ಕಲಬುರಗಿ: ಆಕ್ಸಿಜನ್ ಕೊರತೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಕೊರೊನಾ ಸೋಂಕಿತರು ಸಾವನ್ನಪ್ಪಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.
Advertisement
ನಗರ ಕೆಬಿಎನ್ (ಖ್ವಾಜಾ ಬಂದೇನವಾಜ್) ಆಸ್ಪತ್ರೆಯಲ್ಲಿ ಈ ದುರ್ಘಟನೆ ನಡೆದಿದೆ. ಇಂದು ಸಂಜೆಯಿಂದ ಆಕ್ಸಿಜನ್ ಕೊರತೆಯಿಂದ ಸೋಂಕಿತರು ಪರದಾಟ ನಡೆಸಿದ್ದರು. ಹೀಗಾಗಿ ಪ್ರಾಣವಾಯು ಸಿಗದ ಹಿನ್ನೆಲೆ ನಾಲ್ವರು ಕೋವಿಡ್ ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಆಸ್ಪತ್ರೆಯಲ್ಲಿದ್ದ ಇನ್ನುಳಿದ ರೋಗಿಗಳನ್ನ ಮತ್ತೊಂದು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
Advertisement
Advertisement
ದೆಹಲಿಯ ಬಾತ್ರಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 12 ಕೋವಿಡ್ ರೋಗಿಗಳು ಸಾವನ್ನಪ್ಪಿದ್ದರು. ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇಲ್ಲ, ಬೆಡ್ ಸಮಸ್ಯೆ ಇಲ್ಲ ಅಂತ ಸಚಿವರು ಹೇಳುತ್ತಿದ್ದಾರೆ.
Advertisement
ಇಂದು ಕರ್ನಾಟಕದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ ಒಟ್ಟು 40,990 ಮಂದಿಗೆ ಕೊರೊನಾ ಬಂದಿದ್ದು, ರಾಜ್ಯಾದ್ಯಂತ ಒಟ್ಟು 271 ಜನ ಕೊರೊನಾಗೆ ಬಲಿಯಾಗಿದ್ದಾರೆ. ಕಲಬುರಗಿಯಲ್ಲಿ ಇವತ್ತು 1,407 ಜನಕ್ಕೆ ಸೋಂಕು ತಗುಲಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ 8,988 ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.