ಬೆಂಗಳೂರು: ರಾಜರಾಜೇಶ್ವರಿ ಉಪಚುನಾವಣೆ ದಿನಾಂಕ ಪ್ರಕಟವಾದ ಬಳಿಕ ರಾಜಕೀಯ ಚಟುವಟಿಕೆ ಜೋರಾಗಿದ್ದು ಇಂದು ಹನುಮಂತ ರಾಯಪ್ಪ ಹಾಗೂ ಪುತ್ರಿ ಕುಸುಮಾ ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿನ ಡಿಕೆ ಶಿವಕುಮಾರ್ ಕಚೇರಿಯಲ್ಲಿ ಕಾರ್ಯಕ್ರಮದಲ್ಲಿ ಇಬ್ಬರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಯಲ್ಲಿ ಪಕ್ಷ ಸೇರ್ಪಡೆ ವೇದಿಕೆ ಕಾರ್ಯಕ್ರಮ ರದ್ದುಗೊಳಿಸಿ ಸರಳವಾಗಿ ಈ ಕಾರ್ಯಕ್ರಮ ನಡೆಯಿತು.
Advertisement
ಕೆಪಿಸಿಸಿ ಅಧ್ಯಕ್ಷರ ಕಚೇರಿಯಲ್ಲಿ ಸದಸ್ಯತ್ವ ಸ್ವೀಕರಿಸುವ ಮೂಲಕ ಸರಳವಾಗಿ ಅಪ್ಪ, ಮಗಳು ಪಕ್ಷ ಸೇರ್ಪಡೆಯಾದರು. ಈ ವೇಳೆ ಸಿದ್ದರಾಮಯ್ಯ, ಪರಮೇಶ್ವರ್ ಉಪಸ್ಥಿತರಿದ್ದರು.
Advertisement
Advertisement
ಆರ್‌ಆರ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಆದರೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲ.
Advertisement
ಈ ಸಂದರ್ಭದಲ್ಲೇ ಶಿರಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ನ ಸಾಕಷ್ಟು ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರವಿಕುಮಾರ್ ಸೇರ್ಪಡೆಯಾಗಿದ್ದಾರೆ. ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ, ಕೆ.ಎನ್.ರಾಜಣ್ಣ ಉಪಸ್ಥಿತರಿದ್ದರು. ಆರ್.ಆರ್ ನಗರ, ಶಿರಾದಲ್ಲಿ ನವೆಂಬರ್ 3ಕ್ಕೆ ಮತದಾನ ನಡೆಯಲಿದ್ದರೆ 10ರಂದು ಫಲಿತಾಂಶ ಪ್ರಕಟವಾಗಲಿದೆ.
ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ದೆಹಲಿಗೆ ಇಂದು ಅಭ್ಯರ್ಥಿ ಪಟ್ಟಿಯನ್ನು ಶಿಫಾರಸು ಮಾಡುತ್ತೇವೆ. ನಾವು ಟಿಕೆಟ್ ಕೊಡಲ್ಲ. ಹೈಕಮಾಂಡ್ ಟಿಕೆಟ್ ಪ್ರಕಟಿಸುತ್ತದೆ. ಶಿರಾ, ರಾಜರಾಜೇಶ್ವರಿ ನಗರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಟಿಕೆಟ್ ಅಂತಿಮ ಆಗುತ್ತದೆ. ಶಿರಾ ಕ್ಷೇತ್ರದಲ್ಲಿ ಈ ಹಿಂದೆ ಜಯಚಂದ್ರ 10 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಇಡೀ ಜಿಲ್ಲೆಯ ನಾಯಕರು ಒಂದಾಗಿದ್ದಾರೆ.ರಾಜ್ಯ ಸರ್ಕಾರದ ಕಾರ್ಯಕ್ರಮ ಮತ್ತು ಆಗ್ತಿರುವ ಬೆಳವಣಿಗೆ ನೋಡಿದ್ದೇವೆ. ಮುಂದೆ ಕಾಂಗ್ರೆಸ್ ಮಾತ್ರ ಅನಿವಾರ್ಯ ಎಂದು ತಿಳಿದು ಶಿರಾ ತಾಲ್ಲೂಕಿನ ಹಲವು ಮುಖಂಡರು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ ಎಂದು ತಿಳಿಸಿದರು.