– ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಒಟ್ಟು 74.81 ಲಕ್ಷ ರೂ. ಜಪ್ತಿ
ಬೆಂಗಳೂರು: ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂತೆ ಕಂತೆ ನೋಟುಗಳು ಸಿಕ್ಕಿದ್ದು, ಸಿಐಎಸ್‍ಎಫ್ ಪೊಲೀಸರು ಭರ್ಜರಿ ಬೇಟೆ ನಡೆಸಿ, ಕಸ್ಟಮ್ಸ್ ಅಧಿಕಾರಿಯನ್ನು ಬಲೆಗೆ ಕೆಡವಿದ್ದಾರೆ.
Advertisement
ಸಿಐಎಸ್‍ಎಫ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಸ್ಟಮ್ಸ್ ಅಧಿಕಾರಿ ಇರ್ಫಾನ್ ಅಹಮದ್ ಮಹಮದ್ ಸಿಕ್ಕಿಬಿದ್ದಿದ್ದಾರೆ. ಅಧಿಕಾರಿಯಿಂದ ಸೂಟ್ ಕೇಸ್, ಬ್ಯಾಗ್ ನಲ್ಲಿದ್ದ ಒಟ್ಟು 74,81,500 ರೂ.ಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ ಬೆಲೆ ಬಾಳುವ ಮೊಬೈಲ್, ಆಪಲ್ ವಾಚ್ ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
Advertisement
Advertisement
ಪರಿಶೀಲನೆ ವೇಳೆ ಕಂತೆ ಕಂತೆ ಹಣ ಪತ್ತೆಯಾಗಿದ್ದು, ಸಿಐಎಸ್‍ಎಫ್ ಪೊಲೀಸರು ಬೆರಗಾಗಿದ್ದಾರೆ. ಹಣವನ್ನು ವಶಪಡಿಸಿಕೊಳ್ಳುವುದನ್ನು ನೋಡುತ್ತಿದ್ದಂತೆ ಸಿಐಎಸ್‍ಎಫ್ ಅಧಿಕಾರಿಗಳ ಪರಿಶೀಲನೆ ವೇಳೆ ಕಸ್ಟಮ್ಸ್ ಅಧಿಕಾರಿಯ ಪತ್ನಿ ಬಾತ್ ರೂಂ ನಲ್ಲಿ ಕಂತೆ ಕಂತೆ ನೋಟುಗಳನ್ನು ಬಿಸಾಡಿದ್ದಾರೆ. ಅಧಿಕಾರಿಯ ಪತ್ನಿ ಬಾತ್ ರೂಂ ನಲ್ಲಿ 10 ಲಕ್ಷ ರೂ. ಬಿಸಾಡಿರುವುದು ಪತ್ತೆಯಾಗಿದೆ.
Advertisement
ಪ್ರಕರಣವನ್ನು ಐಟಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದ್ದು, ಕಸ್ಟಮ್ಸ್ ಅಧಿಕಾರಿ ಚೆನ್ನೈ ನಲ್ಲಿ ವಾಸ ಮಾಡುತ್ತಿದ್ದಾರೆ. ಚೆನ್ನೈನಿಂದ ಲಕ್ನೋಗೆ ತೆರಳಲು ಬೆಂಗಳೂರಿಗೆ ಬಂದಿದ್ದರು. ತಪಾಸಣೆ ವೇಳೆ ಅಧಿಕಾರಿ ಸಿಕ್ಕಿಬಿದ್ದಿದ್ದಾನೆ.