ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಸಂಜೆ 7 ಗಂಟೆ ಸುಮಾರಿಗೆ ರೊಟೀನ್ ಚೆಕ್-ಅಪ್‍ಗಾಗಿ ಸೋನಿಯಾ ಅವರು ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯ ಡಾ. ಡಿಎಸ್ ರಾಣಾ ತಿಳಿಸಿದ್ದಾರೆ.
Advertisement
Congress President Sonia Gandhi (in file pic) admitted today at 7 pm to Sir Ganga Ram Hospital. She has been admitted for routine tests and investigations. Her condition is currently stable: Dr D.S. Rana, Chairman (Board of Management), Sir Ganga Ram Hospital, Delhi pic.twitter.com/uldUxfLCJV
— ANI (@ANI) July 30, 2020
Advertisement
ಇಂದು ಬೆಳಗ್ಗೆಯಷ್ಟೇ ಪಕ್ಷದ ರಾಜ್ಯಸಭಾ ಸದಸ್ಯರೊಂದಿಗೆ ಪ್ರಸ್ತುತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಿದ್ದರು. ಈ ಸಭೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ನಡೆದಿದ್ದು, ಸಭೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಮತ್ತಿತರ ಪ್ರಮುಖ ನಾಯಕರು ಕೂಡ ಭಾಗಿಯಾಗಿದ್ದರು.
Advertisement
ಕಳೆದ ವರ್ಷ ಸೋನಿಯಾ ಗಾಂಧಿ ಅವರು ಅಮೆರಿಕದಲ್ಲಿ ಚಿಕಿತ್ಸೆ ಪಡೆದು ವಾಪಸ್ಸಾಗಿದ್ದರು. ನಂತರ ಫೆಬ್ರವರಿಯಲ್ಲಿ ಕೂಡ ಅವರು ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. 2018ರಲ್ಲಿ ಉಸಿರಾಟದ ಸಮಸ್ಯೆ ಕಾರಣಕ್ಕೆ ಸೋನಿಯಾ ಗಾಂಧಿ ಅವರನ್ನು ಇದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Advertisement
ಅನಾರೋಗ್ಯದ ಹಿನ್ನೆಲೆಯಲ್ಲಿ 2017ರಲ್ಲಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ರಾಜೀನಾಮೆ ನಿಡಿದ್ದರು. ಆದರೆ 2019ರ ಮೇ ತಿಂಗಳಲ್ಲಿ ನಡೆದ ಲೋಕಸಭಾ ಚುನಾವಣೆಯ ನಂತರ ಪುತ್ರ ರಾಹುಲ್ ಗಾಂಧಿ ಹುದ್ದೆಯಿಂದ ಹಿಂದೆ ಸರಿಯಬೇಕಾಯಿತು. ಹೀಗಾಗಿ ಸೋನಿಯಾ ಗಾಂಧಿ ಮತ್ತೆ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ.