಟುಕೊಂಡು ಹೋಗಬೇಕೆಂದು ಈ ಫೆಡರಲ್ ಸಿಸ್ಟಮ್ ಹೇಳುತ್ತದೆ ಎಂದಿದ್ದಾರೆ. ಇದನ್ನೂ ಓದಿ: KSRTC ಟ್ರೇಡ್ ಮಾರ್ಕ್ ಕೇರಳಕ್ಕೆ ಸೇರಿದ್ದು – ಟ್ರೇಡ್ ಮಾರ್ಕ್ ಅಥಾರಿಟಿ ಆಫ್ ಇಂಡಿಯಾದಿಂದ ಆದೇಶ

ಹೇಳಿಕೆಯಲ್ಲಿ ಏನಿದೆ?
ಕೇರಳವು ಕೆಎಸ್ಆರ್‌ಟಿಸಿ ಎಂಬ ಶಬ್ದವನ್ನು ತಾವೇ ಮೊದಲು ಬಳಸಿದ್ದರಿಂದ ಕರ್ನಾಟಕವು ಈ ಶಬ್ದವನ್ನು ಬಳಸಬಾರದು ಎಂದು ತಕರಾರು ತೆಗೆದ ಬಗ್ಗೆ ಈಗ ಟ್ರೇಡ್‍ಮಾರ್ಕ್ ರಿಜಿಸ್ಟ್ರಿಯು ತೀರ್ಪು ನೀಡಿದೆ ಎಂದು ಮಾಹಿತಿ ಬಂದಿದೆ. ಆದರೆ ಈ ತೀರ್ಪಿನಲ್ಲಿ ಏನಿದೆ ಎಂಬ ಅಂಶವು ನಮಗೆ ಅಧಿಕೃತವಾಗಿ ಇನ್ನೂ ಬಂದಿಲ್ಲ, ಅದು ಲಭ್ಯವಾದ ನಂತರ ಕರ್ನಾಟಕ ರಾಜ್ಯದ ಮುಂದಿನ ನಿಲುವು ಮತ್ತು ಕಾನೂನು ಹೋರಾಟ ಏನು ಎಂಬುದರ ಬಗ್ಗೆ ತೀರ್ಮಾನಿಸಲಾಗುವುದು.

kerala ksrtc medium

ನಮ್ಮದು ಒಕ್ಕೂಟ ವ್ಯವಸ್ಥೆ ಎಂದರೆ ಫೆಡರಲ್ ಸಿಸ್ಟಮ್. ಒಂದು ರಾಜ್ಯವು ಮತ್ತೊಂದು ರಾಜ್ಯದ ಜೊತೆಗೆ ಯಾವುದೇ ಸಂಘರ್ಷವಿಲ್ಲದೆ ಸೌಹಾರ್ದಯುತವಾಗಿ ಸಂಬಂಧವನ್ನು ಇಟ್ಟುಕೊಂಡು ಹೋಗಬೇಕೆಂದು ಈ ಫೆಡರಲ್ ಸಿಸ್ಟಮ್ ಹೇಳುತ್ತದೆ. ಆದರೆ ದುರದೃಷ್ಟವಶಾತ್ ಈ ವಿವಾದ ಅನಗತ್ಯವಾಗಿ ಎದ್ದಿದೆ. ಏಕೆಂದರೆ ಖಾಸಗಿ ಸಂಸ್ಥೆಗಳಲ್ಲಾದರೆ ಈ ರೀತಿಯ ಹೆಸರು ಅಥವಾ ಟ್ರೇಡ್‍ಮಾರ್ಕ್ ಗಳಿಂದ ಅವರ ವ್ಯವಹಾರ ಮತ್ತು ಲಾಭಗಳ ಮೇಲೆ ಪ್ರಭಾವ ಬೀಳುತ್ತದೆ. ಆದರೆ ಸರ್ಕಾರಿ ಸಂಸ್ಥೆಗಳು ಹಾಗಲ್ಲ. ಇಲ್ಲಿ ಜನರ ಸೇವೆಯ ಮುಖ್ಯ.

KSRTC copy

ಕರ್ನಾಟಕವಾಗಲಿ, ಕೇರಳವಾಗಲಿ ಪರಸ್ಪರ ಸಾರಿಗೆ ಕ್ಷೇತ್ರದಲ್ಲಿ ಲಾಭಗಳಿಸುವ ಮೇಲಾಟಕ್ಕೆ ಅಥವಾ ಸ್ಪರ್ಧೆಗೆ ಮುಂದಾಗದೆ ಸಾರ್ವಜನಿಕರ ಹಿತಾಸಕ್ತಿ ಮತ್ತು ಸೇವೆಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿವೆ. ಹೀಗಾಗಿ ಈ ವಿಷಯವನ್ನು ಯಾವುದೇ ರಾಜ್ಯಗಳು ಪ್ರತಿಷ್ಠೆಯ ವಿಷಯವನ್ನಾಗಿ ಮಾಡಿಕೊಳ್ಳಬಾರದು.

KSRTC BUS

ಇದು ಕೇರಳಕ್ಕೆನು ಸಂಭ್ರಮಪಡುವಂತ ವಿಚಾರವೇನಲ್ಲ. ಕರ್ನಾಟಕದಲ್ಲಿ ಕೆಎಸ್ಆರ್‌ಟಿಸಿ ಎಂಬ ಹೆಸರಿದ್ದರೆ, ಅದರಿಂದ ಕೇರಳ ರಾಜ್ಯದ ಕೆಎಸ್ಆರ್‌ಟಿಸಿ ಸಂಸ್ಥೆಗೆ ಯಾವುದೇ ನಷ್ಟವೇನಿಲ್ಲ. ಕರ್ನಾಟಕವು ಕೇರಳದ ಸಾರಿಗೆ ಸಂಸ್ಥೆಗಳೊಂದಿಗೆ ಯಾವತ್ತೂ ಪೈಪೋಟಿಗೆ ಇಳಿದ್ದಿಲ್ಲ ಎಂಬುದನ್ನು ಕೇರಳ ಮೊದಲು ಅರ್ಥಮಾಡಿಕೊಳ್ಳಬೇಕು. ಇಂತಹ ವಿಷಯಗಳಲ್ಲಿ ಅನಗತ್ಯವಾಗಿ ವಿವಾದಗಳನ್ನು ಹೆಚ್ಚು ಮಾಡುತ್ತಾ ಪರಸ್ಪರ ರಾಜ್ಯಗಳಲ್ಲಿ ವಿವಾದಗಳನ್ನು ಬೆಳೆಸುವ ಪರಿಪಾಠಕ್ಕೆ ನಾವೆಲ್ಲರೂ ಅಂತ್ಯ ಹಾಡಬೇಕು. ದೇಶದ ಹಿತದೃಷ್ಟಿಯಿಂದ ರಾಜ್ಯ ರಾಜ್ಯಗಳ ನಡುವಿನ ಬಾಂಧವ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳುವುದು ಬಹಳ ಮುಖ್ಯವಾದ ವಿಷಯ ಎಂದಿದ್ದಾರೆ.

 

TAGGED:buskarnatakakeralaksrtcLaxman SavadiNamePublic TVಕರ್ನಾಟಕಕೆಎಸ್‍ಆರ್‍ಟಿಸಿಕೇರಳಪಬ್ಲಿಕ್ ಟಿವಿಲಕ್ಷ್ಮಣ್ ಸವದಿಸಾರಿಗೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
45 minutes ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
45 minutes ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
57 minutes ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
1 hour ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
1 hour ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?