ಕಲಬುರಗಿಯಲ್ಲಿ ಮತ್ತೆ ಒಂದು ವಾರ ಲಾಕ್

Public TV
1 Min Read
Kalaburagi Bus Stand 1

ಕಲಬುರಗಿ: ಕೊರೋನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಜು.14 ರಿಂದ 20 ವರೆಗೆ ಕಲಬುರಗಿ ನಗರ & ಜಿಲ್ಲೆಯ ನಗರ-ಸ್ಥಳೀಯ ಸಂಸ್ಥೆಗಳ ಪ್ರದೇಶದಲ್ಲಿ ವಿಧಿಸಲಾಗಿದ್ದ ಸಂಪೂರ್ಣ ಲಾಕ್‍ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ರವಿವಾರ ಆದೇಶ ಹೊರಡಿಸಿದ್ದಾರೆ.

Kalaburgi Lock Down 3

ಲಾಕ್‍ಡೌನ್ ಸಂದರ್ಭದಲ್ಲಿ ಅನುಮತಿಸಲಾದ ಚಟುವಟಿಕೆಗಳು ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ತೆರೆದು ಮುಚ್ಚತಕ್ಕದು. ಆಸ್ಪತ್ರೆ ಮತ್ತು ಔಷಧಿ ಅಂಗಡಿಗಳಿಗೆ ಈ ಸಮಯದ ನಿರ್ಬಂಧ ಅನ್ವಯವಾಗುವುದಿಲ್ಲ. ಅಲ್ಲದೆ ಭಾನುವಾರದ ಲಾಕ್ ಡೌನ್ ಗೂ ಈ ಆದೇಶ ಅನ್ವಯಿಸುವುದಿಲ್ಲ ಎಂದು ಡಿ.ಸಿ.ಶರತ್ ಬಿ. ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

Kalaburagi B Sharath

ಕಲಬುರಗಿಯಲ್ಲಿ ಭಾನುವಾರ 69 ಹೊಸ ಕೊರೊನ ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,743ಕ್ಕೆ ಏರಿಕೆಯಾಗಿದೆ. ಭಾನುವಾರ 80 ಜನ ಡಿಸ್ಚಾರ್ಜ್ ಆಗಿದ್ದು, ಜಿಲ್ಲೆಯಲ್ಲಿ 926 ಸಕ್ರಿಯ ಪ್ರಕರಣಗಳಿವೆ. ನಿನ್ನೆ ಮೂವರನ್ನು ಕೊರೊನಾ ಬಲಿ ಪಡೆದಿದ್ದು, ಜಿಲ್ಲೆಯಲ್ಲಿ ಕೋವಿಡ್ ನಿಂದ ಮರಣ ಹೊಂದಿದವರ ಸಂಖ್ಯೆ 46ಕ್ಕೇರಿಕೆಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *