– ಸಂತ್ರಸ್ತೆ ಮೃತಪಟ್ಟಿದ್ದಾಳೆಂದು ನಂಬಿ ಆರೋಪಿ ಎಸ್ಕೇಪ್
– ಸಿಸಿಟಿವಿ ಮೂಲಕ ಸಿಕ್ಕಿಬಿದ್ದ
ನವದೆಹಲಿ: ಕಳ್ಳತನ ಮಾಡಲು ಬಂದಿದ್ದ ವ್ಯಕ್ತಿಯೊಬ್ಬ ಮಹಿಳಾ ವಕೀಲೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ಜಂಗ್ಪುರದಲ್ಲಿ ನಡೆದಿದೆ.
ಆರೋಪಿಯನ್ನು ಸೋನು ಎಂದು ಗುರುತಿಸಲಾಗಿದೆ. ಆರೋಪಿ ಕಳ್ಳತನ ಮಾಡುವ ಉದ್ದೇಶದಿಂದ ಸಂತ್ರಸ್ತೆ ಮನೆಗೆ ನುಗ್ಗಿದ್ದಾನೆ. ಈ ವೇಳೆ ಸಂತ್ರಸ್ತೆ ಮನೆಯಲ್ಲಿ ಒಬ್ಬಳೇ ಇರುವುದನ್ನು ನೋಡಿ ಕೂಗಾಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement
ಅತ್ಯಾಚಾರದ ನಂತರ ಆರೋಪಿ ಸಂತ್ರಸ್ತೆಯ ಕತ್ತು ಹಿಸುಕಿದ್ದಾನೆ. ಆಗ ಸಂತ್ರಸ್ತೆ ಪ್ರಜ್ಞೆ ತಪ್ಪಿದ್ದಾರೆ, ಇದನ್ನು ನೋಡಿ ಸೋನು ಮಹಿಳೆ ಮೃತಪಟ್ಟಿದ್ದಾಳೆ ಎಂದು ಅಲ್ಲಿಂದ ಪರಾರಿಯಾಗಿದ್ದಾನೆ. ಆದರೆ ಸಂತ್ರಸ್ತೆಗೆ ಪ್ರಜ್ಞೆ ಬಂದ ನಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಆ ಪ್ರದೇಶದಲ್ಲಿ ಸಿಸಿಟಿವಿಯನ್ನು ಪರಿಶೀಲನೆ ಮಾಡಿದಾಗ ಆರೋಪಿ ಸೋನು ಸಿಕ್ಕಿಬಿದ್ದಿದ್ದಾನೆ.
Advertisement
ಕಳ್ಳತನ ಮಾಡುವ ಉದ್ದೇಶದಿಂದ ನಾನು ಮಹಿಳೆಯ ಮನೆಗೆ ಹೋಗಿದ್ದೆ ಎಂದು ಆರೋಪಿ ಸೋನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.
Advertisement
ಕಳ್ಳತನ ಮಾಡಲು ಹೋದಾಗ ಸಂತ್ರಸ್ತೆ ಒಬ್ಬರೇ ಇರುವುದನ್ನು ನೋಡಿ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ನಂತರ ಮಹಿಳೆಯ ಕತ್ತು ಹಿಸುಕಿದ್ದಾನೆ. ಆಗ ಮಹಿಳೆ ಪ್ರಜ್ಞೆ ತಪ್ಪಿದ್ದಾರೆ. ಆದರೆ ಮಹಿಳೆ ಮೃತಪಟ್ಟಿದ್ದಾಳೆ ಎಂದು ಆರೋಪಿ ಆಕೆಯ ಡೆಬಿಟ್ ಕಾರ್ಡ್, ಮನೆಯಲ್ಲಿದ್ದ ನಗದು ಮತ್ತು ಕೆಲವು ವಸ್ತುಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾನೆ ಎಂದು ಇನ್ಸ್ಪೆಕ್ಟರ್ ತಿಳಿಸಿದ್ದಾರೆ.
ಆರೋಪಿ ಸೋನು ದೆಹಲಿಯ ತೈಮೂರ್ ನಗರ ನಿವಾಸಿಯಾಗಿದ್ದು, ಈತನ ವಿರುದ್ಧ ಹಳೆಯ ಕ್ರಿಮಿನಲ್ ದಾಖಲೆ ಕೂಡ ಇದೆ. ಇದೀಗ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಬಂಧಿಸಿದ್ದಾರೆ.