– ಹಾಸನದಲ್ಲಿ ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ
ಹಾಸನ: ಜಿಲ್ಲೆಯಲ್ಲಿ ಇಂದು ಒಂದೇ ದಿನ 96 ಜನರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಕಳೆದ 24 ಗಂಟೆಯಲ್ಲಿ ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ.
ಇಂದಿನ 96 ಪಾಸಿಟಿವ್ ಪ್ರಕರಣಗಳು ಸೇರಿ ಹಾಸನದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಕೋವಿಡ್ ಸೋಂಕಿನಿಂದ ಮೃತರಾದವರ ಸಂಖ್ಯೆ 33ಕ್ಕೇರಿದೆ.
ಇಂದು ಪಾಸಿಟಿವ್ ಬಂದ 96 ಜನರಲ್ಲಿ ಸುಮಾರು 18 ಜನ ಬೆಂಗಳೂರು ಟ್ರಾವೆಲ್ ಹಿಸ್ಟರಿಯನ್ನು ಹೊಂದಿದ್ದಾರೆ. ಹಾಸನದಲ್ಲಿ ಇದುವರೆಗೂ 1,049 ಪಾಸಿಟಿವ್ ಪಾಸಿಟಿವ್ ಪ್ರಕರಣಗಳು ದೃಢವಾಗಿದ್ದು, ಇದರಲ್ಲಿ 584 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 432 ಸಕ್ರಿಯ ಪ್ರಕರಣಗಳಿದ್ದು, ಎಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.